ಮಡಿಕೇರಿ, ಜ. ೭: ಜಿಲ್ಲಾ ಮಹಿಳಾ ಮೋರ್ಚಾ ಮತ್ತು ನಗರ ಮಹಿಳಾ ಮೋರ್ಚಾ ವತಿಯಿಂದ ನಗರದ ಓಂಕಾರೇಶ್ವರ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಅವರ ಕ್ಷೇಮಕ್ಕಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶÀರೀನ್ ಸುಬ್ಬಯ್ಯ ಜಿಲ್ಲಾ ಪ್ರಬಾರಿ ಭಾಗಿರಥಿ ಮುರಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿತಾ ಪೂವಯ್ಯ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಸವಿತಾ ರಾಕೇಶ್, ಗ್ರಾಮಾಂತರ ಮಹಿಳಾ ಮೋರ್ಚಾ ಅಧ್ಯಕ್ಷೆ ಕವಿತಾ ಬೆಳ್ಯಪ್ಪ ಹಾಗೂ ನಗರಸಭಾ ಸದಸ್ಯರು, ಪಕ್ಷದ ಪದಾಧಿಕಾರಿಗಳು ಭಾಗಿಯಾಗಿದ್ದರು.