ವೀರಾಜಪೇಟೆ, ಜ. ೧೨: ಕೊಡವ ಜನಾಂಗದ ಆಚಾರ, ವಿಚಾರ, ಪದ್ಧತಿ ಪರಂಪರೆಯನ್ನು ಉಳಿಸಿಕೊಳ್ಳಲು ಕೊಡವ ನ್ಯಾಷನಲ್ ಕೌನ್ಸಿಲ್, ಯುನೈಟೆಡ್ ಕೊಡವ ಆರ್ಗನೈಝೇಷನ್, ಫೆಡರೇಷನ್ ಆಫ್ ಕೊಡವ ಸಮಾಜ, ಕೊಡವ ಸಮಾಜಗಳು, ಕೊಡವ ಒಕ್ಕೂಟಗಳು, ಪೊಮ್ಮಕ್ಕಡ ಕೂಟಗಳು ನಡೆಸುತ್ತಿರುವ ಕಾರ್ಯಕ್ರಮಗಳು ಶ್ಲಾಘನಿಯ ಎಂದು ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ ಹೇಳಿದರು.

ವೀರಾಜಪೇಟೆ ಕೊಡವ ಸಮಾಜದಲ್ಲಿ ಕೊಡವ ಸಮಾಜ ಪೊಮ್ಮಕ್ಕಡ ಒಕ್ಕೂಟದಿಂದ ಆಯೋಜಿಸಲಾಗಿದ್ದ ಪುತ್ತರಿ ಊರೋರ್ಮೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ರಾಷ್ಟçದಲ್ಲಿ ರಾಜಕೀಯಕ್ಕೆ ಹೆಚ್ಚಿನ ಮಹತ್ವ ಇದ್ದು ಮಹಿಳೆಯರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಂiÀiದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಈಗಾಗಲೇ ಮಹಿಳೆಯ ಹಲವಾರು ಕ್ಷೇತ್ರಗಳಲ್ಲಿ ಮುಂದೆ ಬಂದಿದ್ದಾರೆ. ಮಹಿಳೆಯರಿಗಾಗಿಯೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹಲವಾರು ಯೋಜನೆಗಳನ್ನು ರೂಪಿಸಿದ್ದು ಅದನ್ನು ಸದುಪಯೋಗ ಪಡಿಸಿಕೊಂಡು ವ್ಯಾಪಾರ ಉದ್ದಿಮೆಗಳನ್ನು ನಡೆಸಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದು ಹೇಳಿದರು.

ಮೈಸೂರು ಸಿಸಿಬಿ ವೃತ್ತ ನಿರೀಕ್ಷಕ ಪಳೆಯಂಡ ಸಂತೋಷ್ ಮಾತನಾಡಿ, ಕೊಡವ ಜನಾಂಗಕ್ಕೆ ಇತರ ಜನಾಂಗದAತೆ ಮಠ ಮಾನ್ಯ ಧಾರ್ಮಿಕ ಕೇಂದ್ರಗಳಿಲ್ಲ. ಮಾರ್ಗದರ್ಶಕರಿಲ್ಲ. ರಾಜಕೀಯ ಪಕ್ಷ ಯಾವುದೇ ಬರಲಿ ನಮ್ಮ ಜನಾಂಗಕ್ಕೆ ಮೀಸಲಾತಿ ದೊರೆತರೆ ಬೇಡ ಅನ್ನಬೇಡಿ. ನಮ್ಮ ಜನಸಂಖ್ಯೆ ಕಡಿಮೆ ಇರುವುದರಿಂದ ನಾವು ಸೂಕ್ಷö್ಮವಾಗಿ ಬೆಳೆಯುವಂತ ಪರಿಸ್ಥಿತಿ ಎದುರಾಗಿದೆ. ಕೊಡವ ಅಕಾಡೆಮಿ ಸೆಂಟರ್ ಪ್ರಾರಂಭ ಮಾಡಿದರೆ ಉತ್ತಮ. ನಮ್ಮ ಮುಂದಿನ ಪೀಳಿಗೆಗೆ ಅನುಕೂಲ ವಾಗಲಿದೆ ಎಂದು ಹೇಳಿದರು.

ಕೊಡವ ಪೊಮ್ಮಕ್ಕಡ ಒಕ್ಕೂಟದ ಅಧ್ಯಕ್ಷೆ ಮನೆಯಪಂಡ ಕಾಂತಿಸತೀಶ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಕೊಡವ ಪೊಮ್ಮಕ್ಕಡ ಒಕ್ಕೂಟ ಪ್ರತಿ ತಿಂಗಳು ಒಂದೊAದು ಉತ್ತಮ ಕಾರ್ಯಕ್ರಮಗಳನ್ನು ನಡೆಸುತ್ತಾ ಬರುತ್ತಿದ್ದು ಕೊಡವರ ಆಚಾರ, ವಿಚಾರ, ಪದ್ಧತಿ, ಪರಂಪರೆ, ಹಬ್ಬ ಹರಿದಿನಗಳನ್ನು ಸಾಂಪ್ರದಾಯಿಕ ಹಾಗೂ ಸಾರ್ವಜನಿಕವಾಗಿ ಆಚರಿಸಲಾಗುತ್ತಿz.ೆ ಪ್ರತಿಯೊಬ್ಬರಲ್ಲೂ ಪ್ರತಿಭೆ ಇದೆ ಅದನ್ನು ಹೊರತರಲು ಪೊಮ್ಮಕ್ಕಡ ಕೂಟ ಸಹಕಾರಿಯಾಗುತ್ತಿದೆ ಎಂದರು.

ಇದೇ ಸಂದÀರ್ಭ ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾಕುಶಾಲಪ್ಪ, ವೃತ್ತ ನಿರೀಕ್ಷಕ ಪಳೆಯಂಡ ಸಂತೋಷ್ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಮಂಡೇಪAಡ ಪ್ರೀತ್ ಕುಶಾಲಪ್ಪ, ಪಳೆಯಂಡ ಪ್ರಿಯಾ ಸಂತೋಷ್, ಉಪಾಧ್ಯಕ್ಷೆ ಕುಪ್ಪಂಡ ಪುಷ್ಪಾ, ನಾಯಕಂಡ ಬೇಬಿ ಚಿಣ್ಣಪ್ಪ, ಕಾರ್ಯದರ್ಶಿ ಬಯವಂಡ ಇಂದಿರಾ, ಖಜಾಂಚಿ ತಾತಂಡ ಯಶು, ನೀಲಕ್ಕೆ ತಂಡದ ಅಧ್ಯಕ್ಷೆ ಚೋಕಂಡ ಈಶ್ವರಿ ಉಪಸ್ಥಿತರಿದ್ದರು. ನೀಲಕ್ಕೆ ತಂಡದಿAದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.