ಬೆAಗಳೂರು, ಜ. ೧೨: ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಗೆ ಸಂಬAಧಿಸಿದAತೆ ಯಾವುದೇ ಕ್ರಮಕ್ಕೆ ಮುಂದಾಗದಿರುವ ಸರಕಾರದ ವಿರುದ್ಧ ರಾಜ್ಯ ಉಚ್ಚ ನ್ಯಾಯಾಲಯ ಇಂದು ಕಿಡಿಕಾರಿದ್ದು, ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರಕಾರ ತಕ್ಷಣದಿಂದಲೇ ಪಾದಯಾತ್ರೆಯನ್ನು ನಿರ್ಬಂಧಿಸಿ ಆದೇಶ ಹೊರಡಿಸಿ ಈ ಸಂಬAಧ ಅಗತ್ಯ ಕ್ರಮಕೈಗೊಳ್ಳುವಂತೆ ರಾಮನಗರ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿದೆ.

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಬುಧವಾರ ೪ನೇ ದಿನಕ್ಕೆ ಕಾಲಿಡುತ್ತಿದ್ದಂತೆ ಪಾದಯಾತ್ರೆ ವಿರುದ್ಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬAಧ ಇಂದು ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯದಲ್ಲಿ ಕೋವಿಡ್ ಸೋಂಕು ದಿನೇದಿನೇ ಹೆಚ್ಚಾಗುತ್ತಿರುವುದರ ಮಧ್ಯೆ ಪಾದಯಾತ್ರೆ ನಡೆಸುವ ಅಗತ್ಯವೇನಿದೆ ಎಂದು ಛೀಮಾರಿ ಹಾಕಿತು. ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಪಕ್ಷಕ್ಕೆ ಪಾದಯಾತ್ರೆ ನಡೆಸಲು ಅನುಮತಿ ನೀಡಿಲ್ಲ ಎಂದಾದ ಮೇಲೆ ಪಾದಯಾತ್ರೆ ತಡೆಯಲು ಹಿಂಜರಿಕೆ ಏಕೆ. ಸರ್ಕಾರ ಅಷ್ಟೊಂದು ಅಸಮರ್ಥವಾಗಿದೆಯಾ? ನ್ಯಾಯಾಲಯ ನೆರವಿಗೆ ಬರಬೇಕು ಎಂದು ಸರ್ಕಾರ ನಿರೀಕ್ಷಿಸುತ್ತಿದೆಯಾ? ಎಂದು ಹೈಕೋರ್ಟ್ ರಾಜ್ಯ ಸರ್ಕಾರವನ್ನು ಪ್ರಶ್ನಿಸಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಸರಕಾರ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸಂಜೆ ಸಚಿವ ಸಂಪುಟ ಸಭೆ ನಡೆಸಿ ಕೈಗೊಂಡ ನಿರ್ಣಯದಂತೆ ಪಾದಯಾತ್ರೆಯನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ. ಈ ಸಂಬAಧ ಅಗತ್ಯ ಕ್ರಮಕೈಗೊಳ್ಳುವಂತೆ ಸರಕಾರ ಮುಖ್ಯ ಕಾರ್ಯದರ್ಶಿ ರವಿಕುಮಾರ್, ರಾಮನಗರ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.