ಬೆಂಗಳೂರಿನಲ್ಲಿ ೧೪೬ ಓಮಿಕ್ರಾನ್, ರಾಜ್ಯದಲ್ಲಿ ೧೧,೬೯೮ ಹೊಸ ಕೋವಿಡ್-೧೯ ಪ್ರಕರಣಗಳು
ಬೆಂಗಳೂರು, ಜ. ೧೦: ಬೆಂಗಳೂರಿನಲ್ಲಿ ೧೪೬ ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು ರಾಜ್ಯದಲ್ಲಿ ಒಟ್ಟು ಓಮಿಕ್ರಾನ್ ಸೋಂಕು ೪೭೯ಕ್ಕೆ ಏರಿಕೆಯಾಗಿದೆ. ರಾಜ್ಯಾದ್ಯಂತ ೨೪ ಗಂಟೆಗಳಲ್ಲಿ ೧೧,೬೯೮ ಹೊಸ ಕೋವಿಡ್-೧೯ ಸೋಂಕು ಪ್ರಕರಣಗಳು ವರದಿಯಾಗಿದ್ದು, ನಾಲ್ವರು ಕೋವಿಡ್-೧೯ ಸೋಂಕಿನಿAದ ಸಾವನ್ನಪ್ಪಿದ್ದಾರೆ (ಬೆಂಗಳೂರು-೨) ಬೆಂಗಳೂರು ಒಂದರಲ್ಲೇ ೯,೨೨೧ ಮಂದಿಗೆ ಕೋವಿಡ್-೧೯ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್-೧೯ ಪಾಸಿಟಿವಿಟಿ ದರ ೭.೭೭%ಕ್ಕೆ ಏರಿಕೆಯಾಗಿದೆ. ಕಳೆದ ೨೪ ಗಂಟೆಗಳಲ್ಲಿ ೧,೧೪೮ ಕೋವಿಡ್-೧೯ ನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿ ೬೦,೧೪೮ ಏರಿಕೆಯಾಗಿದ್ದು, ಬೆಂಗಳೂರು ಒಂದರಲ್ಲೇ ೪೯ ಸಾವಿರ ದಾಟಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಓಮಿಕ್ರಾನ್ ಏರಿಕೆ: ಪರಿಸ್ಥಿತಿ ಬದಲಾಗಬಹುದು- ಕೇಂದ್ರ
ನವದೆಹಲಿ, ಜ. ೧೦: ಭಾರತದಲ್ಲಿ ೨೪ ಗಂಟೆಗಳ ಅವಧಿಯಲ್ಲಿ ೧,೭೯,೭೨೩ ಕೊರೊನಾ ಪ್ರಕರಣಗಳಿದ್ದು, ೧೪೬ ಸಾವು ಸಂಭವಿಸಿದೆ. ಮಹಾರಾಷ್ಟçದಲ್ಲಿ ಅತಿ ಹೆಚ್ಚು-೧,೨೧೬ ಓಮಿಕ್ರಾನ್ ಪ್ರಕರಣಗಳು ವರದಿಯಾಗುವ ಮೂಲಕ ದೇಶದಲ್ಲಿ ಹೊಸ ರೂಪಾಂತರಿಯ ಸೋಂಕು ೪,೦೩೩ ಕ್ಕೆ ಏರಿಕೆಯಾಗಿದೆ. ರಾಜಸ್ಥಾನದಲ್ಲಿ ಓಮಿಕ್ರಾನ್ ಸಂಖ್ಯೆ ೫೨೯ ಕ್ಕೆ ಏರಿಕೆಯಾಗಿದ್ದು ದೆಹಲಿಯಲ್ಲಿ ೫೧೩, ಕರ್ನಾಟಕದಲ್ಲಿ ೪೪೧, ಕೇರಳದಲ್ಲಿ ೩೩೩, ಗುಜರಾತ್‌ನಲ್ಲಿ ೨೩೬, ತಮಿಳುನಾಡಿನಲ್ಲಿ ೧೮೫ ಪ್ರಕರಣಗಳು ಪತ್ತೆಯಾಗಿವೆ. ಓಮಿಕ್ರಾನ್ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ದೇಶದ ಹಲವು ಭಾಗಗಳಲ್ಲಿ ಆದ್ಯತೆಯ ಮಂದಿಗೆ ಮೂರನೇ ಡೋಸ್ ಲಸಿಕೆ ನೀಡುವ ಅಭಿಯಾನ ಪ್ರಾರಂಭವಾಗಿದೆ. ಈ ನಡುವೆ ಕೋವಿಡ್-೧೯ ಪರಿಸ್ಥಿತಿಯ ಬಗ್ಗೆ ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮಾತನಾಡಿದ್ದು, ಎರಡನೇ ಅಲೆಯಲ್ಲಿ ಸಕ್ರಿಯ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆಯೇ ಶೇ.೨೦-೨೩ ರಷ್ಟು ಪ್ರಕರಣಗಳಿಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವ ಅಗತ್ಯತೆ ಉಂಟಾಗಿತ್ತು. ಈಗ ಮೂರನೇ ಅಲೆಯಲ್ಲಿ ಸಕ್ರಿಯ ಪ್ರಕರಣಗಳ ಪೈಕಿ ಶೇ.೫-೧೦ ರಷ್ಟು ಪ್ರಕರಣಗಳಿಗೆ ಆಸ್ಪತ್ರೆಯ ಅಗತ್ಯವಿದೆ. ಇದು ಈವರೆಗಿನ ಚಿತ್ರಣವಾಗಿದ್ದು, ಪರಿಸ್ಥಿತಿ ಕ್ಷಿಪ್ರಗತಿಯಲ್ಲಿ ಬದಲಾಗುವ ಸಾಧ್ಯತೆ ಇದ್ದು, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿಯೂ ಬದಲಾವಣೆಯಾಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ ಎಂದು ಎಚ್ಚರಿಸಿದ್ದಾರೆ.
ಪ್ರಧಾನಿಗೆ ಭದ್ರತಾ ಲೋಪ: ತನಿಖಾ ಸಮಿತಿ ರಚನೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ!
ನವದೆಹಲಿ, ಜ. ೧೦: ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಪಂಜಾಬ್ ಭೇಟಿಯ ಸಂದರ್ಭದಲ್ಲಿ ಸಂಭವಿಸಿದ ಭದ್ರತಾ ಲೋಪ ಪ್ರಕರಣಕ್ಕೆ ಸಂಬAಧಿಸಿದAತೆ ಕೇಂದ್ರ ಮತ್ತು ಪಂಜಾಬ್ ಸರ್ಕಾರ ನಡೆಸುತ್ತಿರುವ ಎರಡು ಪ್ರತ್ಯೇಕ ಸಮಿತಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದ್ದು, ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ರಚಿಸಲು ಒಪ್ಪಿಗೆ ನೀಡಿದೆ. ಡಿಜಿಪಿ ಚಂಡೀಗಢ, ಎನ್‌ಐಎ ಐಜಿ ಮತ್ತು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ರಿಜಿಸ್ಟಾçರ್ ಜನರಲ್ ಭಾಗವಾಗಿರುವ ಸಮಿತಿಯನ್ನು ಸ್ಥಾಪಿಸುವ ಕುರಿತು ಶೀಘ್ರದಲ್ಲೇ ವಿವರವಾದ ಆದೇಶಗಳನ್ನು ಹೊರಡಿಸಲಾಗುವುದು ಎಂದು ಹೇಳಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಪಂಜಾಬ್ ನ ಫಿರೋಝ್ ಪುರದಲ್ಲಿನ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಭದ್ರತಾ ಲೋಪ ನಡೆದ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕೋರಿ ವಕೀಲರ ಧ್ವನಿ ಎಂಬ ಸಂಘಟನೆ ಮಾಡಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಜನವರಿ ೫ ರಂದು, ಫಿರೋಜ್‌ಪುರದಲ್ಲಿ ಪ್ರತಿಭಟನಾಕಾರರ ದಿಗ್ಬಂಧನದಿAದಾಗಿ ಪ್ರಧಾನಿಯವರ ಬೆಂಗಾವಲು ಪಡೆ ಹೆದ್ದಾರಿಯಲ್ಲಿ ಸಿಕ್ಕಿಹಾಕಿಕೊಂಡಿತ್ತು. ಬಳಿಕ ಯಾವುದೇ ಕಾರ್ಯಕ್ರಮದಲ್ಲೂ ಭಾಗಿಯಾಗದೆ ವಾಪಸ್ಸಾಗಿದ್ದರು.
ರಕ್ಷಣಾ ಸಚಿವ ರಾಜನಾಥ್ ಸಿಂಗ್‌ಗೆ ಕೊರೊನಾ ಪಾಸಿಟಿವ್
ನವÀದೆಹಲಿ, ಜ. ೧೦: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕೋವಿಡ್ -೧೯ ಪಾಸಿಟಿವ್ ದೃಢಪಟ್ಟಿದ್ದು, ಪ್ರಸ್ತುತ "ಸೌಮ್ಯ ರೋಗ ಲಕ್ಷಣಗಳೊಂದಿಗೆ" ಹೋಮ್ ಕ್ವಾರಂಟೈನ್‌ನಲ್ಲಿರುವುದಾಗಿ ಸೋಮವಾರ ತಿಳಿಸಿದ್ದಾರೆ. "ನಾನು ಇಂದು ಸೌಮ್ಯ ರೋಗ ಲಕ್ಷಣಗಳೊಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ನಾನು ಈಗ ಹೋಮ್ ಕ್ವಾರಂಟೈನ್‌ನಲ್ಲಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ಹೋಮ್ ಕ್ವಾರಂಟೈನ್ ಆಗುವಂತೆ ಮತ್ತು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ವಿನಂತಿಸುತ್ತೇನೆ" ಎಂದು ರಕ್ಷಣಾ ಸಚಿವರು ಟ್ವೀಟ್ ಮಾಡಿದ್ದಾರೆ. ಜನವರಿ ೮ ರಂದು ರಾಜನಾಥ್ ಸಿಂಗ್ ಅವರು ವೆಬ್‌ನಾರ್ ಅನ್ನು ಉದ್ದೇಶಿಸಿ ಮಾತನಾಡಿದ್ದರು.
ಕೋವಿಡ್ ನಿಯಮ ಉಲ್ಲಂಘನೆ : ಕಾಂಗ್ರೆಸ್ ವಿರುದ್ಧ ಕ್ರಮ
ಬೆಂಗಳೂರು, ಜ. ೧೦: ಮೇಕೆದಾಟು ಪಾದಯಾತ್ರೆ ವೇಳೆ ಕಾಂಗ್ರೆಸ್ ನಿಂದ ಕೋವಿಡ್ ನಿಯಮ ಉಲ್ಲಂಘನೆಯಾಗಿರುವುದು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಕಾನೂನು ಉಲ್ಲಂಘನೆ ಮಾಡಿದವರು ಎಷ್ಟೇ ದೊಡ್ಡ ನಾಯಕರಾದರೂ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದ್ದಾರೆ. ಆರ್‌ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕೋವಿಡ್ ನಿಯಮ ಉಲ್ಲಂಘಿಸುವ ಎಲ್ಲರ ವಿರುದ್ಧ ಕ್ರಮ ಖಚಿತ. ಎಷ್ಟೇ ದೊಡ್ಡ ನಾಯಕ ಇರಲಿ ಅಥವಾ ಜನ ಸಾಮಾನ್ಯ ಇರಲಿ. ಕಾನೂನು ರೀತಿ ಕ್ರಮ ಖಚಿತ. ಪಾದಯಾತ್ರೆ ವೇಳೆ ನಿಯಮ ಉಲ್ಲಂಘಿಸಿದವರಿಗೂ ಇದು ಅನ್ವಯಿಸುತ್ತದೆ ಎಂದು ಹೇಳಿದ್ದಾರೆ. ಸ್ವಾಬ್ ಟೆಸ್ಟ್ ವೇಳೆ ಅಧಿಕಾರಿಗಳ ವಿರುದ್ಧ ಡಿಕೆಶಿ ಗರಂ ಆಗಿದ್ದಾರೆ. ಆದರೆ ನಾವು ಅವರ ಆರೋಗ್ಯದ ಬಗ್ಗೆ ಚಿಂತನೆ ಮಾಡುತ್ತಿದ್ದೇವೆ. ಅವರು ಸುದೀರ್ಘವಾಗಿ ನಡೆದ ಸಂದರ್ಭದಲ್ಲಿ ಅವರ ಆರೋಗ್ಯ ತಪಾಸಣೆ ಮಾಡಬೇಕು. ಅವರೊಬ್ಬರಿಗೆ ಅಲ್ಲ ಎಲ್ಲರಿಗೂ ಆರೋಗ್ಯ ತಪಾಸಣೆ ಮಾಡಬೇಕು. ಇದು ಆರೋಗ್ಯ ಇಲಾಖೆ ಕರ್ತವ್ಯ ಮತ್ತು ಔದಾರ್ಯ. ಇದನ್ನು ಅರ್ಥ ಮಾಡಿಕೊಳ್ಳದೇ ಬಾಯಿಗೆ ಬಂದ ಹಾಗೇ ಮಾತನಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಾನೂನು ಪಾಲನೆ ಮಾಡದವರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ವಿಫಲವಾಗಿಲ್ಲ. ಯರ‍್ಯಾರು ಕಾನೂನು ಉಲ್ಲಂಘನೆ ಮಾಡುತ್ತಾರೋ ಅವರ ಮೇಲೆ ಪ್ರಕರಣ ದಾಖಲಾಗುತ್ತದೆ. ಪಾದಯಾತ್ರೆ ಮಾಡುವವರ ಮೇಲೆಯೂ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿರುವುದರಲ್ಲಿ ಯಾವುದೇ ಭೇದ ಭಾವವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಸಂಕ್ರಾAತಿ ಬಳಿಕ ಕೆಲ ಜಿಲ್ಲೆಗಳಲ್ಲಿ ನಿರ್ಬಂಧ ಸಡಿಲಿಕೆ ಮಾಡುವ ವಿಚಾರ ಕುರಿತು ಮಾತನಾಡದ ಮುಖ್ಯಮಂತ್ರಿಗಳು, ಕೋವಿಡ್ ಯಾವ ರೀತಿ ಬೆಳವಣಿಗೆ ಆಗುತ್ತದೆ. ಅದರ ಆಧಾರದ ಮೇಲೆ ಕ್ರಮ, ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.
೩೫ ಮಂದಿ ವಿರುದ್ಧ ಎಫ್‌ಐಆರ್ ದಾಖಲು
ಬೆಂಗಳೂರು, ಜ. ೧೦: ಕನಕಪುರದ ಕಾವೇರಿ ಸಂಗಮದಿAದ ಕಾಂಗ್ರೆಸ್ ವತಿಯಿಂದ ನಿನ್ನೆ ಆರಂಭಗೊAಡ ಮೇಕೆದಾಟು ಪಾದಯಾತ್ರೆಯು ಸಾಯಂಕಾಲ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹುಟ್ಟೂರು ದೊಡ್ಡ ಆಲಹಳ್ಳಿ ಗ್ರಾಮಕ್ಕೆ ತಲುಪಿತ್ತು. ಪಾದಯಾತ್ರೆ ಮುಂದುವರೆದಿದ್ದು, ಜ.೧೯ರಂದು ಕೊನೆಯ ದಿನ ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನಕ್ಕೆ ಸಾಗಿ ಅಲ್ಲಿ ಸಮಾರೋಪ ಸಭೆ ನಡೆಯಲಿದೆ. ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪಾದಯಾತ್ರೆಯ ವೀಡಿಯೋಗಳನ್ನು ಸೂಕ್ಷö್ಮವಾಗಿ ಗಮನಿಸುತ್ತಲೇ ಇದ್ದೇವೆ ಎಂದು ಜಿಲ್ಲಾ ಉಪ ಆಯುಕ್ತ ರಾಕೇಶ್ ಕುಮಾರ್ ಅವರು ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ೩೫ ಮಂದಿ ವಿರುದ್ಧ ಮೊಕದ್ದಮೆ ದಾಖಲಿಸಿರುವದಾಗಿ ತಿಳಿಸಿದ್ದಾರೆ.
ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ (ಚಂಪಾ) ಅಸ್ತಂಗತ
ಬೆAಗಳೂರು, ಜ. ೧೫: ಚಂಪಾ ಎಂದೇ ಪ್ರಖ್ಯಾತರಾಗಿದ್ದ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ ಅವರು ಇಂದು ಮುಂಜಾನೆ ನಿಧನ ಹೊಂದಿದರು. ಅವರಿಗೆ ೮೩ ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಕೋಣನಕುಂಟೆ ಆಸ್ಟಾç ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಧಾರವಾಡದವರಾದ ಚಂಪಾ ಅವರು ಕೆಲವಾರು ವರ್ಷಗಳಿಂದ ಬೆಂಗಳೂರು ನಿವಾಸಿಯಾಗಿದ್ದರು. ಮೂಲತಃ ಇಂಗ್ಲಿಷ್ ಪ್ರಾಧ್ಯಾಪಕರು. ಕನ್ನಡ ವಿಮರ್ಶೆ ಕ್ಷೇತ್ರ, ನಾಟಕ ರಚನೆಯಲ್ಲಿ ಪ್ರಸಿದ್ಧರು. ಅವರು ರಚಿಸಿದ ನಾಟಕಗಳು ನಾಡಿನಲ್ಲಿ ಹೊರನಾಡು ವಿದೇಶಗಳಲ್ಲಿಯೂ ಪ್ರದರ್ಶಿತವಾಗಿವೆ. ಅವರ ವಿಮರ್ಶೆಯೆಂದರೆ ಬಹು ಹರಿತ ಎಂದೇ ಖ್ಯಾತವಾಗಿತ್ತು.