ಮಡಿಕೇರಿ, ಜ. ೧೧: ತಾಲೂಕಿನ ಬೇಂಗೂರು ಮತ್ತು ಕುಂದಚೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಜಿ. ಬೋಪಯ್ಯ ಮಂಗಳವಾರ ಚಾಲನೆ ನೀಡಿದರು.

ತಲಾ ೨ ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಮತ್ತಿತರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಇತರರು ಇದ್ದರು.