ಮಡಿಕೇರಿ, ಜ. ೭: ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ೨೦೨೧-೨೨ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಸರ್ಕಾರಿ/ ಖಾಸಗಿ ಅನುದಾನಿತ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಸಿಗದೆ ಇರುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಸೇವಾ ಸಿಂಧು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಲು ಸೂಚಿಸಿದೆ. ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಿದ ನಂತರ ದಾಖಲಾತಿಗಳೊಂದಿಗೆ ಕಚೇರಿಗೆ ಸಲ್ಲಿಸಲು ಸೂಚಿಸಿದೆ. ಅರ್ಜಿ ಸಲ್ಲಿಸಲು ತಾ. ೧೦ ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್‌ಸೈಟ್ hಣಣಠಿs://ಜom.ಞಚಿಡಿಟಿಚಿಣಚಿಞಚಿ.gov.iಟಿ/ಞoಜಚಿgu/ಠಿubಟiಛಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮಾಹಿತಿ ಕೇಂದ್ರ ಮೌಲಾನಾ ಅಜಾದ್ ಭವನ, ಎಫ್‌ಎಂಸಿ. ಕಾಲೇಜು ಹತ್ತಿರ, ಕೊಡಗು ಜಿಲ್ಲೆ, ಮಡಿಕೇರಿ. ಕಚೇರಿ ದೂರವಾಣಿ ಸಂಖ್ಯೆ: ೦೮೨೭೨-೨೨೫೫೨೮/ ೨೨೦೨೧೪ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.