ಮಡಿಕೇರಿ, ಜ. ೯: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ತಾ. ೧೦ ರಂದು ಕೊಡಗು ಕಾಂಗ್ರೆಸ್ಸಿಗರು ತೆರಳಲಿದ್ದಾರೆ ಎಂದು ಪಕ್ಷದ ಜಿಲ್ಲಾ ವಕ್ತಾರ ಟಾಟುಮೊಣ್ಣಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮೊದಲ ದಿನದ ಪಾದಯಾತ್ರೆ ಯಶಸ್ವಿಯಾಗಿದ್ದು, ವಿಧಾನ ಪರಿಷತ್ ಸದಸ್ಯರಾದ ವೀಣಾಅಚ್ಚಯ್ಯ, ಕೆಪಿಸಿಸಿ ವಕ್ತಾರ ಎ.ಎಸ್.ಪೊನ್ನಣ್ಣ ಮತ್ತಿತರ ಪ್ರಮುಖರು ಪಾಲ್ಗೊಂಡಿದ್ದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರ ನೇತೃತ್ವದಲ್ಲಿ ತಾವು ಸೇರಿದಂತೆ ಜಿಲ್ಲೆಯ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಎರಡನೇ ದಿನದ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.