ಶನಿವಾರಸಂತೆ, ಜ. ೧೩ : ಬ್ಯಾಡಗೊಟ್ಟ ಗ್ರಾ. ಪಂ ವ್ಯಾಪ್ತಿಯ ಬೆಂಬಳೂರು ಗ್ರಾಮದಲ್ಲಿ ತಾ. ೧೬ ರಂದು ಶ್ರೀ ಬಾಣಂತಮ್ಮ ಮತ್ತು ಶ್ರೀ ಕುಮಾರಲಿಂಗೇಶ್ವರ ಜಾತ್ರಾ ಮಹೋತ್ಸವ ಈ ಬಾರಿ ಸರಳ ಹಾಗೂ ಸಾಂಪ್ರದಾಯಿಕವಾಗಿ ನಡೆಯಲಿದೆ. ಪ್ರತಿ ವರ್ಷ ಮಕರ ಸಂಕ್ರಾAತಿಯ ಮಾರನೇ ದಿನ ನಡೆಯುವ ಈ ಜಾತ್ರೆಗೆ ನೂರಾರು ವರ್ಷಗಳ ಇತಿಹಾಸವಿದೆ.
ಈ ವರ್ಷ ಶ್ರೀ ಬಾಣಂತಮ್ಮ ಕುಮಾರಲಿಂಗೇಶ್ವರ ಜಾತ್ರಾ ಮಹೋತ್ಸವವನ್ನು ಕೋವಿಡ್-೧೯ರ ಹಿನ್ನೆಲೆಯಲ್ಲಿ ಜಾತ್ರಾ ಸಮಿತಿಯ ಪದಾಧಿಕಾರಿಗಳು ಮತ್ತು ಗ್ರಾಮಸ್ಥರುಗಳೊಳಗೊಂಡAತೆ ಸರಳವಾಗಿ ಸಾಂಪ್ರದಾಯದAತೆ ಪೂಜಾ ಕೈಂಕರ್ಯಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಆದುದರಿಂದ ಜಾತ್ರೋತ್ಸವವನ್ನು ರದ್ದುಪಡಿಸಲಾಗಿದೆ ಎಂದು ಜಾತ್ರಾ ಸಮಿತಿ ಅಧ್ಯಕ್ಷ ಪ್ರಸಾದ್ ಪಟೇಲ್ ಪತ್ರಿಕೆಗೆ ತಿಳಿಸಿದ್ದಾರೆ.