ಸಿದ್ದಾಪುರ, ಜ. ೯: ಮಾಲ್ದಾರೆ ಗ್ರಾ.ಪಂ.ಯಲ್ಲಿ ನೂತನವಾಗಿ ನಿರ್ಮಿಸಿದ ಡಿಜಿಟಲ್ ಗ್ರಂಥಾಲಯವನ್ನು ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಿದರು. ನಂತರ ಘಟ್ಟದಳ ಬಳಿ ಮಾಲ್ದಾರೆ ಹಾಗೂ ಸಿದ್ದಾಪುರ ಗ್ರಾ.ಪಂ.ಗಳಿಗೆ ಕಸವಿಲೇವಾರಿ ಮಾಡಲು ಗುರುತಿಸಿದ ಕಸವಿಲೇವಾರಿ ಘಟಕಗಳ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಈ ಸಂದರ್ಭ ಸಿದ್ದಾಪುರ ಹಾಗೂ ಮಾಲ್ದಾರೆ ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ವೀರಾಜಪೇಟೆ ತಾಲೂಕು ಕಾರ್ಯನಿರ್ವಹಣಾಧಿಕಾರಿ ಅಪ್ಪಣ್ಣ, ಶಾಸಕರ ಆಪ್ತ ಕಾರ್ಯದರ್ಶಿ ಮಧುದೇವಯ್ಯ ಇನ್ನಿತರರು ಹಾಜರಿದ್ದರು.