ಮಡಿಕೇರಿ, ಜ. ೧೨: ವಿದ್ಯಾರ್ಥಿಗಳಿಂದ ಮನೆ ಮನೆಗೆ ೧೧೨ ಅಭಿಯಾನ ಕಾರ್ಯಕ್ರಮವು ತಾ. ೧೩ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಸಂತ ಜೋಸೆಫರ ಪಿಯು ಕಾಲೇಜಿನಲ್ಲಿ ನಡೆಯಲಿದೆ. ಮಧ್ಯಾಹ್ನ ೧೨ ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತ್ತದ ಬಳಿ ಇರುವ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.