ಕಲಬುರ್ಗಿ, ಜ. ೭: ಕಲಬುರಗಿಯಲ್ಲಿ ನಡೆದ ರಾಜ್ಯ ಪತ್ರಕರ್ತರ ೩೬ನೇ ಸಮ್ಮೇಳನವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗ್ರಾಮೀಣ ಪತ್ರಕರ್ತರ ನೆರವಿಗೆ ಎಲ್ಲಾ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಜಿಲ್ಲೆಯ ಸೋಮವಾರಪೇಟೆಯ ಕನ್ನಡಪ್ರಭ ಪತ್ರಿಕೆಯ ವರದಿಗಾರ ಎಸ್.ಎ. ಮುರುಳೀದರ್ ಅವರಿಗೆ ಸಮ್ಮೇಳನದಲ್ಲಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ, ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನು ಕಾರ್ಯಪ್ಪ, ರಾಜ್ಯ ಸಂಘದ ನಿರ್ದೇಶಕ ಅಜ್ಜಮಾಡ ರಮೇಶ್ ಕುಟ್ಟಪ್ಪ, ಖಜಾಂಚಿ ಪ್ರೇಮ್ ಕುಮಾರ್, ಉಪಾಧ್ಯಕ್ಷ ಪಾರ್ಥ ಚಿಣ್ಣಪ್ಪ, ರಾಷ್ಟಿçÃಯ ಸಮಿತಿ ಸದಸ್ಯ ಮುರುಳೀದರ್ ಹಾಗೂ ಸಂಘದ ಸದಸ್ಯ ಸಂತೋಷ್ ರೈ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು.