ಕೂಡಿಗೆ, ಜ. ೧೦: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿ ಗ್ರಾಮದಲ್ಲಿರುವ ಕುಶಾಲನಗರದ ಕಸ ವಿಲೇವಾರಿ ಘಟಕದ ಕೇಂದ್ರದಲ್ಲಿ ವೈಜ್ಞಾನಿಕ ಕಸ ವಿಲೇವಾರಿ ಘಟಕ ಸ್ಥಾಪನೆಯ ಕಾಮಗಾರಿಯು ನಡೆಯುತ್ತಿದೆ ಇದರ ಜೊತೆಯಲ್ಲಿ ಈ ಕೇಂದ್ರದಲ್ಲಿರುವ ಪಾರಂಪರಿಕ ತ್ಯಾಜ್ಯ ವನ್ನು ಸಂಸ್ಕರಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿ ಪ್ಲಾಸ್ಟಿಕ್ ಹೊರತು ಪಡಿಸಿ ಉಳಿದ ಕಸದಿಂದ ಸಾವಯವ ಗೊಬ್ಬರವನ್ನು ತಯಾರಿಸುವ ಘಟಕವನ್ನು ತೆರೆಯಲಾಗುವುದು ಎಂದು ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ್ (ಕೇಶವ) ತಿಳಿಸಿದ್ದಾರೆ.

ಇದಕ್ಕೆ ಸಂಬAಧಿಸಿದAತೆ ಬೆಂಗಳೂರಿನ ಖಾಸಗಿ ಏಜೆನ್ಸಿ ತಂಡದವರು ಭುವನಗಿರಿ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪಾರಂಪರಿಕ ತ್ಯಾಜ್ಯದ ವಿಸ್ತರಣೆ ಮತ್ತು ವೈಮಾನಿಕ ಸಮೀಕ್ಷೆಯನ್ನು ನಡೆಸಿದರು.

ಈ ಕಸ ವಿಲೇವಾರಿ ಘಟಕದಲ್ಲಿ ಎಷ್ಟು ಪಾರಂಪರಿಕ ತ್ಯಾಜ್ಯ ಸಂಗ್ರಹವಾಗಿದೆ ಮತ್ತು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ವರದಿಯನ್ನು ನೀಡುವ ಬಗ್ಗೆ ವೈಮಾನಿಕ ಸಮೀಕ್ಷೆಯು ನಡೆಯಿತು.

ಪಟ್ಟಣ ಪಂಚಾಯಿತಿ ಮಾಸಿಕ ಸಭೆಯ ತೀರ್ಮಾನದಂತೆ ಆಧುನಿಕ ತಂತ್ರಜ್ಞಾನದ ಉಪಕರಣಗಳನ್ನು ಬಳಸಿ ಸಾವಯವ ಗೊಬ್ಬರವನ್ನು ತಯಾರಿಸಲಾಗುವುದು ಎಂದು ಅಧ್ಯಕ್ಷ ಜಯವರ್ಧನ್ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್, ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಆರೋಗ್ಯ ಅಧಿಕಾರಿ ಉದಯಕುಮಾರ್ ನೋಡಲ್ ಅಧಿಕಾರಿ ರಾಘವಾ ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.