ಸೋಮವಾರಪೇಟೆ, ಜ. ೯: ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅಭಿಮಾನಿ ಬಳಗದ ವತಿಯಿಂದ ಪಟ್ಟಣದ ಕಕ್ಕೆಹೊಳೆ ಜಂಕ್ಷನ್ನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ನರೇಂದ್ರ ಮೋದಿ ಬಸ್ ನಿಲ್ದಾಣದ ಉದ್ಘಾಟನೆ ಕಾರ್ಯಕ್ರಮ ತಾ. ೧೦ ರಂದು (ಇಂದು) ನಡೆಯಲಿದೆ.
ಬೆಳಿಗ್ಗೆ ೧೦.೩೦ಕ್ಕೆ ನೂತನ ಬಸ್ ನಿಲ್ದಾಣವನ್ನು ಶಾಸಕ ಅಪ್ಪಚ್ಚುರಂಜನ್ ಅವರು ಉದ್ಘಾಟಿಸಲಿದ್ದು, ಸಂಸದರ ನಿಧಿಯಡಿ ಅಳವಡಿಸಲಾಗಿರುವ ಶುದ್ಧಕುಡಿಯುವ ನೀರಿನ ಘಟಕವನ್ನು ಸಂಸದರಾದ ಪ್ರತಾಪ್ ಸಿಂಹ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ. ಚಂದ್ರು, ಉಪಾಧ್ಯಕ್ಷ ಸಂಜೀವ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಅಭಿಮಾನಿ ಬಳಗದ ಜಗನ್ನಾಥ್ ತಿಳಿಸಿದ್ದಾರೆ.