ಮಡಿಕೇರಿ, ಜ.೧೨: ಜಗತ್ತನ್ನು ಜಾಗೃತಗೊಳಿಸಿದ ಸ್ವಾಮಿ ವಿವೇಕಾನಂದರ ವಿಚಾರಧಾರೆಗಳು ಸಾರ್ವಕಾಲಿಕವಾಗಿದ್ದು, ಅವುಗಳನ್ನು ಯುವಜನತೆ ತಿಳಿದುಕೊಳ್ಳು ವಂತಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ ತಾಲೂಕು ಯುವ ಒಕ್ಕೂಟ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ರಾಷ್ಟಿçÃಯ ಸೇವಾ ಯೋಜನಾ ಘಟಕ ಹಾಗೂ ಕಗ್ಗೋಡ್ಲು ಕಾವೇರಿ ಯುವಕ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಪ್ರಯುಕ್ತ ನಗರದ ಎಫ್‌ಎಂಕೆಎAಸಿ ಕಾಲೇಜು ಸಭಾಂಗಣದಲ್ಲಿ ಬುಧವಾರ ‘ಜಿಲ್ಲಾ ಮಟ್ಟದ ರಾಷ್ಟಿçÃಯ ಯುವ ದಿನ ಹಾಗೂ ಯುವ ಸಪ್ತಾಹ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸ್ವಾಮಿ ವಿವೇಕಾನಂದರು ಯುವ ಜನತೆಗೆ ಒಂದು

(ಮೊದಲ ಪುಟದಿಂದ) ರೀತಿ ‘ಶಕ್ತಿ’ ಇದ್ದಂತೆ, ಕೇವಲ ೩೯ ವರ್ಷ ಬಾಳಿ, ಬದುಕಿದ ಸ್ವಾಮಿ ವಿವೇಕಾನಂದರು, ಎಷ್ಟೊಂದು ಪ್ರಖ್ಯಾತಿ ಹೊಂದಿದ್ದಾರೆ ಎಂಬುದನ್ನು ಅರಿತುಕೊಳ್ಳಬೇಕು ಎಂದು ಅವರು ಹೇಳಿದರು.

ದೇಶ, ವಿದೇಶಗಳನ್ನು ಸುತ್ತಿ ಯುವ ಜನರ ಶಕ್ತಿಯ ಮಹತ್ವದ ಬಗ್ಗೆ ಸಂದೇಶ ಸಾರಿದರು. ತಮ್ಮ ಆಳವಾದ ಅಧ್ಯಯನದ ಮೂಲಕ ವಿವಿಧ ಕ್ಷೇತ್ರಗಳಲ್ಲಿ ಪಾಂಡಿತ್ಯ ಸಂಪಾದಿಸಿದ್ದರು ಎಂದು ಜಿಲ್ಲಾಧಿಕಾರಿ ವಿವರಿಸಿದರು.

ನಗರಸಭೆ ಅಧ್ಯಕೆÀ್ಷ ಅನಿತಾ ಪೂವಯ್ಯ ಮಾತನಾಡಿ ಸ್ವಾಮಿ ವಿವೇಕಾನಂದರು ‘ಭವ್ಯ ಭಾರತದ ಶಿಲ್ಪಿ’ ಎಂದು ಬಣ್ಣಿಸಿದರು. ಸ್ವಾಮಿ ವಿವೇಕಾನಂದರು ಮುಂದಿನ ಪೀಳಿಗೆಗೆ ರಾಷ್ಟçವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಮೆಟ್ಟಿಲುಗಳನ್ನು ನಿರ್ಮಾಣ ಮಾಡಿದ್ದರು ಎಂದರು.

ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಮಾತನಾಡಿ ಯುವಜನರು ಗುರಿ ತಲುಪುವ ತನಕ ಪ್ರಯತ್ನಿಸಬೇಕು. ಆತ್ಮವಿಶ್ವಾಸ ಇದ್ದಲ್ಲಿ ಜೀವನದಲ್ಲಿ ಉತ್ತಮ ಸಾಧನೆ ಮಾಡಬಹುದು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ ಮಾತನಾಡಿ ಯುವ ಜನರು ಭವಿಷ್ಯ ರೂಪಿಸಿಕೊಳ್ಳುವತ್ತ ಗಮನಹರಿಸಬೇಕು. ಸ್ವಾಮಿ ವಿವೇಕಾನಂದರ ತತ್ವ ಆದರ್ಶಗಳನ್ನು ಅಧ್ಯಯನ ಮಾಡಬೇಕು ಎಂದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಕೆ.ಸಿ.ದಯಾನಂದ ಮಾತನಾಡಿ ಸ್ವಾಮಿ ವಿವೇಕಾನಂದರು ಬಹುಮುಖ ಪ್ರತಿಭೆಯನ್ನು ಹೊಂದಿದ್ದರು. ಅವರು ತಮ್ಮ ಅಮೋಘ ಮಾತುಗಳಿಂದ ಜನರನ್ನು ಜಾಗೃತಿಗೊಳಿಸುವ ಕೆಲಸ ಕಾರ್ಯ ಮಾಡಿದ್ದರು ಎಂದರು.

ಯುವ ಜನರಲ್ಲಿ ಸ್ವಾಮಿ ವಿವೇಕಾನಂದರAತೆ ಛಲ ಇರಬೇಕು. ಸಿಕ್ಕಿರುವ ಅವಕಾಶವನ್ನು ಸದ್ಭಳಕೆ ಮಾಡಿಕೊಳ್ಳಬೇಕು. ಛಲ, ಗುರಿ ಇದ್ದಲ್ಲಿ, ಯಶಸ್ಸು ಸಾಧಿಸಬಹುದು ಎಂಬುದನ್ನು ಸ್ವಾಮಿ ವಿವೇಕಾನಂದರು ತೋರಿಸಿದ್ದಾರೆ.

ಧರ್ಮವೇ ಭಾರತದ ಶಕ್ತಿಯಾಗಿದೆ ಎಂದು ನಂಬಿದ್ದ ಅವರು ಭಾರತೀಯ ಧರ್ಮವನ್ನು ಪ್ರಪಂಚದಾದ್ಯAತ ಪಸರಿಸಲು ಪಣ ತೊಟ್ಟವರು, ಸರ್ವ ಧರ್ಮ ಸಮನ್ವಯತೆಯನ್ನು ಸಾರಿದ ಕಲಿಪುರುಷ, ಭಾರತೀಯ ಧರ್ಮದ ಪ್ರ‍್ರಾಮುಖ್ಯತೆಯನ್ನು ವಿಶ್ವಕ್ಕೆ ಪರಿಚಯಿಸಿದರು ಎಂದರು.

ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಜಗತ್ ತಿಮ್ಮಯ್ಯ ಅವರು ಮಾತನಾಡಿ ಸ್ವಾಮಿ ವಿವೇಕಾನಂದರು ಶಕ್ತಿ, ಸಾಮರ್ಥ್ಯ, ಮನ:ಸ್ಥೆöÊರ್ಯದ ಬಗ್ಗೆ ಅಪಾರವಾದ ಒಲವನ್ನು ಹೊಂದಿದ್ದವರು ಎಂದು ಹೇಳಿದರು.

ಜ್ಞಾನದ ಸಂಪತ್ತು ಎಲ್ಲಾ ಸಂಪತ್ತಿಗಿAತ ಮಿಗಿಲಾಗಿದ್ದು, ಅದನ್ನು ಪಡೆಯಬೇಕು. ಸ್ವಪರಿಶ್ರಮದ ಹೊರತಾಗಿ, ಪರರ ಮೇಲಿನ ಅವಲಂಬನೆಯಿAದ ಸ್ವತಂತ್ರರಾಗಲು ಸಾಧ್ಯವಿಲ್ಲ. ತಮ್ಮನ್ನು ತಾವು ಬಿಂಭಿಸುವ ರೀತಿಯಲ್ಲಿಯೇ ತಮ್ಮ ಮುಂದಿನ ಜೀವನ ನಿರ್ಧಾರವಾಗಲಿದೆ ಎಂದರು.

ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ಮಾತನಾಡಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಪ್ರಯುಕ್ತ ಯುವ ಸಪ್ತಾಹ ಅಂಗವಾಗಿ ಒಂದು ವಾರಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ವಿವಿಧ ಕಡೆಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಎಸ್.ಗುರುಸ್ವಾಮಿ ಇತರರು ಇದ್ದರು. ಪಿ.ಪಿ.ಸುಕುಮಾರ್ ಸ್ವಾಗತಿಸಿದರು. ತಾಲೂಕು ಯುವ ಒಕ್ಕೂಟದ ಅಧ್ಯಕ್ಷ ನವೀನ್ ದೇರಳ ನಿರೂಪಿಸಿದರು. ಜಿಲ್ಲಾ ಯುವ ಒಕ್ಕೂಟದ ಕಾರ್ಯದರ್ಶಿ ಗಣೇಶ್ ವಂದಿಸಿದರು.