ಮಡಿಕೇರಿ, ಜ. ೧೧ : ಪ್ರಸ್ತುತ ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಜನವರಿ ೨೦೨೧ ರಿಂದ ಡಿಸೆಂಬರ್ ೨೦೨೧ರ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ ಬಹುಮಾನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಯ್ಕೆಯಾದ ಕೃತಿಗಳ ಪ್ರಕಾಶಕರು/ ಮುದ್ರಕರು/ ಕಲಾವಿದರಿಗೆ ‘ಕನ್ನಡ ಪುಸ್ತಕ ಸೊಗಸು-೨೦೨೧’ ಬಹುಮಾನವನ್ನು ನೀಡಲಾಗುವುದು. ಆಸಕ್ತ ಪ್ರಕಾಶಕರು /ಮುದ್ರಕರು/ ಕಲಾವಿದರು / ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ, ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು / ಚಿತ್ರ ಕಲಾವಿದರ ಪೂರ್ಣ ವಿಳಾಸ ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಫೆಬ್ರವರಿ, ೧೦ ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-೫೬೦೦೦೨ ಈ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು, ೫೬೦೦೦೨ ವೆಬೆಸೈಟ್ ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ.ಛಿom, ದೂ.ಸಂ.೦೮೦-೨೨೪೮೪೫೧೬ / ೨೨೧೦೭೭೦೪ನ್ನು ಸಂಪರ್ಕಿಸಬಹುದು ಎಂದು ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ತಿಳಿಸಿದ್ದಾರೆ.