ಮಡಿಕೇರಿ, ಜ. ೧೩: ತಾ. ೨೬ ರಂದು ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸುವ ಸಂಬAಧ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್-೧೯ ಹಿನ್ನೆಲೆ, ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವುದು ಬೇಡ ಎಂದು ಅವರು ತಿಳಿಸಿದರು. ಉಳಿದಂತೆ ಕವಾಯತು ತಂಡಗಳ ಸಿದ್ಧತೆ ಮಾಡಿಕೊಳ್ಳುವುದು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವುದು, ಕುಡಿಯುವ ನೀರು ಪೂರೈಸುವುದು ಮತ್ತಿತರ ಬಗ್ಗೆ ನಿರ್ದೇಶನ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಕಳೆದ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಯ ನಡಾವಳಿ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು ಹಾಗೂ ಇತರರು ಇದ್ದರು.