ಸೋಮವಾರಪೇಟೆ, ಜ. ೯: ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಸಮೀಪದ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಜೆಗುಂಡಿ ಗ್ರಾಮದ ಸುಮಾರು ೨೯೦ ಮಂದಿಗೆ ಹಕ್ಕುಪತ್ರ ವಿತರಣಾ ಕಾರ್ಯಕ್ರಮ ತಾ. ೧೦ ರಂದು (ಇಂದು) ನಡೆಯಲಿದೆ.

ಬಳಗುಂದ ಶಾಲಾ ಮೈದಾನದಲ್ಲಿ ಬೆಳಿಗ್ಗೆ ೯.೩೦ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಹಕ್ಕುಪತ್ರ ವಿತರಿಸಲಿ ದ್ದಾರೆ ಎಂದು ಬೇಳೂರು ಗ್ರಾ.ಪಂ. ಅಧ್ಯಕ್ಷ ಬಿ.ಎಂ. ಪ್ರಶಾಂತ್ ತಿಳಿಸಿದ್ದಾರೆ.