ಮಡಿಕೇರಿ, ಜ. ೭: ಮಡಿಕೇರಿ ತಾಲೂಕು ಸವಿತಾ ಸಮಾಜದ ವತಿಯಿಂದ ಕೊಡಗು ಜಿಲ್ಲಾಮಟ್ಟದ ಸವಿತಾ ಸಮಾಜ ಕ್ರೀಡಾಕೂಟವನ್ನು ಏಪ್ರಿಲ್ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಿದ್ದು, ಈ ಪ್ರಯುಕ್ತ ಪೂರ್ವ ಸಿದ್ಧತೆ ಸಭೆ ನಡೆಸಲಾಯಿತು.
ಕ್ರೀಡಾಕೂಟ ಯಶಸ್ವಿಗೆ ಪ್ರತಿಯೊಬ್ಬರು ಕೈಜೋಡಿಸುವಂತೆ ಪ್ರಮುಖರು ಮನವಿ ಮಾಡಿದರು.
ಸಭೆಯ ಮೊದಲಿಗೆ ಹೊಸ ವರ್ಷದ ೨೦೨೨ನೇ ವರ್ಷದ ವರ್ಷಾಚರಣೆಯಾಗಿ ಸವಿತಾ ಸಮಾಜದ ಮಹಿಳಾ ಘಟಕದ ವತಿಯಿಂದ ಕೇಕ್ ಕತ್ತರಿಸಿ ಪರಸ್ಪರ ಸಿಹಿ ಹಂಚಿಕೊAಡು ನೂತನ ವರ್ಷವನ್ನು ಸ್ವಾಗತಿಸಲಾಯಿತು.
ಸಭೆಯಲ್ಲಿ ಮಡಿಕೇರಿ ಸವಿತಾ ಸಮಾಜದ ಅಧ್ಯಕ್ಷ ಎಂ.ಟಿ ಮಧು ಹಾಗೂ ಕ್ರೀಡಾ ಅಧ್ಯಕ್ಷ ಮಧು ಚೆಟ್ಟಿಮಾನಿ ಹಾಗೂ ಮಹಿಳಾ ಅಧ್ಯಕ್ಷೆ ಸುಂದರಮ್ಮ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.