*ಗೋಣಿಕೊಪ್ಪ, ಜ. ೧೨: ಕಾನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಗ್ರೀನ್ ಡಾಟ್ ಟ್ರಸ್ಟ್ ಆಡಳಿತಕ್ಕೆ ಒಳಪಟ್ಟ ನೂತನ ಆ್ಯಂಬ್ಯುಲೆನ್ಸ್ ಸೇವೆಗೆ ಶಾಸಕ ಕೆ.ಜಿ. ಬೋಪಯ್ಯ ಚಾಲನೆ ನೀಡಿದರು. ತಾಲೂಕು ಆರೋಗ್ಯ ಅಧಿಕಾರಿ ಡಾ. ಯತಿರಾಜ್, ಗ್ರಾ.ಪಂ. ಅಧ್ಯಕ್ಷೆ ರಶ್ಮಿ, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅಳಮೇಂಗಡ ವಿವೇಕ್, ಮಹಿಳಾ ಮಂಡಳ ಅಧ್ಯಕ್ಷೆ ಮುತ್ತಮ್ಮ, ಕಾನೂರು ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ, ಗ್ರೀನ್ ಡಾಟ್ ಟ್ರಸ್ಟ್ನ ಪ್ರಮುಖರು, ಶುಶ್ರೂಷಕಿಯರು, ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಹಾಜರಿದ್ದರು.