ಮಡಿಕೇರಿ,ಜ.೬: ಭಾಗಮಂಡಲ ವಲಯದ ತಣ್ಣಿಮಾನಿ ಬಳಿಯ ತಾವೂರು ಗ್ರಾಮದ ತೊಡಿಕಾನ ಉಪ ವಲಯದ ನಿಶಾನೆ ಮೊಟ್ಟೆ ಅರಣ್ಯ ಕ್ಯಾಂಪ್ ಬಳಿ ಅಕ್ರಮವಾಗಿ ಹರಳುಕಲ್ಲು ಗಣಿಗಾರಿಕೆ ನಡೆಯು ತ್ತಿರುವ ಪ್ರಕರಣಕ್ಕೆ ಸಂಬAಧಿಸದAತೆ ದಂಧೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಮೊಕದ್ದಮೆ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಪಶ್ಚಿಮಘಟ್ಟ ಸಂರಕ್ಷಣೆ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಕ್ರಮ ಹರಳುಕಲ್ಲು ಗಣಿಗಾರಿಕೆ ನಡೆಯುತ್ತಿರುವ ನಿಶಾನೆ ಮೊಟ್ಟೆಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಸ್ಥಳದಲ್ಲಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಿಶಾನೆ ಮೊಟ್ಟೆಯಲ್ಲಿ ಅಕ್ರಮವಾಗಿ ಹರಳುಕಲ್ಲು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಶಕ್ತಿ ಪತ್ರಿಕೆಯಲ್ಲಿ ವರದಿ ಪ್ರಕಟವಾಗಿರು ವದನ್ನು ಗಮನಿಸಿ ಈ ಬಗ್ಗೆ ಈಚೆಗೆ ನಡೆದ ಉಸ್ತುವಾರಿ ಸಚಿವರ ಸಭೆಯಲ್ಲಿ ಸಚಿವರ ಗಮನ ಸೆಳೆದ ಸಂದರ್ಭ ಸಚಿವರು ಈ ಸಂಬAಧ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳು ವಂತೆ ಉಪ ಅರಣ್ಯ ಸಂರಕ್ಷಣಾಧಿ ಕಾರಿಗಳಿಗೆ ಸೂಚಿಸಿದ್ದಾರೆ. ಆದರೂ ಇದುವರೆಗೆ ಮೊಕದ್ದಮೆ ದಾಖಲಾಗಿಲ್ಲ. ಕೂಡಲೇ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮೊಯಿಸಿನ್ ಪಾಷಾ ಅವರಿಗೆ ಸೂಚಿಸಿದರು.

ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಕೂಡ ಶಾಮೀಲಾಗಿರುವ ಬಗ್ಗೆ ಮೇಲ್ನೋಟಕ್ಕೆ ಕಂಡುಬರುತ್ತಿದೆ, ಅಧಿಕಾರಿಗಳ ಸಹಕಾರದಿಂದ ಈ ದಂಧೆ ನಡೆಯುತ್ತಿದೆ, ಇದಕ್ಕೆ ಕಡಿವಾಣ ಹಾಕಲಾಗುವದು. ತಪ್ಪು ಮಾಡಿದವರಿಗೆ ತಕ್ಕ ಶಾಸ್ತಿ ಮಾಡಲಾಗುವದು ಎಂದು ಹೇಳಿದರು. ದಂಧೆಯಲ್ಲಿ ಭಾಗಿಯಾಗಿರುವವರ ಬಗ್ಗೆ ಸಿಬ್ಬಂದಿಗಳು ಬಾಯಿ ಬಿಡದಿದ್ದಲ್ಲಿ ಮಂಪರು

(ಮೊದಲ ಪುಟದಿಂದ) ಪರೀಕ್ಷೆಗೆ ಒಳಪಡಿಸಲಾಗುವದು ಎಂದು ಎಚ್ಚರಿಕೆ ನೀಡಿದರಲ್ಲದೆ, ಸ್ಥಳದಲ್ಲಿ ಸಿಸಿ ಕ್ಯಾಮರಾ ಅಳವಡಿಸುವಂತೆ ಅಧಿಕಾರಿಗೆ ಸೂಚಿಸಿದರು.

ಪರಿಸರ ಉಳಿಯಬೇಕಿದೆ, ಪ್ರಸ್ತುತ ಆಮ್ಲಜನಕ ಖರೀದಿ ಮಾಡುವ ಪರಿಸ್ಥಿತಿ ಎದುರಾಗಿದೆ, ಬೆಟ್ಟದ ಮೇಲೆ ಈ ರೀತಿ ಗಣಿಗಾರಿಕೆ ಮೂಲಕ ಹೊಂಡಗಳನ್ನು ತೋಡಿದರೆ ಮುಂದೊAದು ದಿನ ಭೂ ಕುಸಿತ ಉಂಟಾಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ ಎಂದು ಆತಂಕ ವ್ಯಕ್ತ ಪಡಿಸಿದರು.

ಮುತ್ತಿಗೆ ಎಚ್ಚರಿಕೆ

ಇದೇ ಸಂದರ್ಭದಲ್ಲಿ ಅಧ್ಯಕ್ಷರೊಂದಿಗೆ ಆಗಮಿಸಿದ್ದ ಭಾಗಂಡಲ ಗ್ರಾಮ ಪಂಚಾಯ್ತಿ ಸದಸ್ಯ ದಂಡಿನ ಜಯಂತ್, ಪ್ರಮುಖರಾದ ಕುದುಕುಳಿ ಭರತ್, ಕುದುಪಜೆ ಪ್ರಕಾಶ್, ಇನ್ನಿತರರು ಪ್ರತಿ ತಿಂಗಳಿಗೊಮ್ಮೆ ಅರಣ್ಯ ಇಲಾಖಾಧಿಕಾರಿಗಳೊಂದಿಗೆ ಗ್ರಾಮ ಪಂಚಾಯ್ತಿ ಪ್ರತಿನಿಧಿಗಳಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಲು ಅನುಮತಿ ನೀಡಬೇಕು ಎಂದು ಹೇಳಿದರು. ಈ ಪ್ರಕರಣಕ್ಕೆ ಸಂಬAಧಿಸದAತೆ ಅರಣ್ಯ ಇಲಾಖಾ ಸಿಬ್ಬಂದಿಗಳು ಸೇರಿದಂತೆ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳದಿದ್ದಲ್ಲಿ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಿ ಅರಣ್ಯ ಇಲಾಖಾ ಕಚೇರಿ ಎದುರು ಪ್ರತಿಭಟನೆ ನಡೆಸುವದಾಗಿ ಎಚ್ಚರಿಸಿದರು. ಈ ಸಂದರ್ಭ ಉಪ ವಲಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಮಂಜುನಾಥ್ ನಾಯಕ್, ಮೂರ್ತಿ, ರಕ್ಷಕ ಮಲ್ಲಿಕಾರ್ಜುನ, ವೀಕ್ಷಕರುಗಳು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

- ಸಂತೋಷ್, ಸುಧೀರ್