ಮಡಿಕೇರಿ, ಜ. ೧೦: ಯುನೈಟೆಡ್ ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್ ವತಿಯಿಂದ ಭಾರತ ಕಮ್ಯೂನಿಸ್ಟ್ ಪಕ್ಷದ ಸದಸ್ಯತ್ವ ಅಭಿಯಾನ ಮತ್ತು ತರಬೇತಿ ಕಾರ್ಯಕ್ರಮ ಮಾದಾಪುರದಲ್ಲಿ ನಡೆಯಿತು.

ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಾಸನ ಜಿಲ್ಲಾ ಸಿಪಿಐ ಕಾರ್ಯದರ್ಶಿ ಎಂ.ಪಿ.ಡೋAಗ್ರೆ, ಅಂರ‍್ರಾಷ್ಟಿçÃಯ ಮಟ್ಟದ ತತ್ವವನ್ನು ಹೊಂದಿರುವ ಭಾರತ ಕಮ್ಯೂನಿಸ್ಟ್ ಪಕ್ಷ ತನ್ನದೇ ಆದ ಇತಿಹಾಸವನ್ನು ಹೊಂದಿದೆ. ಇದೀಗ ಕೊಡಗು ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನವನ್ನು ಪ್ರಾರಂಭಿಸುತ್ತಿರು ವುದು ಉತ್ತಮ ಬೆಳವಣಿಗೆಯಾಗಿದೆ. ದುಡಿಯುವ ವರ್ಗ ಒಂದೇ ವೇದಿಕೆಯಡಿ ಪ್ರಮುಖ ಮೂಲಭೂತ ಬೇಡಿಕೆಗಳನ್ನು ಈಡೇರಿಸಿಕೊಳ್ಳು ವಂತಾಗಬೇಕು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ಪಕ್ಷದ ಸದಸ್ಯತ್ವವನ್ನು ಪಡೆದುಕೊಂಡು ಒಗ್ಗಟ್ಟನ್ನು ಕಾಯ್ದುಕೊಳ್ಳಬೇಕೆಂದು ಕರೆ ನೀಡಿದರು.

ಪಕ್ಷದ ರಾಜ್ಯ ಮಂಡಳಿ ಸದಸ್ಯ ಬಿ.ಅಂಜಾದ್ ಮಾತನಾಡಿ, ದೇಶದಲ್ಲಿ ಕಾರ್ಮಿಕರ ಬದುಕು ಸಂಕಷ್ಟಕ್ಕೆ ಸಿಲುಕಿದ್ದು, ರಾಜಕೀಯ ಮತ್ತು ಸಾಮಾಜಿಕ ವ್ಯವಸ್ಥೆ ಕವಲು ದಾರಿಯಲ್ಲಿ ಸಾಗುತ್ತಿದೆ ಎಂದು ಆರೋಪಿಸಿದರು.

ಹಾಸನ ಜಿಲ್ಲಾ ಸಹ ಕಾರ್ಯದರ್ಶಿ ಧರ್ಮರಾಜ್ ಮಾತನಾಡಿ, ಇಂದು ಹಣ ಉಳ್ಳವನ ಕೈಯಲ್ಲಿ ಅಧಿಕಾರ ಇದ್ದು, ಬಡವ ಬಡವನಾಗಿ, ಶ್ರೀಮಂತ ಶ್ರೀಮಂತ ನಾಗಿಯೇ ಉಳಿದುಕೊಂಡಿದ್ದಾನೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ಕನಸು ನನಸಾಗಬೇಕಾದರೆ ರಾಜ್ಯದಲ್ಲಿ ರೈತರ ಹಾಗೂ ಕಾರ್ಮಿಕರ ಪರವಾದ ಪಕ್ಷ ಬಲಗೊಳ್ಳುವ ಅಗತ್ಯವಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಯುನೈಟೆಡ್ ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್‌ನ ಜಿಲ್ಲಾಧ್ಯಕ್ಷ ಹೆಚ್.ಎಂ. ಸೋಮಪ್ಪ ಸ್ವಾತಂತ್ರö್ಯ ಬಂದು ೭೫ ವರ್ಷಗಳೇ ಕಳೆದರು ಕಾರ್ಮಿಕರು ಹಾಗೂ ರೈತರ ಪರ ಮಾತನಾಡುವ ಯಾವುದೇ ರಾಜಕೀಯ ಪಕ್ಷಗಳಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕೊಡಗು ಜಿಲ್ಲೆಯಲ್ಲಿ ವಸತಿ ಸಮಸ್ಯೆ ಕಾಡುತ್ತಿದ್ದು, ಕಾಫಿ ತೋಟಗಳಲ್ಲಿ ದುಡಿಯುತ್ತಿರುವ ಕಾರ್ಮಿಕರು ಕಳೆದ ಅನೇಕ ವರ್ಷ ಗಳಿಂದ ಲೈನ್ ಮನೆಗಳಲ್ಲಿ ಮತ್ತು ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದಾರೆ. ಸ್ವಂತ ಸೂರಿಲ್ಲದೆ ಪರದಾಡುತ್ತಿರುವ ಇವರು ಸರಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಸಂಘಟನೆಯ ಮೂಲಕ ಹಲವು ಹೋರಾಟ ಹಾಗೂ ಸರ್ಕಾರಕ್ಕೆ ಮನವಿ ಸಲ್ಲಿಸುವ ಕೆಲಸ ಮಾಡಲಾಗಿದೆ. ಆದರೆ ಇದುವರೆಗೂ ಯಾವುದೇ ಸ್ಪಂದನೆ ದೊರಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ೭೫ಕ್ಕೂ ಹೆಚ್ಚು ಮಂದಿ ಸಿಪಿಐ ಸದಸ್ಯತ್ವ ಪಡೆದುಕೊಂಡರು. ಎಐಟಿಯುಸಿ ಉಪಾಧ್ಯಕ್ಷ ಎನ್.ಮಣಿ, ಸೂರಿಗಾಗಿ ಸಮಿತಿ ಅಧ್ಯಕ್ಷ ಅಣ್ಣಪ್ಪ, ಕಾರ್ಯದರ್ಶಿ ಶಬಾನ ಮತ್ತಿತರರು ಉಪಸ್ಥಿತರಿದ್ದರು.