ಸಿದ್ದಾಪುರ, ಜ. ೧೧ : ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿರುವ ಘಟನೆ ವೀರಾಜಪೇಟೆ ತಾಲೂಕಿನ ಚನ್ನಂಗಿ ದೈಯದಡ್ಲು ಹಾಡಿಯಲ್ಲಿ ನಡೆದಿದೆ ದೈಯದಡ್ಲು ಹಾಡಿಯ ನಿವಾಸಿ ವೈ.ಕೆ. ಲಕ್ಷö್ಮಣ ಎಂಬವರಿಗೆ ಸೇರಿದ ಹಸು ಹುಲಿ ದಾಳಿಗೆ ಬಲಿಯಾಗಿದ್ದು ಹಾಡಿಯ ಜನರು ಭಯಭೀತರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಿರಂತರವಾಗಿ ಹುಲಿ ಕಾಣಿಸಿ ಕೊಳ್ಳುತ್ತಿದ್ದು, ಹುಲಿ ಹಾವಳಿಯಿಂದ ಹಾಡಿ ನಿವಾಸಿಗಳು ಭಯಭೀತರಾಗಿದ್ದಾರೆ. ಹಾಡಿಭಾಗದಲ್ಲಿ ಉಪಟಳ ನೀಡುತ್ತಿರುವ ಹುಲಿಯನ್ನು ಸೆರೆ ಹಿಡಿದು ಸ್ಥಳಾಂತರಿಸಬೇಕೆAದು ಆದಿವಾಸಿ ಮುಖಂಡ ಸಿದ್ದಪ್ಪ ಒತ್ತಾಯಿಸಿದ್ದಾರೆ.