ಮಡಿಕೇರಿ, ಜ. ೧೨:-ನಗರದ ಜಿಲ್ಲಾ ಕ್ರೀಡಾಂಗಣದಲ್ಲಿರುವ ಕಿರಿಯರ ಕ್ರೀಡಾ ವಸತಿ ನಿಲಯಕ್ಕೆ ಮಹಿಳಾ ಕ್ಷೇಮಪಾಲಕರ (ವಾರ್ಡನ್) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹಗಲು ಮತ್ತು ರಾತ್ರಿಯ ವೇಳೆಯಲ್ಲಿ ಕ್ಷೇಮಪಾಲಕರು ಕಿರಿಯರ ಕ್ರೀಡಾ ನಿಲಯದಲ್ಲಿಯೇ ಇರಬೇಕು. ಮತ್ತು ಮಹಿಳಾ ಅಭ್ಯರ್ಥಿಯಾಗಿರಬೇಕು. ಹೆಚ್ಚಿನ ಮಾಹಿತಿಗೆ ದೂ. ೦೮೨೭೨-೨೨೮೯೮೫ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಸ್ವಾಮಿ ತಿಳಿಸಿದ್ದಾರೆ.