ಮಡಿಕೇರಿ, ಜ. ೧೧: ರಾಷ್ಟçದಲ್ಲಿ ಕೋವಿಡ್ ೧೯ ಮೂರನೇ ಅಲೆ ಆರಂಭವಾಗಿರುವ ಹಿನ್ನೆಲೆ ಜಿಲ್ಲೆಯಲ್ಲಿ ಕೋವಿಡ್-೧೯ ಪ್ರಕರಣಗಳು ಹೆಚ್ಚಾದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಸಂಬAಧ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ವಿವಿಧ ಅಧಿಕಾರಿಗಳ ಜೊತೆ ಚರ್ಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ಜಿಲ್ಲಾಧಿಕಾರಿಯವರು, ಕೋವಿಡ್-೧೯ ಪ್ರಕರಣಗಳು ಹೆಚ್ಚಾದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದ್ದು, ಆ ನಿಟ್ಟಿನಲ್ಲಿ ಕಳೆದ ಬಾರಿಯಂತೆ ಜಿಲ್ಲೆಯ ೫ ತಾಲೂಕು ವ್ಯಾಪ್ತಿಯಲ್ಲಿ ‘ಕೋವಿಡ್ ಆರೈಕೆ ಕೇಂದ್ರ’ ಆರಂಭಿಸಲು ಅಗತ್ಯ ಕ್ರಮವಹಿಸಬೇಕಿದೆ ಎಂದು ಹೇಳಿದರು.

ಕೋವಿಡ್ ಆರೈಕೆ ಕೇಂದ್ರಗಳನ್ನು ಆದ್ಯತೆ ಮೇಲೆ ಪ್ರತೀ ತಾಲೂಕಿನಲ್ಲಿ ಆರಂಭಿಸಬೇಕಿದೆ. ಆ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಈ ಸಂಬAಧ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗುವುದು. ಕೋವಿಡ್-೧೯ ನಿಯಂತ್ರಣ ಸಂಬAಧ ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಕೋವಿಡ್-೧೯ ಗುಣಲಕ್ಷಣಗಳು ಕಂಡುಬAದಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳು ವುದು. ಸಂಪರ್ಕಿತರನ್ನು ಪತ್ತೆ ಹಚ್ಚುವುದು, ಮತ್ತಿತರ ಕಾರ್ಯ ನಿರ್ವಹಿಸಬೇಕಿದೆ. ಹಾಗೆಯೇ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಕೋವಿಡ್ ೧೯ ನಿಯಂತ್ರಣ ಸಂಬAಧ ಮೊದಲ ಮತ್ತು ಎರಡನೇ ಅಲೆ ಅವಧಿಯಲ್ಲಿ ಕೈಗೊಳ್ಳಲಾಗಿದ್ದ ಮುನ್ನೆಚ್ಚರಿಕಾ ಕೋವಿಡ್ ಆರೈಕೆ ಕೇಂದ್ರ ಸ್ಥಾಪನೆ, ಜೊತೆಗೆ ಅಗತ್ಯ ಆಮ್ಲಜನಕ ದಾಸ್ತಾನು ಮಾಡಿಕೊಳ್ಳು ವುದು ಮತ್ತಿತರ ಬಗ್ಗೆ ಗಮನಹರಿಸು ವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್. ವೆಂಕಟೇಶ್ ಮಾಹಿತಿ ನೀಡಿ ಜಿಲ್ಲೆಯಲ್ಲಿ ಪಾಸಿಟಿವಿಟಿ ಪ್ರಮಾಣ ಸರಾಸರಿ ಒಂದರೊಳಗೆ ಇದ್ದು, ಆತಂಕ ಪಡುವ ಅಗತ್ಯವಿಲ್ಲ, ಆದರೂ ಮುನ್ನೆಚ್ಚರ ವಹಿಸುವುದು ಅಗತ್ಯ ಎಂದು ಹೇಳಿದರು.

ಕೋವಿಡ್-೧೯ ನಿಯಂತ್ರಣ ಸಂಬAಧ ಸರ್ಕಾರದ ಮಾರ್ಗ ಸೂಚಿಯನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು, ಆಗಾಗ ಸ್ಯಾನಿಟೈಸರ್/ ಸೋಪ್ ಬಳಸಿ ಕೈತೊಳೆಯುವುದು, ಹೀಗೆ ಹಲವು ಕಾರ್ಯಗಳನ್ನು ಮಾಡಬೇಕಿದೆ ಎಂದು ಹೇಳಿದರು.

ಕೋವಿಡ್-೧೯ ಗುಣಲಕ್ಷಣಗಳು ಕಂಡುಬAದಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲು ಆಗಬೇಕು. ಇತರರಿಗೆ ಹರಡುವುದನ್ನು ತಡೆಯ ಬೇಕು. ಹೋಂ ಐಸೋಲೇಷನ್ ಉತ್ತಮವಾಗಿದ್ದಲ್ಲಿ ಅಲ್ಲಿಯೂ ಸಹ ಪ್ರತ್ಯೇಕ ಇರಬಹುದಾಗಿದೆ ಎಂದು ಅವರು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಕಳೆದ ಮೊದಲ ಮತ್ತು ಎರಡನೇ ಅಲೆ ಸಂದರ್ಭದಲ್ಲಿ ಮಡಿಕೇರಿ ತಾಲೂಕಿಗೆ ಸಂಬAಧಿಸಿದAತೆ ಕೊಡಗು ವೈದ್ಯಕೀಯ ವಿಜ್ಞಾನ ಕಾಲೇಜು, ನವೋದಯ ಶಾಲೆ, ಮೊರಾರ್ಜಿ ದೇಸಾಯಿ ಶಾಲೆಗಳು ಹೀಗೆ ಹಲವು ಕಡೆಗಳಲ್ಲಿ ಕೋವಿಡ್ ಆರೈಕೆ ಕೇಂದ್ರ ಆರಂಭಿಸಲಾಗಿತ್ತು ಎಂದು ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಲೋಕೋಪಯೋಗಿ ಇಲಾಖೆಯ ಎಇಇ ಶಿವರಾಮ್, ಭೂ ದಾಖಲೆಗಳ ಉಪ ನಿರ್ದೇಶಕ ಪಿ.ಶ್ರೀನಿವಾಸ್, ಜಿ.ಪಂ. ಯೋಜನಾ ನಿರ್ದೇಶಕ ಶ್ರೀಕಂಠಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಶಂಕರ್ ನಾರಾಯಣ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಸುರೇಶ್ ಭಟ್, ಖಜಾನೆ ಇಲಾಖೆಯ ಉಪ ನಿರ್ದೇಶಕರಾದ ಪದ್ಮಜಾ, ಐಟಿಡಿಪಿ ಇಲಾಖಾ ಅಧಿಕಾರಿ ಶ್ರೀನಿವಾಸ್, ಬಿಸಿಎಂ ಇಲಾಖೆ ಅಧಿಕಾರಿ ಮಂಜುನಾಥ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಮೋದ್, ತಾಲೂಕು ಕಾರ್ಮಿಕ ಅಧಿಕಾರಿ ಯತ್ನಟ್ಟಿ, ಹಿರಿಯ ಭೂ ವಿಜ್ಞಾನಿ ಶ್ರೀನಿವಾಸ್, ಸಾರ್ವಜನಿಕ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣಾಧಿಕಾರಿ ವೆಂಕಟೇಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಎಸ್. ಗುರುಸ್ವಾಮಿ, ಸೆಸ್ಕ್ ಎಇಇ ವಿನಯ ಕುಮಾರ್, ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ವಿಶಾಲ್ ಕುಮಾರ್ ಇತರರು ಇದ್ದರು.