ಮಡಿಕೇರಿ, ಜ. ೧೧: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನೆಹರು ಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ ತಾಲೂಕು ಯುವ ಒಕ್ಕೂಟ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ರಾಷ್ಟಿçÃಯ ಸೇವಾ ಯೋಜನಾ ಘಟಕ, ಹಾಗೂ ಕಗ್ಗೋಡ್ಲು ಕಾವೇರಿ ಯುವಕ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಟ್ಟದ ರಾಷ್ಟಿçÃಯ ಯುವ ದಿನ ಹಾಗೂ ಯುವ ಸಪ್ತಾಹ ಉದ್ಘಾಟನಾ ಕಾರ್ಯಕ್ರಮವು ತಾ. ೧೨ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಎಫ್ಎಂಕೆಎAಸಿ. ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಎಫ್ಎಂಕೆಎAಸಿ ಕಾಲೇಜು ಪ್ರಾಂಶುಪಾಲ ಡಾ. ಚೌರೀರ ಜಗತ್ ತಿಮ್ಮಯ್ಯ, ಪದವಿ ಕಾಲೇಜು ಉಪನ್ಯಾಸಕ ಕೆ.ಸಿ. ದಯಾನಂದ, ನೆಹರು ಯುವ ಕೇಂದ್ರದ ಅಧಿಕಾರಿ ಕೆ.ಟಿ.ಕೆ. ಉಲ್ಲಾಸ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಎಸ್. ಗುರುಸ್ವಾಮಿ, ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ. ಸುಕುಮಾರ್, ತಾಲೂಕು ಯುವ ಒಕ್ಕೂಟದ ಅಧ್ಯಕ್ಷ ನವೀನ್ ದೇರಳ ಇತರರು ಪಾಲ್ಗೊಳ್ಳಲಿದ್ದಾರೆ.