ಮಡಿಕೇರಿ, ಜ. ೯: ವಾಮಾಚಾರ ನಡೆಸಿ ನಿಧಿ ಶೋಧನೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಜಿಲ್ಲಾ ಅಪರಾಧ ಪತ್ತೆದಳ ಹಾಗೂ ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ನಿನ್ನೆ ದಿನ ಸಿದ್ದಾಪುರ ಚೆನ್ನಯ್ಯನಕೋಟೆ ಹೊಳಮಾಳ ಗ್ರಾಮದ ಕೋಟೆ ಪೈಸಾರಿಯ ನಿವಾಸಿ, ಸೆಂಟ್ರಿAಗ್ ಕೆಲಸಗಾರ ಎಂ.ಆರ್. ಗಣೇಶ್ ಎಂಬವರ ಮನೆಗೆ ದಾಳಿ ನಡೆಸಿದ ಡಿಸಿಐಬಿ ಹಾಗೂ ಸಿದ್ದಾಪುರ ಪೊಲೀಸರು ವಾಮಾಚಾರ ನಡೆಸಿ ನಿಧಿ ಶೋಧನೆಯಲ್ಲಿ ತೊಡಗಿದ್ದ ಎಂ.ಆರ್. ಗಣೇಶ್ ಹಾಗೂ ಉಡುಪಿಯ ಪಡುಬಿದ್ರೆ ಹಂಚಿನಡ್ಕದ ಸಾಧಿಕ್ ಎಂಬವರುಗಳನ್ನು ಬಂಧಿಸಿದ್ದಾರೆ.

ಆರೋಪಿಗಳಿಬ್ಬರು ಮಂಗಳೂರು ಹಾಗೂ ಕೇರಳ ಮೂಲದ ವಾಮಾಚಾರಿಗಳ ಬಲೆಗೆ ಬಿದ್ದು ಮೌಢ್ಯತೆಯಿಂದ ಮನೆಯ ಬೆಡ್ ರೂಂನ ಮಣ್ಣಿನಡಿಯಲ್ಲಿ ನಿಧಿ ಇದೆಯೆಂದು ಸುಮಾರು ೧೫ ಅಡಿಗಳಷ್ಟು ಮಣ್ಣು ತೆಗೆದು ಗುಂಡಿ ತೋಡಿದ್ದಾರೆ. ನಿಧಿ ಶೋಧನೆಯ ಸಂಬAಧ ಕೋಳಿ ಬಲಿ ಪೂಜೆ ನಡೆಸಿದ್ದು, ಮುಂದಿನ ದಿನಗಳಲ್ಲಿ ದೊಡ್ಡ ಬಲಿ ಪೂಜೆ ನಡೆಸಲು ನಿರ್ಧರಿಸಲಾಗಿತ್ತೆಂದು ಆರೋಪಿಗಳು ಒಪ್ಪಿಕೊಂಡಿದ್ದಾರೆ.

ಮೌಢ್ಯತೆಯಿAದ ಇನ್ನೂ ಕೆಲವು ಅಡಿಗಳಷ್ಟು ಮಣ್ಣು ತೆಗೆದಿದ್ದಲ್ಲಿ ಮನೆ ಕುಸಿದು ಮನೆಯಲ್ಲಿದ್ದವರೆಲ್ಲ ಸಾವನ್ನಪ್ಪುವ ಸಾಧ್ಯತೆಯಿತ್ತು ಎನ್ನಲಾಗಿದ್ದು, ತಲೆಮರೆಸಿಕೊಂಡ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

ಪೊಲೀಸ್ ಅಧೀಕ್ಷಕಿ ಕ್ಷಮಾ ಮಿಶ್ರಾ ಹಾಗೂ ಮಡಿಕೇರಿ ಡಿವೈಎಸ್‌ಪಿ ಗಜೇಂದ್ರ ಪ್ರಸಾದ್ ಮಾರ್ಗದರ್ಶನದಲ್ಲಿ ಜಿಲ್ಲಾ ಅಪರಾಧ ಪತ್ತೆದಳದ ಗುಪ್ತದಳದ ಇನ್ಸ್ಪೆಕ್ಟರ್ ಐ.ಪಿ. ಮೇದಪ್ಪ, ಮಡಿಕೇರಿ ನಗರ ವೃತ್ತ ನಿರೀಕ್ಷಕ ಪಿ.ವಿ. ವೆಂಕಟೇಶ್ ಹಾಗೂ ಡಿಸಿಐಬಿ ಸಿಬ್ಬಂದಿಗಳಾದ ವೆಂಕಟೇಶ್, ಯೋಗೇಶ್ ಕುಮಾರ್, ನಿರಂಜನ್, ವಸಂತ, ಸುರೇಶ್, ಶರತ್ ರೈ, ಶಶಿಕುಮಾರ್ ಮತ್ತು ಅಭಿಲಾಷ್ ಹಾಗೂ ಸಿದ್ದಾಪುರ ಠಾಣೆಯ ಎಎಸ್‌ಐ ಮೊಹಿದ್ದೀನ್, ಸಿಬ್ಬಂದಿ ಗಳಾದ ಬೆಳ್ಳಿಯಪ್ಪ, ಲಕ್ಷಿö್ಮÃಕಾಂತ್, ಮಲ್ಲಪ್ಪ, ಶಿವಕುಮಾರ್ ಹಾಗೂ ಸಿಡಿಆರ್ ಸೆಲ್‌ನ ರಾಜೇಶ್, ಗಿರೀಶ್, ಪ್ರವೀಣ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಕಡAಗದಲ್ಲಿ ಈ ಹಿಂದೆ ವಾಮಾಚಾರದ ಮೂಲಕ ನಿಧಿಗಾಗಿ ವ್ಯಕ್ತಿಯೋರ್ವ ತನ್ನ ಬಾವನನ್ನೇ ಬೆಟ್ಟವೊಂದರ ಮೇಲೆ ಕರೆದೊಯ್ದು ಕೊಂದು ಬಲಿಕೊಟ್ಟಿದ್ದ. ಕುಂಜಿಲದಲ್ಲಿ ನಿಧಿಗಾಗಿ ಬಲಿ ಕೊಡಲು ಬಾಲಕ ನೋರ್ವನ ಅಪಹರಣವೂ ನಡೆದಿತ್ತು. ಬಲಿಕೊಟ್ಟು ವಾಮಾಚಾರ ನಡೆಸಿದರೆ ನಿಧಿ ಸಿಗುತ್ತದೆ ಎಂಬುದು ಮೂಢ ನಂಬಿಕೆಯಾಗಿದ್ದು, ಜನತೆ ಇಂತಹ ಮೂಢನಂಬಿಕೆಗಳಿಗೆ ಬಲಿಯಾಗದಂತೆ ಪೊಲೀಸ್ ಪ್ರಕಟಣೆ ಕೋರಿದೆ.