ಸಿದ್ದಾಪುರ, ಜ. ೭: ಗ್ರಾಮ ಪಂಚಾಯಿತಿ ನೌಕರರ ಸಂಘ ಸಿಐಟಿಯು ಸಂಯೋಜಿತ ಕೊಡಗು ಜಿಲ್ಲಾ ನಾಲ್ಕನೇ ಹಕ್ಕೊತ್ತಾಯ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಪಿ.ಆರ್ ಭರತ್ ತಿಳಿಸಿದ್ದಾರೆ. ಗ್ರಾ.ಪಂ ನೌಕರರ ಸಂಘದ ಹಕ್ಕೊತ್ತಾಯ ಸಮಾವೇಶವನ್ನು ತಾ. ೮ ರಂದು (ಇಂದು) ಸಿದ್ದಾಪುರದಲ್ಲಿ ಆಯೋಜಿಸಲಾಗಿತ್ತು. ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ಸಮಾವೇಶವನ್ನು ಜನವರಿ ೨೬ ರಂದು ಸಿದ್ದಾಪುರದ ಸೆಂಟನರಿ ಸಭಾಂಗಣದಲ್ಲಿ ನಡೆಸಲಾಗುವುದೆಂದು ತಿಳಿಸಿದ್ದಾರೆ.