ಮಡಿಕೇರಿ, ಜ. ೧೨: ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ೨೦೨೧-೨೨ನೇ ಸಾಲಿನಲ್ಲಿ ೮ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳ ಶಾಲೆಗಳ ವಿದ್ಯಾರ್ಥಿಗಳಿಗೆ ಎನ್‌ಎಂಎAಎಸ್ (ನ್ಯಾಷಿನಲ್ ಮೀನ್ಸ್ ಕಮ್ ಮೆರಿಟ್ ಸ್ಕಾಲರ್‌ಶಿಪ್) ಪರೀಕ್ಷೆಯು ೨೦೨೨ನೇ ಫೆಬ್ರವರಿ ೨೭ ರಂದು ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ.

ತತ್ಸಂಬAಧ ಪರೀಕ್ಷೆಗೆ ತಾ. ೨೦ರ ವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪ್ರತಿಭಾನ್ವಿತ ವಿದ್ಯಾರ್ಥಿಗಳು ಶಾಲೆಯ ಮುಖ್ಯ ಶಿಕ್ಷಕರ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಸಂಬAಧಿಸಿದ ಶಾಲಾ ಮುಖ್ಯೋಪಾಧ್ಯಾಯರನ್ನು ಸಂಪರ್ಕಿಸಬಹುದು ಎಂದು ಡಯಟ್ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಉಪ ನಿರ್ದೇಶಕರು (ಅಭಿವೃದ್ಧಿ) ತಿಳಿಸಿದ್ದಾರೆ.