ಸೋಮವಾರಪೇಟೆ, ಜ. ೧೨: ವೀರ ಸನ್ಯಾಸಿ ಸ್ವಾಮಿ ವಿವೇಕಾನಂದ ಅವರ ಆದರ್ಶಗಳು ಯುವ ಜನಾಂಗಕ್ಕೆ ಸ್ಫೂರ್ತಿಯಾಗಿದ್ದು, ಅವರ ಮಾರ್ಗದರ್ಶನ ಪಾಲನೆಯಾಗಬೇಕು ಎಂದು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಹೇಳಿದರು.

ಇಲ್ಲಿನ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಸಮಿತಿ ವತಿಯಿಂದ ಆಯೋಜಿಸಿದ್ದ ವಿವೇಕಾನಂದರ ೧೫೯ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.

ವಿವೇಕಾನಂದರ ಜನ್ಮದಿನವನ್ನು ರಾಷ್ಟಿçÃಯ ಯುವ ದಿನವನ್ನಾಗಿ ಘೋಷಿಸಿದ್ದು, ಅವರ ಆದರ್ಶಗಳನ್ನು ಸ್ಮರಿಸುವ ಕಾರ್ಯಕ್ರಮಗಳು ನಡೆಯಬೇಕು. ಯುವ ಜನಾಂಗದ ಮೇಲೆ ಅಪಾರ ನಿರೀಕ್ಷೆಯಿಟ್ಟಿದ್ದ ವಿವೇಕಾನಂದರ ಜೀವನವೇ ಎಲ್ಲರಿಗೂ ಸ್ಫೂರ್ತಿಯಾಗಿದೆ. ಯುವ ಜನಾಂಗ ಇವರ ಆದರ್ಶಗಳನ್ನು ಮೈಗೂಡಿಸಿಕೊಂಡು ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಅಭಿಪ್ರಾಯಿಸಿದರು.

ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ, ಭಾರತದ ಭವ್ಯ ಸಂಸ್ಕೃತಿಯನ್ನು ಇಡೀ ವಿಶ್ವಕ್ಕೆ ಪರಿಚಯಿಸಿದ ಕೀರ್ತಿ ಮಹಾನ್ ಸಂತ ವಿವೇಕಾನಂದರಿಗೆ ಸಲ್ಲುತ್ತದೆ. ಧಾರ್ಮಿಕ ಪ್ರಬುದ್ಧತೆಯನ್ನು ಹೊಂದಿದ್ದ ಅವರು ದೇಶದ ಸ್ವಾತಂತ್ರö್ಯ ಹೋರಾಟಕ್ಕೂ ಬುನಾದಿ ಹಾಕಿದ್ದರು. ಇವರ ಜೀವನ ಎಲ್ಲರಿಗೂ ಅನುಕರಣೀಯ ಎಂದರು.

ಸಮಿತಿಯ ಅಧ್ಯಕ್ಷ ಪಿ.ಕೆ. ರವಿ ಮಾತನಾಡಿ, ವಿವೇಕಾನಂದರ ಆಶಯದಂತೆ ಯುವ ಜನಾಂಗ ಸ್ವಾವಲಂಭಿಯಾಗಿ ದೇಶಕಾರ್ಯದಲ್ಲಿ ತೊಡಗಬೇಕು ಎಂದು ಆಶಯ ವ್ಯಕ್ತಪಡಿಸಿದರು. ಸಮಿತಿಯ ಕಾರ್ಯದರ್ಶಿ ಎಸ್. ಮಹೇಶ್, ಖಜಾಂಚಿ ಮೃತ್ಯುಂಜಯ, ಜಿ.ಪಂ. ಮಾಜೀ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ. ಮಹೇಶ್, ಪ.ಪಂ. ಅಧ್ಯಕ್ಷ ಪಿ.ಕೆ. ಚಂದ್ರು, ಮುಖ್ಯಾಧಿಕಾರಿ ನಾಚಪ್ಪ, ರೋಟರಿ ಅಧ್ಯಕ್ಷ ಪ್ರಕಾಶ್, ವಿಶ್ವಹಿಂದೂ ಪರಿಷತ್ ಅಧ್ಯಕ್ಷ ಹುಲ್ಲೂರಿಕೊಪ್ಪ ಚಂದ್ರ, ಭಜರಂಗದಳ ಅಧ್ಯಕ್ಷ ನೇಗಳ್ಳೆ ಜೀವನ್, ಪ್ರಮುಖರಾದ ಹೆಚ್.ಸಿ. ನಾಗೇಶ್, ಕವಿತ ವಿರೂಪಾಕ್ಷ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರದೀಪ್, ಆಟೋ ಯೂನಿಯನ್ ಅಧ್ಯಕ್ಷ ಮೋಹನ್, ಮೋಟಾರ್ ಯೂನಿಯನ್‌ನ ಇಬ್ರಾಹಿಂ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿವಿಧ ಸಂಘಸAಸ್ಥೆಗಳ ಪದಾಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಸಾರ್ವಜನಿಕರು ಭಾಗವಹಿಸಿ, ವಿವೇಕಾನಂದರ ಪ್ರತಿಮೆಗೆ ಪುಷ್ಪಾರ್ಚನೆ ಹಾಗೂ ಮಾಲಾರ್ಪಣೆ ಮಾಡಿದರು.