ಮಡಿಕೇರಿ, ಜ. ೭: ರಾಜ್ಯ ಸರಕಾರ ಮಂಡಿಸಿರುವ ಮತಾಂತರ ನಿಷೇಧ ಕಾಯ್ದೆಯನ್ನು ತಕ್ಷಣ ಕೈಬಿಡಬೇಕೆಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕÀ ಒತ್ತಾಯಿಸಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕÀದ ಜಿಲ್ಲಾಧ್ಯಕ್ಷ ಎಂ.ಎ. ಉಸ್ಮಾನ್ ಮತಾಂತರ ನಿಷೇಧ ಕಾಯ್ದೆ ದುರುಪಯೋಗವಾಗುವ ಸಾಧ್ಯತೆಗಳೇ ಹೆಚ್ಚಾಗಿದ್ದು, ಒಪ್ಪಿಗೆಯ ವಿವಾಹ ಸಮಾರಂಭಗಳ ಮೇಲೂ ದಾಳಿಯಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಬಲವಂತದ ಮತಾಂತರದ ವಿರುದ್ಧ ವಿವಿಧ ಸೆಕ್ಷನ್ಗಳಡಿ ಶಿಕ್ಷೆಗಳನ್ನು ಈಗಾಗಲೇ ಕಾನೂನಿನಲ್ಲಿ ಅಳವಡಿಸಲಾಗಿದೆ.
ಆದರೆ ವಿನಾಕಾರಣ ಜನರಲ್ಲಿ ಗೊಂದಲ ಸೃಷ್ಟಿಸಲು ಮತ್ತು ಭಯ ಮೂಡಿಸಲು ಮತಾಂತರ ನಿಷೇಧ ಕಾಯ್ದೆ ಎನ್ನುವ ಹಣೆ ಪಟ್ಟಿಯನ್ನು ಕಟ್ಟಲಾಗಿದೆ. ಈಗಾಗಲೇ ಚರ್ಚ್ ಮತ್ತು ಪ್ರಾರ್ಥನಾ ಮಂದಿರಗಳ ಮೇಲಿನ ದಾಳಿಯಿಂದ ಆತಂಕದ ವಾತಾವರಣ ಮೂಡಿದೆ. ಇದೀಗ ಮತ್ತೊಂದು ಅಸ್ತç ಬಳಸಿ ಅಲ್ಪಸಂಖ್ಯಾತರನ್ನು ಭಯದಲ್ಲಿ ಮುಳುಗಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಕಾಯ್ದೆಯನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆಗಳಿದೆ. ಯಾವ ಧರ್ಮವೂ ಬಲವಂತದ ಮತಾಂತರಕ್ಕೆ ಮುಂದಾಗುತ್ತಿಲ್ಲ, ತಮ್ಮ ಇಚ್ಛೆಯಂತೆ ಧರ್ಮ ಸ್ವೀಕಾರ ವಾಗುತ್ತಿದ್ದು, ಇದಕ್ಕೆ ಬೇರೆಯದೇ ಅರ್ಥ ಕಲ್ಪಿಸುತ್ತಿರುವುದು ರಾಜಕೀಯ ಷಡ್ಯಂತ್ರವಾಗಿದೆ ಎಂದು ಉಸ್ಮಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಯ್ದೆಯನ್ನು ತಕ್ಷಣ ಹಿಂದಕ್ಕೆ ಪಡೆಯಬೇಕೆಂದು ಸಮಸ್ತ ಅಲ್ಪಸಂಖ್ಯಾತರು ಒತ್ತಾಯಿಸುತ್ತಿದ್ದೇವೆ. ಸರಕಾರ ನಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ ಬೃಹತ್ ಹೋರಾಟವನ್ನು ರೂಪಿಸ ಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.