ಮಡಿಕೇರಿ, ಜ. ೬: ಪ್ರಧಾನಿ ಮೋದಿ ಅವರ ಭದ್ರತೆ ವಿಚಾರದಲ್ಲಿ ಲೋಪವೆಸಗಿದ ಪಂಜಾಬ್ ಸರಕಾರದ ವಿರುದ್ಧ ನಗರ ಬಿ.ಜೆ.ಪಿ. ಯುವ ಮೋರ್ಚಾ ವತಿಯಿಂದ ನಗರದ ಜ. ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪಂಜಾಬ್ನಲ್ಲಿ ಅಧಿಕಾರ ದಲ್ಲಿರುವ ಕಾಂಗ್ರೆಸ್ ಸರಕಾರ ಉದ್ದೇಶ ಪೂರ್ವಕವಾಗಿ ಭದ್ರತೆಯ ಲೋಪವೆಸಗಿದೆ ಎಂದು ಪ್ರತಿಭಟನಾ ನಿರತರು ಆರೋಪಿಸಿದರು. ಪಂಜಾಬ್ ಸರಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಮಡಿಕೇರಿ ನಗರ ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ನವೀನ್ ಪೂಜಾರಿ, ಪದಾಧಿಕಾರಿಗಳಾದ ವಿಘ್ನೇಶ್, ಜಗದೀಶ್, ವಿವೇಕ್ ನರೇನ್, ಅರುಣ್, ಜಿಲ್ಲಾ ಬಿಜೆಪಿ ವಕ್ತಾರ ಮಹೇಶ್ ಜೈನಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಅರುಣ್ ಬಿ.ಕೆ., ಬಿಜೆಪಿ ನಗರ ಅಧ್ಯಕ್ಷ ಮನು ಮಂಜುನಾಥ್ ಹಾಗೂ ಮಡಿಕೇರಿ ನಗರದ ಬಿಜೆಪಿ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.