ಸಿದ್ದಾಪುರ, ಡಿ. ೯: ವಾರಾಂತ್ಯದ ಕರ್ಫ್ಯೂ ಹಿನ್ನೆಲೆ ಸಿದ್ದಾಪುರದಲ್ಲಿ ಭಾನುವಾರದ ಸಂತೆಗೆ ಇಂದು ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಿದ್ದರು. ಜನರ ಗುಂಪು ಚದುರಿಸಲು ಪೊಲೀಸರು ಲಾಠಿ ಬೀಸಿದರು. ಸಿದ್ದಾಪುರದಲ್ಲಿ ಭಾನುವಾರ ಸಂತೆ ದಿನವಾದ ಹಿನ್ನೆಲೆಯಲ್ಲಿ ಸಿದ್ದಾಪುರದ ಸುತ್ತಮುತ್ತಲಿನ ಪ್ರದೇಶದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ಸೇರಿದಂತೆ ಇತರರು ಅಗತ್ಯ ವಸ್ತುಗಳನ್ನು ಖರೀದಿಸಲು ಮಾರುಕಟ್ಟೆಗೆ ಆಗಮಿಸಿದ್ದರು. ಇದರಿಂದಾಗಿ ಜನಜಂಗುಳಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಬೀಸಿ ಜನರನ್ನು ಚದುರಿಸಿದರು.