ಮಡಿಕೇರಿ, ಜ. ೧೨: ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ೨೦೨೧-೨೨ನೇ ಸಾಲಿಗೆ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಅರ್ಹ ವಿಶೇಷಚೇತನರು ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ತಾ. ೨೫ ಕೊನೆಯ ದಿನವಾಗಿದೆ. ಅರ್ಜಿಗಳನ್ನು ಕಚೇರಿಯಿಂದ ಅಥವಾ ಆಯಾಯ ತಾಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ ಪಡೆಯಬಹುದಾಗಿದೆ.

ಯೋಜನೆಗಳ ವಿವರ: ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಬಹುಮಾನಕ್ಕೆ ಪಬ್ಲಿಕ್ ಪರೀಕ್ಷೆಗಳಲ್ಲಿ ಶೇ.೬೦ ಕ್ಕಿಂತಲೂ ಹೆಚ್ಚಿನ ಅಂಕಗಳನ್ನು ಪಡೆದ, ವ್ಯಾಸಂಗ ಮಾಡುತ್ತಿರುವ ವಿಶೇಷಚೇತನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಂಧ ವಿದ್ಯಾರ್ಥಿಗಳಿಗೆ ಬ್ರೆöÊಲ್ ಕಿಟ್ ಕನಿಷ್ಟ ಎಸ್‌ಎಸ್‌ಎಲ್‌ಸಿ ಹಾಗೂ ನಂತರದ ಉನ್ನತ ಶಿಕ್ಷಣದ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆಯಂತ್ರಕ್ಕೆ ೧೮-೪೫ ವರ್ಷ ವಯೋಮಿತಿಯೊಳಗಿನ ಶ್ರವಣದೋಷವುಳ್ಳ ವಿಕಲಚೇತನರು ಅರ್ಜಿ ಸಲ್ಲಿಸಬಹುದು. ಟಾಕಿಂಗ್ ಲ್ಯಾಪ್ ಟಾಪ್ ಮತ್ತು ಬ್ರೆöÊಲ್ ಕಿಟ್: ೧೦ನೇ ತರಗತಿ ಮೇಲ್ಪಟ್ಟು ವ್ಯಾಸಂಗ ಮಾಡುತ್ತಿರುವ ದೃಷ್ಟಿದೋಷವುಳ್ಳ ವಿಶೇಷಚೇತನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ದೂ.ಸಂ.೦೮೨೭೨-೨೯೫೮೨೯ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧೀನದಲ್ಲಿ ಹೊಸದಾಗಿ ಮಡಿಲು ಸರ್ಕಾರಿ ವಿಶೇಷ ದತ್ತು ಸಂಸ್ಥೆ ಪ್ರಾರಂಭಿಸಲಾಗಿದೆ. ಈ ಸಂಸ್ಥೆಯಲ್ಲಿ ೦-೬ ವರ್ಷದ ಅನಾಥ, ಪರಿತ್ಯಜಿಸಲ್ಪಟ್ಟ ಹಾಗೂ ಒಪ್ಪಿಸಲ್ಪಟ್ಟ ಪಾಲನೆ ಮತ್ತು ರಕ್ಷಣೆ ಅಗತ್ಯವಿರುವ ಮಕ್ಕಳು ಈ ಸಂಸ್ಥೆಯಲ್ಲಿದ್ದು, ಈ ಮಕ್ಕಳನ್ನು ಪೋಷಿಸಲು ೩ ಆಯಾ ಹುದ್ದೆ ಹಾಗೂ ೧ ರಕ್ಷಕ ಹುದ್ದೆಗಳ ಅವಶ್ಯಕತೆ ಇದೆ. ಅರ್ಹ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಕೆಲಸಕ್ಕೆ ಬರುವ ಸಿಬ್ಬಂದಿಗಳು ಹಗಲು, ರಾತ್ರಿ ಪಾಳಿ ರೀತಿಯಲ್ಲಿ ಕೆಲಸ ನಿರ್ವಹಿಸಲು ಸಿದ್ಧರಿರಬೇಕು. ಅರ್ಜಿ ಸಲ್ಲಿಸುವವರು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಡಿಕೇರಿ ದೂ. ೦೮೨೭೨-೨೨೮೮೦೦ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅರುಂಧತಿ ತಿಳಿಸಿದ್ದಾರೆ.

ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳ ಆಯ್ಕೆಗೆ

ಪ್ರಧಾನಮಂತ್ರಿ ಅವರ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧ ಗೊಳಿಸುವಿಕೆ ಯೋಜನೆಯಡಿ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳ ಆಯ್ಕೆಗೆ ಅರ್ಜಿ ಆಹ್ವಾನಿಸಲಾಗಿದೆ.

ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಉದ್ದಿಮೆಗಳ ಮಂತ್ರಾಲಯವು, ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ (ಪಿಎಂಎಫ್‌ಎAಇ) ಪ್ರಾರಂಭಿಸಲಾಗಿದೆ. ಈ ಯೋಜನೆಯ ಮೂಲ ಉದ್ದೇಶವು ಆಹಾರ ಸಂಸ್ಕರಣೆಯ ಅಸಂಘಟಿತ ಅತೀ ಸಣ್ಣ ಉದ್ಯಮ ಕ್ಷೇತ್ರದ ಕೊಡುಗೆ ಹಾಗೂ ಅವುಗಳ ಕಾರ್ಯಕ್ಷಮತೆಗೆ ತೊಡಕಾಗುತ್ತಿರುವ ಸವಾಲುಗಳನ್ನು ಗಣನೆಗೆ ತೆಗೆದುಕೊಂಡು, ಅತೀ ಸಣ್ಣ ಉದ್ಯಮಗಳು ಸಾಮಾನ್ಯ ಸೇವೆಗಳನ್ನು ಪಡೆದುಕೊಳ್ಳುವಂತೆ ಉತ್ತೇಜಿಸಲಾಗುತ್ತದೆ.

ಈ ಯೋಜನೆಯ ಅನುಷ್ಠಾನಕ್ಕೆ ಕೃಷಿ ಇಲಾಖೆಯು ನೋಡಲ್ ಇಲಾಖೆಯಾಗಿದೆ. ಈ ಯೋಜನೆಯಡಿ, ವೈಯಕ್ತಿಕ ಕಿರು ಆಹಾರ ಸಂಸ್ಕರಣಾ ಘಟಕಗಳ ಉನ್ನತೀಕರಣ, ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಗುಂಪುಗಳು, ಉತ್ಪಾದಕರ ಸಹಕಾರ ಸಂಘಗಳು ಹಾಗೂ ಸಹಕಾರ ಸೊಸೈಟಿಗಳಿಗೆ ಬಂಡವಾಳ ಹೂಡಿಕೆ, ಸಾಮಾನ್ಯ ಮೂಲಭೂತ ಸೌಕರ್ಯಕ್ಕಾಗಿ ಬ್ರಾö್ಯಂಡಿAಗ್ ಹಾಗೂ ಮಾರುಕಟ್ಟೆಗೆ ಬೆಂಬಲ ನೀಡಲಾಗುತ್ತದೆ.

ಇದರಲ್ಲಿ ಕಚ್ಚಾ ವಸ್ತುಗಳ ಸಂಗ್ರಹ, ಸಾಮಾನ್ಯ ಸೇವೆಗಳನ್ನು ಪಡೆಯುವುದು ಹಾಗೂ ಉತ್ಪನ್ನಗಳ ಮಾರ್ಕೆಟಿಂಗ್ ವಿಷಯಗಳಿಗೆ ಸಂಬAಧಪಟ್ಟAತೆ ಹೆಚ್ಚಿನ ಲಾಭವನ್ನು ಪಡೆಯಲು’ಒಂದು ಜಿಲ್ಲೆ ಒಂದು ಉತ್ಪನ್ನ’ (ಒಡಿಒಪಿ) ದೃಷ್ಟಿಕೋನವನ್ನು ಅಳವಡಿಸಿಕೊಂಡಿದೆ. ಕೊಡಗು ಜಿಲ್ಲೆಯಲ್ಲಿ ವಿಸ್ತಾರವಾಗಿ ಉತ್ಪಾದಿಸಲಾಗುವಂತಹ ಕಾಫಿ ಬೆಳೆಯನ್ನು ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಗುತ್ತದೆ.

ಈ ಯೋಜನೆಗೆ ಸಂಬAಧಿಸಿದAತೆ ಸೂಕ್ತ ಫಲಾನುಭವಿಗಳನ್ನು ಗುರುತಿಸುವಿಕೆ, ಯೋಜನಾ ವರದಿ ಸಿದ್ಧತೆ, ಫಲಾನುಭವಿಗಳು ಸಾಲ ಪಡೆಯಲು ಬ್ಯಾಂಕ್‌ನೊAದಿಗೆ ಸಂಪರ್ಕ, ಘಟಕಗಳ ನೋಂದಣಿ ಹಾಗೂ ಕೈ ಆಸರೆ ಬೆಂಬಲ ನೀಡುವುದಕ್ಕೆ ಜಿಲ್ಲಾಮಟ್ಟಕ್ಕೆ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳ ಶೈಕ್ಷಣಿಕ ಅರ್ಹತೆ: ಯಾವುದೇ ಕ್ಷೇತ್ರದಲ್ಲಿ ಸ್ನಾತಕ ಪದವಿ ಹೊಂದಿರಬೇಕು ಅಥವಾ ಸಮಾನವಾದ ಪದವಿ ಹೊಂದಿರಬೇಕು. ಆಹಾರ ತಂತ್ರಜ್ಞಾನದ/ ಆಹಾರ ಎಂಜಿನಿಯರಿAಗ್‌ನಲ್ಲಿ ಪ್ರತಿಷ್ಠಿತ ರಾಷ್ಟç/ ಅಂರ‍್ರಾಷ್ಟಿçÃಯ ವಿಶ್ವವಿದ್ಯಾಲಯ/ ಸಂಸ್ಥೆಗಳಿAದ ಡಿಪ್ಲೊಮಾ/ ಪದವಿ ಪಡೆದಿರಬೇಕು.

ಆಹಾರ ಸಂಸ್ಕರಣಾ ಕೈಗಾರಿಕೆಗಳಿಗೆ ತಂತ್ರಜ್ಞಾನ ಉನ್ನತೀಕರಣ, ಹೊಸ ಉತ್ಪನ್ನ ಅಭಿವೃದ್ಧಿ, ಗುಣಮಟ್ಟ ಖಾತ್ರಿ, ಆಹಾರ ಭದ್ರತಾ ನಿರ್ವಹಣೆಗಾಗಿ ಸಲಹಾ ಸೇವೆಗಳನ್ನು ಒದಗಿಸಿದ ಅನುಭವವಿರಬೇಕು. ಆಹಾರ ಸಂಸ್ಕರಣಾ ಕೈಗಾರಿಕೆ/ ಬ್ಯಾಂಕಿAಗ್, ಡಿಪಿಆರ್ ಸಿದ್ಧಪಡಿಸುವಿಕೆಯಲ್ಲಿ ಹಾಗೂ ತರಬೇತಿಯಲ್ಲಿ ಅನುಭವವುಳ್ಳ ವ್ಯಕ್ತಿಗಳನ್ನು ಪರಿಗಣಿಸಲಾಗುವುದು. ಸಂಪನ್ಮೂಲ ವ್ಯಕ್ತಿಗಳಿಗೆ ನೀಡಲಾಗುವ ಹಣ ಪಾವತಿಯನ್ನು ಅವರು ಬೆಂಬಲಿಸಿದAತಹ ಪ್ರತಿ ಫಲಾನುಭವಿಯನ್ನು ಆಧರಿಸಿ, ಬ್ಯಾಂಕಿನಿAದ ಸಾಲ ಮಂಜೂರಾದ ನಂತರ ಬ್ಯಾಂಕಿನಿAದ ಮಂಜೂರಾದ ಪ್ರತಿ ಸಾಲವನ್ನು ಆಧರಿಸಿ ರೂ. ೨೦ ಸಾವಿರಗಳನ್ನು ೨ ಕಂತುಗಳಲ್ಲಿ ಪಾವತಿಸಲಾಗುತ್ತದೆ. ಈ ಪೈಕಿ ಶೇ. ೫೦ ಮೊತ್ತವನ್ನು ಬ್ಯಾಂಕಿನಿAದ ಸಾಲ ಮಂಜೂರಾದ ನಂತರ ಹಾಗೂ ಉಳಿದ ಶೇ. ೫೦ ಹಣವನ್ನು ಘಟಕಗಳು ಉSಖಿ ಮತ್ತು Uಆಙಔಉ ಂಆಊAAಖ ನೋಂಣಿಯನ್ನು ಪಡೆದ ನಂತರ ಈSSಂI ವತಿಯಿಂದ ಪ್ರಮಾಣೀಕೃತ ಅನುಸರಣೆಯನ್ನು ಪಡೆದ ನಂತರ ನೀಡಲಾಗುವುದು. ಆದ್ದರಿಂದ ಸಹಾಯಕ ಕೃಷಿ ನಿರ್ದೇಶಕರು/ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸುವಂತೆ ಜಂಟಿ ಕೃಷಿ ನಿರ್ದೇಶಕರಾದ ಶಬನಾ ಎಂ.ಶೇಖ್ ಅವರು ತಿಳಿಸಿದ್ದಾರೆ.