ಮಡಿಕೇರಿ, ಜ. ೮: ತಾ. ೧೧ ರಂದು ಕಗ್ಗೋಡ್ಲು, ಹೂಕಾಡು ಪೈಸಾರಿ ಸಮುದಾಯ ಭವನದಲ್ಲಿ ಪೂರ್ವಾಹ್ನ ೧೧ ಗಂಟೆಗೆ ಪಿ.ಜಿ. ಲೋಕೇಶ್ ಅಧ್ಯಕ್ಷತೆಯಲ್ಲಿ ವಾರ್ಡ್ ಸಭೆ ನಡೆಯಲಿದೆ. ತಾ. ೧೨ ರಂದು ತೊಂಭತ್ತು ಮನೆ ಸಮುದಾಯ ಭವನದಲ್ಲಿ ಪೂರ್ವಾಹ್ನ ೧೧ ಗಂಟೆಗೆ ಬಿ.ಕೆ. ಯತೀಶ ಅಧ್ಯಕ್ಷತೆಯಲ್ಲಿ ವಾರ್ಡ್ ಸಭೆ ನಡೆಯಲಿದೆ. ತಾ. ೧೨ ರಂದು ಹುಲಿತಾಳ ಸಮುದಾಯ ಭವನದಲ್ಲಿ ಅಪರಾಹ್ನ ೨.೩೦ ಗಂಟೆಗೆ ಬಿ.ಎಸ್. ಶೀಲಾವತಿ ಅಧ್ಯಕ್ಷತೆಯಲ್ಲಿ ವಾರ್ಡ್ ಸಭೆ ನಡೆಯಲಿದೆ.

ಹಾಕತ್ತೂರು ಗ್ರಾ.ಪಂ.ನ ೨೦೨೧-೨೨ನೇ ಸಾಲಿನ ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, ೧೪ನೇ ಮತ್ತು ೧೫ನೇ ಹಣಕಾಸು ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ ತಾ. ೧೭ ರಂದು ಪೂರ್ವಾಹ್ನ ೧೧ ಗಂಟೆಗೆ ಕುವೆಂಪು ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.

ಹಾಕತ್ತೂರು ಗ್ರಾ.ಪಂ. ವ್ಯಾಪ್ತಿಯ ಹಾಕತ್ತೂರು ಮತ್ತು ಕಗ್ಗೋಡ್ಲು ಗ್ರಾಮದ ೨೦೨೧-೨೨ನೇ ಸಾಲಿನ ಗ್ರಾಮ ಸಭೆ ತಾ. ೨೦ ರಂದು ಪೂರ್ವಾಹ್ನ ೧೧ ಗಂಟೆಗೆ ಕುವೆಂಪು ಶತಮಾನೋತ್ಸವ ಶಾಲಾ ಸಭಾಂಗಣದಲ್ಲಿ ಗ್ರಾ.ಪಂ. ಅಧ್ಯಕ್ಷೆ ಎಂ.ಎನ್. ಸವಿತಾ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.