ವೀರಾಜಪೇಟೆ, ಜ. ೯: ಕೊರೊನಾ ಹರಡದಂತೆ ವೀರಾಜಪೇಟೆ ತಾಲೂಕಿನ ಅಧಿಕಾರಿಗಳು ಎಚ್ಚರ ವಹಿಸಬೇಕು ಹಾಗೂ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಅಧ್ಯಕ್ಷರುಗಳ ಸಭೆ ಕರೆದು ಕೊರೊನಾ ತಡೆಗಟ್ಟಲು ಜಾಗೃತಿ ಮೂಡಿಸುವಂತಾಗಬೇಕು ಎಂದು ಶಾಸಕ ಕೆ.ಜಿ. ಬೋಪಯ್ಯ ಸೂಚಿಸಿದರು
ವೀರಾಜಪೇಟೆ ತಾಲೂಕು ಕಛೇರಿ ಸಭಾಂಗಣದಲ್ಲಿ ಕೊರೊನಾ ಹಾಗೂ ಓಮಿಕ್ರಾನ್ ತಡೆಗಟ್ಟುವ ನಿಟ್ಟಿನಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಬೋಪಯ್ಯ ಅವರು, ಮಾಕುಟ್ಟ ಮತ್ತು ಕುಟ್ಟ ಗಡಿಭಾಗದಲ್ಲಿ ಕರ್ತವ್ಯ ನಿರ್ವಹಿಸಲು ಪರೀಕ್ಷಾ ತಂಡವನ್ನು ರಚಿಸಬೇಕು. ಸಾರ್ವಜನಿಕರಿಗೆ ಅಗತ್ಯ ಕೆಲಸಗಳಿದ್ದರೆ ಮಾತ್ರ ಅವಕಾಶ ನೀಡುವುದು. ಪ್ರತಿಯೊಬ್ಬರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಯಾರೇ ಆಗಲಿ ಮಾಸ್ಕ್ ಇಲ್ಲದೆ ಓಡಾಡಿದರೆ ಪೊಲೀಸ್ ಅಧಿಕಾರಿಗಳು ದಂಡ ವಿಧಿಸುವ ಮೂಲಕ ಸೂಕ್ತ ಕ್ರಮ ಕೈಗೊಳ್ಳಬೇಕು. ಅನಗತ್ಯ ಪಟ್ಟಣದಲ್ಲಿ ಓಡಾಡದಂತೆ ಪಟ್ಟಣ ಪಂಚಾಯಿತಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ತಾಲೂಕು ಆರೋಗ್ಯ ಅಧಿಕಾರಿ ಡಾ ಯತಿರಾಜ್ ಮಾತನಾಡಿ, ವೀರಾಜಪೇಟೆ ತಾಲೂಕಿನಲ್ಲಿ ಶೇ. ೯೯ ಯಶಸ್ವಿಯಾಗಿದೆ ಹಾಗೂ ೧೫ ರಿಂದ ೧೮ ವಯೋಮಿತಿಯ ಶಾಲಾ ಮಕ್ಕಳಿಗೆ ೭೦೬೪ ಗುರಿ ಪೈಕಿ ೪೩೩೯ ಆಗಿದೆ. ಎಲ್ಲವನ್ನು ನಿಬಾಹಿಸಲು ಸಿಬ್ಬಂದಿಗಳ ಕೊರತೆÀ ಇದೆ ಎಂದು ಸಭೆಗೆ ತಿಳಿಸಿದಾಗ ಸಿಬ್ಬಂದಿಗಳ ಕೊರತೆ ಇದ್ದರೆ ಜಿಲ್ಲಾಧಿಕಾರಿಗೆ ಪತ್ರದ ಮೂಲಕ ತಿಳಿಸುವಂತೆ ಶಾಸಕರು ಸೂಚಿಸಿದರು.
ಡಿವೈಎಸ್ಪಿ ಜಯಕುಮಾರ್ ಮಾತನಾಡಿ ಸರ್ಕಾರದ ನಿಯಮವನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದರು. ಸಭೆಯಲ್ಲಿ ಪೊನ್ನಂಪೇಟೆ ತಹಶೀಲ್ದಾರ್ ಎನ್.ಎಸ್. ಪ್ರಶಾಂತ್, ತಾಲೂಕು ಕಾರ್ಯನಿರ್ವಹಣಾಧಿಕಾರಿ ಅಪ್ಪಣ್ಣ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಚಂದ್ರಕುಮಾರ್, ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಹೇಮಪ್ರಿಯ, ಜಿಲ್ಲಾ ಪಂಚಾಯತ್ ಅಭಿಯಂತರ ಮಹದೇವ್, ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ. ತಮ್ಮಯ್ಯ, ತೋಟಗಾರಿಕೆ ಇಲಾಖೆ ನಿರ್ದೇಶಕಿ ಎಂ.P ೆ.ಬೀನಾ, ತಾಲೂಕು ಪ.ಪÀಂಗಡ ಕಲ್ಯಾಣ ಅಧಿಕಾರಿ ಗುರುಶಾಂತಪ್ಪ ಹಾಗೂ ತಾಲೂಕು ಕಚೇರಿ ಅಧಿಕಾರಿಗಳು ಉಪಸ್ಥಿತರಿದ್ದರು.