ಮಡಿಕೇರಿ, ಜ. ೭: ಪಂಜಾಬಿನ ಫಿರೋಜ್‌ಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿಸುವ ಸಲುವಾಗಿ ಹಾಗೂ ಬೃಹತ್ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ತಾ. ೫ ರಂದು ಪಂಜಾಬಿಗೆ ತೆರಳಿದ ಸಂದರ್ಭ ಕಾಂಗ್ರೆಸ್ ಆಡಳಿತವಿರುವ ಪಂಜಾಬ್ ಸರಕಾರ ಪ್ರಧಾನಿಯವರಿಗೆ ಅಗತ್ಯ ಭದ್ರತೆಯ ವ್ಯವಸ್ಥೆಯನ್ನು ನೀಡದಿರುವುದು ಖಂಡನೀಯ ಎಂದು ಜಿಲ್ಲಾ ಬಿಜೆಪಿ ವಕ್ತಾರ ಮಹೇಶ್ ಜೈನಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹವಾಮಾನದ ಏರುಪೇರು ಕಾರಣದಿಂದಾಗಿ ಅನಿವಾರ್ಯವಾಗಿ ರಸ್ತೆ ಮೂಲಕ ಹುಸೇನಿವಾಲಾದ ರಾಷ್ಟಿçÃಯ ಸ್ಮಾರಕಕ್ಕೆ ತೆರಳುತ್ತಿದ್ದ ಪ್ರಧಾನಿ ಮೋದಿ ಅವರ ಪ್ರಯಾಣಕ್ಕೆ ರೈತ ಪ್ರತಿಭಟನೆಯ ನೆಪದಲ್ಲಿ ಟ್ರಾಫಿಕ್ ಜಾಮ್ ಸೃಷ್ಠಿಸಿದ ಪರಿಣಾಮವಾಗಿ ಪ್ರಧಾನಿಯವರ ಕಾರು ೨೦ ನಿಮಿಷ ಫ್ಲೆöÊಓವರ್ ಮೇಲೆಯೇ ನಿಲ್ಲುವಂತಾಗಿತ್ತು. ಆದರೂ ಪ್ರತಿಭಟನಾಕಾರರು ದಾರಿ ಬಿಡದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ತನ್ನೆಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿ ಬಟಿಂಡಾ ವಿಮಾನ ನಿಲ್ದಾಣಕ್ಕೆ ಹಿಂತಿರುಗಿದರು. ದೇಶದ ಪ್ರಧಾನಿಗೇ ಭದ್ರತಾ ವೈಫಲ್ಯವಾದರೆ ಇನ್ನು ಜನ ಸಾಮಾನ್ಯರ ಪಾಡೇನು? ಇದಕ್ಕೆ ಮುಖ್ಯ ಹೊಣೆಗಾರರಾಗಿರುವ ಪಂಜಾಬ್ ಮುಖ್ಯಮಂತ್ರಿ, ಭದ್ರತಾ ಮುಖ್ಯಸ್ಥರು ಮತ್ತು ಕೀಳು ರಾಜಕೀಯವನ್ನು ಪ್ರದರ್ಶಿಸಿದ ಕಾಂಗ್ರೆಸ್ ಪಕ್ಷ ದೇಶದ ಜನತೆಯ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ತಾಲೂಕು ಬಿಜೆಪಿ ಖಂಡನೆ

ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಂಜಾಬ್‌ನಲ್ಲಿ ಆಯೋಜನೆಗೊಂಡಿದ್ದ ರೂ. ೪೨ ಕೋಟಿ ವಿವಿಧ ಯೋಜನೆಗಳಿಗೆ ಶಂಕು ಸ್ಥಾಪನೆಯ ನೆರವೇರಿಸಲು ಕಾರ್ಯಕ್ರಮಕ್ಕೆ ತೆರಳುವ ವೇಳೆ ಮಾರ್ಗದ ಮಧ್ಯೆ ಇವರನ್ನು ತಡೆದು ಅಡ್ಡಿಪಡಿಸಿರುವುದನ್ನು ವೀರಾಜಪೇಟೆ ಬಿಜೆಪಿ ಮಂಡಲ ವಕ್ತಾರ ಪುಲಿಯಂಡ ಪೊನ್ನಣ್ಣ ಖಂಡಿಸಿದ್ದಾರೆ.