ಸಂಪುಟದ ನಾಲ್ವರು ಸಚಿವರಿಗೆ ಕೊರೊನಾ

ಬೆಂಗಳೂರು, ಜ. ೧೧: ಕೊರೊನಾ ಮೂರನೇ ಅಲೆಯ ಹರಡುವಿಕೆ ಈ ಹಿಂದಿನ ಎರಡು ಅಲೆಗಳಿಗಿಂತ ತೀವ್ರವಾಗಿದೆ. ಈ ಬಾರಿ ಅನೇಕ ಮಂದಿ ಗಣ್ಯರು, ಸೆಲೆಬ್ರಿಟಿಗಳು, ರಾಜಕೀಯ ನಾಯಕರು ಕೊರೊನಾ ಸೋಂಕಿಗೆ ತುತ್ತಾಗುತ್ತಿದ್ದಾರೆ. ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್-೧೯ ದೃಢಪಟ್ಟಿತ್ತು. ಇಂದು ಅವರ ಸಂಪುಟದ ಮತ್ತೊಬ್ಬ ಹಿರಿಯ ಪ್ರಮುಖ ಸಚಿವ ಜೆ.ಸಿ. ಮಾಧುಸ್ವಾಮಿಗೆ ಸಹ ಕೊರೊನಾ ಪಾಸಿಟಿವ್ ಬಂದಿದ್ದು ಅವರು ಮತ್ತು ಅವರ ಪುತ್ರಿಗೆ ಪಾಸಿಟಿವ್ ಕಂಡುಬAದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದಾರೆ. ಈ ಹಿಂದೆ ರಾಜ್ಯ ಸಚಿವ ಸಂಪುಟದ ಸಚಿವರುಗಳಾದ ಆರ್. ಅಶೋಕ್ ಮತ್ತು ಬಿ.ಸಿ. ನಾಗೇಶ್ ಅವರಿಗೆ ಕೊರೊನಾ ಪಾಸಿಟಿವ್ ಬಂದು ಗುಣಮುಖರಾಗುತ್ತಿದ್ದಾರೆ. ಇನ್ನು ಕಳೆದ ಮೂರ್ನಾಲ್ಕು ದಿನಗಳಿಂದ ಮುಖ್ಯಮಂತ್ರಿಗಳೊAದಿಗೆ ನೇರ ಸಂಪರ್ಕದಲ್ಲಿ ಸಚಿವರು, ಅಧಿಕಾರಿಗಳಿಗೆ ಕೊರೊನಾ ಆತಂಕ ಶುರುವಾಗಿದೆ. ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ದಿನೇದಿನೇ ಕೊರೊನಾ ಪಾಸಿಟಿವ್ ಪ್ರಕರಣಗಳು ಏರುಗತಿಯಲ್ಲಿ ಸಾಗುತ್ತಲೇ ಇದೆ.

ಮುಖ್ಯಮಂತ್ರಿಗಳೊAದಿಗೆ ಪ್ರಧಾನಿ ಮೋದಿ ಸಭೆ

ನವದೆಹಲಿ, ಜ. ೧೧: ಓಮಿಕ್ರಾನ್ ರೂಪಾಂತರದಿAದ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ವರದಿಯಾಗುತ್ತಿರುವುದರಿಂದ ದೇಶದಲ್ಲಿನ ಕೋವಿಡ್-೧೯ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಗುರುವಾರ ಮುಖ್ಯಮಂತ್ರಿಗಳೊAದಿಗೆ ಸಭೆ ನಡೆಸುವ ಸಾಧ್ಯತೆಯಿದೆ. ಓಮಿಕ್ರಾನ್ ಸೋಂಕು ಹರಡದಂತೆ ತಡೆಯಲು ದೇಶದ ಹಲವೆಡೆ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ. ಭಾನುವಾರ ನಡೆದ ಉನ್ನತ ಮಟ್ಟದ ಕೋವಿಡ್ ಪರಾಮರ್ಶನಾ ಸಭೆಯಲ್ಲಿ ಮಾತನಾಡಿದ ಮೋದಿ, ಜಿಲ್ಲಾಮಟ್ಟದಲ್ಲಿ ಸೂಕ್ತ ಆರೋಗ್ಯ ಮೂಲಸೌಕರ್ಯಕ್ಕೆ ವ್ಯವಸ್ಥೆ ಮಾಡಿಕೊಳ್ಳುವಂತೆ ಕರೆ ನೀಡಿದ್ದರು. ಕೋವಿಡ್ ವಿರುದ್ಧದ ಹೋರಾಟದಲ್ಲಿ ವ್ಯಾಕ್ಸಿನೇಷನ್ ಅತ್ಯಂತ ಪರಿಣಾಮಕಾರಿ ಎಂದು ಪ್ರಧಾನಿ ಮೋದಿ ಹೇಳಿದ್ದರು. ಸಾಂಕ್ರಾಮಿಕ ೨೦೨೦ರಲ್ಲಿ ಆರಂಭವಾದಾಗಿನಿAದಲೂ ಪ್ರಧಾನಿ ನರೇಂದ್ರ ಮೋದಿ ಹಲವು ಬಾರಿ ಮುಖ್ಯಮಂತ್ರಿಗಳೊAದಿಗೆ ಸಭೆ ನಡೆಸಿದ್ದಾರೆ.