ಮಡಿಕೇರಿ, ಜ. ೮: ಭೂಮಾಪನ ಇಲಾಖೆಯಲ್ಲಿ ಪರವಾನಗಿ ಭೂಮಾಪಕರ ಕೊರತೆಯಿರುವುದರಿಂದ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಡಿಸೆಂಬರ್ ೨೮ ರಂದು ಇಲಾಖಾ ಆಯುಕ್ತರ ಅಧಿಸೂಚನೆಯಂತೆ ಕೊಡಗು ಜಿಲ್ಲೆಗೆ ೧೦೦ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಈ ಅರ್ಜಿಗಳನ್ನು ಚಿಣ ಡಿಜseಡಿviಛಿes.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ತಾ. ೨೧ ರ ಸಂಜೆ ೫ ಗಂಟೆಯೊಳಗೆ ಸಲ್ಲಿಸಲು ಕೊನೆಯ ದಿನವಾಗಿದೆ. ಅರ್ಜಿ ಶುಲ್ಕ, ಶೈಕ್ಷಣಿಕ ವಿದ್ಯಾರ್ಹತೆ ವಯೋಮಿತಿ, ಅರ್ಜಿ ಸಲ್ಲಿಸುವ ವಿಧಾನ ಮತ್ತಿತರ ಹೆಚ್ಚಿನ ಮಾಹಿತಿಗೆ ಜio_ಞಜg@ಟಿiಛಿ.iಟಿ ನ್ನು ಪರಿಶೀಲಿಸಬಹುದು ಅಥವಾ ಭೂದಾಖಲೆಗಳ ಉಪ ನಿರ್ದೇಶಕರ ಕಚೇರಿ, ಜಿಲ್ಲಾಡಳಿತ ಭವನ, ೨ನೇ ಮಹಡಿ ಕೊಠಡಿ ಸಂಖ್ಯೆ ೧೫ ರಲ್ಲಿ ಕಚೇರಿ ಸಮಯದಲ್ಲಿ ಹಾಜರಾಗಿ ಮಾಹಿತಿ ಪಡೆಯಬಹುದು ಎಂದು ಭೂದಾಖಲೆಗಳ ಉಪ ನಿರ್ದೇಶಕ ಪಿ. ಶ್ರೀನಿವಾಸ ಅವರು ತಿಳಿಸಿದ್ದಾರೆ.