ಸುಂಟಿಕೊಪ್ಪ, ಜ. ೯ : ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಉಪಾಧ್ಯಕ್ಷರಾಗಿ ಡಾ.ಶಶಿಕಾಂತ ರೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ಅಧ್ಯಕ್ಷ ದಾಸಂಡ ರಮೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಹಿಂದೆ ಉಪಾಧ್ಯಕ್ಷರಾಗಿದ್ದ ಜಿ.ಜಿ. ಕೋಮಲ ಅವರು ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಕ್ಕೆ ಡಾ.ಶಶಿಕಾಂತ್ ರೈ ಅವರನ್ನು ನೇಮಕಗೊಳಿಸÀಲಾಯಿತು.