ಮಡಿಕೇರಿ, ಜ. ೭ : ಕೊಡಗು ಜಿಲ್ಲಾ ಕಾಂಗ್ರೆಸ್ ಸೇವಾದಳದ ಜಿಲ್ಲಾ ಅಧ್ಯಕ್ಷರಾಗಿ ಮಡಿಕೇರಿಯ ಕಾನೆಹಿತ್ಲು ಮೊಣ್ಣಪ್ಪ ಅವರು ಆಯ್ಕೆಯಾಗಿದ್ದಾರೆ. ಕೆ.ಪಿ.ಸಿ.ಸಿ. ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿರ್ದೇಶನದಂತೆ ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀ ಅಹಮದ್ ಹಾಗೂ ಕಾಂಗ್ರೆಸ್ ಸೇವಾದಳದ ರಾಜ್ಯಾಧ್ಯಕ್ಷ ರಾಮಚಂದ್ರ ಎಂ. ಅವರು ಇವರನ್ನು ಆಯ್ಕೆ ಮಾಡಿದ್ದಾರೆ. ಕೆ.ಪಿ.ಸಿ.ಸಿ. ಕಚೇರಿಯಲ್ಲಿ ಮೊಣ್ಣಪ್ಪ ಅವರಿಗೆ ಪ್ರಮುಖರು ಆದೇಶ ಪತ್ರ ನೀಡಿದರು.