ಮಡಿಕೇರಿ, ಜ.೧೩: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ನಗರದ ರಾಜಾಸೀಟಿನಲ್ಲಿ ‘ಸೂರ್ಯ ನಮಸ್ಕಾರ’ ಕಾರ್ಯಕ್ರಮ ಗುರುವಾರ ನಡೆಯಿತು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಮೋದ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ, ಜಿಲ್ಲಾ ಸ್ಕೌಟ್ಸ್ ಆಯುಕ್ತ ಜಿಮ್ಮಿ ಸೀಕ್ವೆರಾ, ಜಿಲ್ಲಾ ಸಂಘಟಕಿ ದಮಯಂತಿ, ವಿವಿಧ ಕಾಲೇಜಿನ ರೇಂರ್ಸ್ ಮತ್ತು ರೋರ್ಸ್ ವಿದ್ಯಾರ್ಥಿಗಳು, ಇತರರು ಪಾಲ್ಗೊಂಡಿದ್ದರು.