ಮಡಿಕೇರಿ, ಜ. ೧೧: ದೇಶಾದ್ಯಂತ ಮತ್ತು ರಾಜ್ಯದಲ್ಲಿ ಕೋವಿಡ್-೧೯ ರೂಪಾಂತರಿ ಓಮಿಕ್ರಾನ್ ವೈರಾಣು ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಪ್ರತಿದಿನ ರಾತ್ರಿ ೧೦ ರಿಂದ ಮರುದಿನ ಬೆಳಿಗ್ಗೆ ೫ ಗಂಟೆಯವರೆಗೆ ರಾತ್ರಿ ಕರ್ಫ್ಯೂವನ್ನೂ ಹಾಗೂ ಶುಕ್ರವಾರ ರಾತ್ರಿ ೧೦ ಗಂಟೆಯಿAದ ಸೋಮವಾರ ಬೆಳಿಗ್ಗೆ ೫ ಗಂಟೆಯವರೆಗೆ ವಾರಾಂತ್ಯದ ಕರ್ಫ್ಯೂವನ್ನು
ತಾ. ೩೧ರವರೆಗೆ ಮುಂದುವರಿಸಿ ಆದೇಶ ಹೊರಡಿಸಿದೆ.
ಕರ್ಫ್ಯೂ ಅವಧಿಯಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಸಾರ್ವಜನಿಕರ ಸಂಚಾರವನ್ನು ನಿರ್ಬಂಧಿಸಲಾಗಿದೆ ಅಲ್ಲದೆ ವೈಕುಂಠ ಏಕಾದಶಿ ಹಾಗೂ ಮಕರ ಸಂಕ್ರಾAತಿ ಮೊದಲಾದ ಹಬ್ಬಗಳ ಪ್ರಯುಕ್ತ ದೇವಾಲಯದ ಶಾಸ್ತç ಸಂಪ್ರದಾಯ ದಂತೆ ದೇವಾಲಯಗಳ ಒಳ ಆವರಣದಲ್ಲಿ ಮಾತ್ರ ದೈನಂದಿನ ಪೂಜಾ ಕೈಂಕರ್ಯಗಳನ್ನು ನಡೆಸಬೇಕಿದೆ. ವೈಕುಂಠ ಏಕಾದಶಿ ದಿನದಂದು ಈಗಾಗಲೇ ನಿಗದಿಪಡಿಸಿ ರುವಂತೆ ಪೂರ್ಣ ಪ್ರಮಾಣದ ಕೋವಿಡ್-೧೯ ಲಸಿಕೆ ಪಡೆದ ೫೦ ಜನರಿಗೆ ಮಾತ್ರ ಒಂದು ಬಾರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಬೇಕು. ಯಾವುದೇ ಸೇವೆ ಇತ್ಯಾದಿಗಳಿಗೆ ಅವಕಾಶವಿರುವುದಿಲ್ಲ. ಹಬ್ಬಗಳ ಆಚರಣೆಯ ಸಲುವಾಗಿ ಯಾವುದೇ ರೀತಿಯ ಮೆರವಣಿಗೆ ಮನೋರಂಜನಾ ಕಾರ್ಯಕ್ರಮಗಳು ಇತ್ಯಾದಿಗಳನ್ನು ಆಯೋಜಿಸುವಂತಿಲ್ಲ ಎಂದು ಸರ್ಕಾರದ ಆದೇಶದಲ್ಲಿ ಸೂಚಿಸಲಾಗಿದೆ.