ಮಡಿಕೇರಿ, ಜ. ೧೧: ಮೇಕೆದಾಟು ಪಾದಯಾತ್ರೆಯಲ್ಲಿ ಕೊಡಗಿನಿಂದ ಕಾಂಗ್ರೆಸ್‌ನ ಹಲವರು ಭಾಗಿಗಳಾಗಿದ್ದರು. ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮತ್ತು ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಮತ್ತು ಕೆಪಿಸಿಸಿ ಕಾರ್ಯದರ್ಶಿಗಳಾದ ಕೆ.ಪಿ. ಚಂದ್ರಕಲಾ, ಮಂಜುಳಾ ರಾಜ್ , ಕದ್ದಣಿಯಂಡ ಹರೀಶ್ ಬೋಪಣ್ಣ, ಮಡಿಕೇರಿ ಬ್ಲಾಕ್ ಅಧ್ಯಕ್ಷ ಹಂಸ ಹೆಚ್.ಎ., ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮಿದೇರಿರ ನವೀನ್, ಡಿಸಿಸಿ ಪದಾಧಿಕಾರಿಗಳಾದ ಸಂದೀಪ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್, ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ಟಾಟೂ ಮೊಣ್ಣಪ್ಪ ಮತ್ತು ಸರಿತಾ ಪೂಣಚ್ಚ, ಮಹಿಳಾ ಜಿಲ್ಲಾ ಕಾರ್ಯದರ್ಶಿ ಮಿನಾಜ್ ಪ್ರವೀಣ್, ಮಾಜಿ ಮೂಡಾ ಅಧ್ಯಕ್ಷ ಚುಮ್ಮಿ ದೇವಯ್ಯ, ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರ್ ಮತ್ತು ಉಪಾಧ್ಯಕ್ಷರುಗಳಾದ ಚಂದ್ರಶೇಖರ್, ಲೋಹಿತ್ ಗೌಡ ಮತ್ತು ಡಿಸಿಸಿ ಪದಾಧಿಕಾರಿಗಳು ಮತ್ತು ರಾಜೀವ್ ಗಾಂಧಿ ಪಂಚಾಯತ್ ಅಧ್ಯಕ್ಷ ತೆನ್ನೀರ ಮೈನಾ, ಪುತ್ತರಿರ ಪಪ್ಪು ತಿಮ್ಮಯ್ಯ ಮತ್ತಿತರರು ಪಾಲ್ಗೊಂಡಿದ್ದರು.