ಪಾಲಿಬೆಟ್ಟ: ಚೆಶೈರ್ ಹೋಮ್ಸ್ ಇಂಡಿಯಾ ಕೂರ್ಗ್ ವಿಶೇಷ ಶಾಲೆ ಪಾಲಿಬೆಟ್ಟದಲ್ಲಿ ೧೫-೧೮ ವರ್ಷ ವಯಸ್ಸಿನ ಮಕ್ಕಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಚೆನ್ನಯ್ಯನಕೋಟೆ ವತಿಯಿಂದ ಕೋವಿಡ್ ಲಸಿಕಾಕರಣ ನಡೆಯಿತು.
ಸಂಸ್ಥೆಯ ಅಧ್ಯಕ್ಷೆ ಗೀತಾ ಚೆಂಗಪ್ಪ ಅವರ ಅಧ್ಯಕ್ಷತೆಯಲ್ಲಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಿವಪ್ಪ ಎಸ್. ಗೋಟ್ಯಾಳ ಕಾರ್ಯಕ್ರಮ ಉದ್ಘಾಟಿಸಿದರು. ಎಲ್ಲಾ ೧೫ ವರ್ಷ ಮೇಲ್ಪಟ್ಟವರು ಲಸಿಕೆಯನ್ನು ಪಡೆದುಕೊಳ್ಳಬೇಕು, ಮೂರನೇ ಅಲೆ ಒಮಿಕ್ರಾನ್ ಹರಡುವುದನ್ನು ತಡೆಯಬೇಕಾದರೆ ಎಲ್ಲರೂ ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕೆಂದು ಕರೆ ನೀಡಿದರು.
ಚೆಶೈರ್ ಹೋಮ್ಸ್ ಸಂಸ್ಥೆಯ ಉಪಾಧ್ಯಕ್ಷರಾದ ಸುನಿತಾ, ರಾಮಸ್ವಾಮಿ, ಸದಸ್ಯರಾದ ಬಿ.ಪಿ. ಗಣಪತಿ ಕೆ.ಎಂ. ಅಪ್ಪಯ್ಯ, ಸ್ವಯಂ ಸೇವಕರಾದ ರೋವಿನಾ ಡಿಸೋಜ, ರೇಷ್ಮಾ ಭೀಮಯ್ಯ, ಅಜಿತ್ ಕರುಂಬಯ್ಯ, ಮುಖ್ಯೋಪಾಧ್ಯಾಯ ಶಿವರಾಜ್ ಎಸ್.ಸಿ., ಸಿಬ್ಬಂದಿ ವರ್ಗದವರಾದ ಅನಿತಾ, ಪ್ರಮೀಳಾ ಆಶಾ ಕಾರ್ಯಕರ್ತೆರಾದ ಜಲಜಾ, ಶೈಲಾ ಹಾಗೂ ಪೋಷಕರು ಉಪಸ್ಥಿತರಿದ್ದರು. ಒಟ್ಟು ೨೫ ವಿದ್ಯಾರ್ಥಿಗಳಿಗೆ ಲಸಿಕೆಯನ್ನು ನೀಡಲಾಯಿತು.ಪೆರಾಜೆ: ಪೆರಾಜೆ ಜ್ಯೋತಿ ಪ್ರೌಢಶಾಲೆಯಲ್ಲಿ ೧೫ ವರ್ಷದಿಂದ ೧೮ ವರ್ಷ ವಯೋಮಾನದ ವಿದ್ಯಾರ್ಥಿಗಳಿಗೆ ಕೋವಿಡ್-೧೯ ಲಸಿಕಾ ಶಿಬಿರ ನಡೆಯಿತು. ಈ ಸಂದರ್ಭ ಪೆರಾಜೆ ಗ್ರಾ.ಪಂ. ಅಧ್ಯಕ್ಷೆ ಚಂದ್ರಕಲಾ ಬಳ್ಳಡ್ಕ, ಉಪಾಧ್ಯಕ್ಷೆ ಜಯಲಕ್ಷಿö್ಮ ಧರಣೀಧರ, ಡಿ.ಎನ್.ಓ. ಭವಾನಿ, ಶಾಲಾ ಮುಖ್ಯ ಶಿಕ್ಷಕ ವೇಣುಗೋಪಾಲ್ ಕೊಯಿಂಗಾಜೆ, ಜ್ಯೋತಿ ವಿದ್ಯಾಸಂಘದ ಸಂಚಾಲಕ ಹರಿಶ್ಚಂದ್ರ ಮುಡ್ಕಜೆ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ರೇಖಾ, ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳು, ಕೋವಿಡ್-೧೯ ಲಸಿಕಾ ಮಾಹಿತಿ, ಆರೋಗ್ಯ ಅರಿವು ಮಾಹಿತಿ ನೀಡಲಾಯಿತು.ಕೂಡಿಗೆ: ಕೂಡಿಗೆ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಲಸಿಕೆ ಶಿಬಿರ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು.
ಕಾರ್ಯಕ್ರಮಕ್ಕೆ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್ ಚಾಲನೆ ನೀಡಿದರು. ಕಾಲೇಜಿನ ೩೯೪ ವಿದ್ಯಾರ್ಥಿಗಳು ಲಸಿಕೆ ಪಡೆದುಕೊಂಡರು. ಈ ಸಂದರ್ಭ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ.ಕೆ. ನಾಗರಾಜಶೆಟ್ಟಿ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯ ಚಂದ್ರು ಮೂಡ್ಲಿಗೌಡ, ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ತೇಜಶ್ರೀ, ಕಾಲೇಜಿನ ಪ್ರಾಂಶುಪಾಲ ಡಾ. ಬಸಪ್ಪ, ಉಪನ್ಯಾಸಕರಾದ ನಾಗಪ್ಪ, ರಮೇಶ್, ಸತೀಶ್, ಹೇಮರಾಜ್, ಕಾವೇರಮ್ಮ, ಸೂಸಿತಂಗಚನ್, ಲಿನೆಟ್, ಪಲ್ಲವಿ, ಪಾವನ, ಆರೋಗ್ಯ ಇಲಾಖೆ ಆರೋಗ್ಯ ಸಹಾಯಕ ಚಂದೇಶ್ ಸೇರಿದಂತೆ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಹಾಜರಿದ್ದರು.ಪೊನ್ನಂಪೇಟೆ: ಗೋಣಿಕೊಪ್ಪಲು ಕಾವೇರಿ ಪದವಿಪೂರ್ವ ಕಾಲೇಜಿನ ೧೫ ವರ್ಷದಿಂದ ೧೮ ವರ್ಷ ವಯೋಮಿತಿಯ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನಕ್ಕೆ ಕುಟ್ಟಂದಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸೂಪರ್ ವೈಸರ್ ದಮಯಂತಿ ಹಾಗೂ ಪ್ರಾಂಶುಪಾಲ ಎಸ್.ಎಸ್. ಮಾದಯ್ಯ ಚಾಲನೆ ನೀಡಿದರು.
ಕಾಲೇಜಿನ ೨೭೨ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಯಿತು. ಕುಟ್ಟಂದಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ಮೀನಾಕ್ಷಿ, ರಮಿತ, ಆಶಾ ಕಾರ್ಯಕರ್ತರಾದ ಗಾಯತ್ರಿ, ರಶ್ಮಿ, ಶಾಂತಿ ಹಾಗೂ ಅಭಿನಯ ಲಸಿಕಾ ಕಾರ್ಯ ನಿರ್ವಹಿಸಿದರು. ಕಾವೇರಿ ಕಾಲೇಜಿನ ಸಿಬ್ಬಂದಿ ಹಾಜರಿದ್ದರು.ಸುಂಟಿಕೊಪ್ಪ: ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ೧೫ ರಿಂದ ೧೮ ವಯೋಮಾನದ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಲಾಯಿತು.
ಲಸಿಕಾ ಅಭಿಯಾನ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪಿ.ಎಸ್. ಜಾನ್ ವಹಿಸಿ ಮಾತನಾಡಿ, ಕೊರೊನಾ ರೂಪಾಂತರಿ ಓಮಿಕ್ರಾನ್ ಹರಡುವಿಕೆಯು ಮೂರನೇ ಅಲೆಯನ್ನು ಸೃಷ್ಠಿಸುವ ಸಂಭವ ಇರುವುದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಲಸಿಕೆ ಪಡೆಯಬೇಕೆಂದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಪ್ರಭಾವತಿ, ಆರೋಗ್ಯ ಇಲಾಖೆಯ ಹಿರಿಯ ಸಹಾಯಕಿ ಶೀಲಾ, ಕಿರಿಯ ಸಹಾಯಕಿಯರಾದ ಲತಾಕುಮಾರಿ, ಯೋಗಿನಿ, ಆರೋಗ್ಯ ಕಾರ್ಯಕರ್ತೆಯರಾದ ಪ್ರಸೀದಾ, ಜ್ಯೋತಿ, ಗೀತಾಂಜಲಿ, ರೇಖಾ ಕಾಲೇಜು ಉಪನ್ಯಾಸಕರು ಹಾಜರಿದ್ದರು.