*ಗೋಣಿಕೊಪ್ಪ: ವಿವೇಕಾನಂದರ ಜೀವನದ ಬಗ್ಗೆ ಅರಿತುಕೊಳ್ಳುವುದರಿಂದ ಪ್ರತಿಯೊಬ್ಬರಲ್ಲಿಯೂ ದೇಶಾಭಿಮಾನ ವೃದ್ಧಿಸುತ್ತದೆ ಎಂದು ಪೊನ್ನಂಪೇಟೆ ರಾಮಕೃಷ್ಣ ಶಾರದಾಶ್ರಮದ ಅಧ್ಯಕ್ಷ ಸ್ವಾಮಿ ಅಮೂರ್ತಸ್ವರೂಪನಂದಾಜೀ ತಿಳಿಸಿದರು. ಸ್ವಾಮಿ ವಿವೇಕಾನಂದರ ೧೫೯ನೇ ಜನ್ಮದಿನಾಚರಣೆಯ ಅಂಗವಾಗಿ ಆಚರಿಸುವ ರಾಷ್ಟಿçÃಯ ಯುವ ದಿನಾಚರಣೆಯ ಕಾರ್ಯಕ್ರಮಕ್ಕೆ ಪೊನ್ನಂಪೇಟೆ ರಾಮಕೃಷ್ಣ ಆಶ್ರಮದ ಸಂಭವನAದಾಜಿ ಸಭಾಂಗಣದಲ್ಲಿ ಚಾಲನೆ ನೀಡಿ ಮಾತನಾಡಿದರು.

ಪ್ರತಿ ಯುವಕರ ಆದರ್ಶ ಮತ್ತು ಸ್ಪೂರ್ತಿಯಾಗಿ ವಿವೇಕಾನಂದರು ನಿಲ್ಲುತ್ತಾರೆ. ಇಂದು ಮಹಾನ್ ಸಾಧನೆ ಮಾಡಿದವರ ಬಹುತೇಕರ ಹಿಂದೆ ವಿವೇಕಾನಂದರ ವಾಣಿಯ ತತ್ವ ಅಡಗಿದೆ. ವಿದ್ಯಾರ್ಥಿಗಳು ವಿವೇಕಾನಂದರ ಆದರ್ಶ ಗುಣಗಳನ್ನು ಮೈಗೂಡಿಸಿಕೊಂಡು ಉತ್ತಮ ಜೀವನ ನಡೆಸಬೇಕು ಎಂದರು. ರಾಮಕೃಷ್ಣ ಸೇವಾಶ್ರಮ ಮತ್ತು ವಿವೇಕಾನಂದ ಆರೋಗ್ಯ ಧಾಮದ ಪ್ರಧಾನ ವ್ಯವಸ್ಥಾಪಕ ಸ್ವಾಮಿ ಪರಹಿತನಂದಾಜೀ ಮಾತನಾಡಿ ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನಕ್ಕೆ ಆತ್ಮವಿಶ್ವಾಸ, ಆತ್ಮಾವಲಂಬನೆ, ಆತ್ಮಜ್ಞಾನ, ಆತ್ಮಶಕ್ತಿ, ಆತ್ಮನಿಯಂತ್ರಣ ಮತ್ತು ಸ್ಥೆöÊರ್ಯ ಈ ಐದು ಮೌಲ್ಯಯುತ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಪೊನ್ನಂಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಾದ ರೋಶಿಕ್, ಗಗನ್ ಇವರುಗಳು ವಿವೇಕಾನಂದÀರ ಜೀವನಾಧರಿತ ಮೌಲ್ಯಗಳ ಬಗ್ಗೆ ಮಾತನಾಡಿದರು. ಈ ಸಂದರ್ಭ ಸುಮಾರು ೩೯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಆಶ್ರಮದ ವತಿಯಿಂದ ವಿತರಿಸಲಾಯಿತು. ಕಾರ್ಯಕ್ರಮವನ್ನು ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಡಾ. ರಾಜೇಂದ್ರಪ್ರಸಾದ್ ಸ್ವಾಗತಿ, ನಿರೂಪಿಸಿ, ವಂದಿಸಿದರು.ಕುಶಾಲನಗರ: ಸ್ವಾಮಿ ವಿವೇಕಾನಂದರ ಆದರ್ಶ ಗುಣಗಳನ್ನು ಯುವಪೀಳಿಗೆ ಮೈಗೂಡಿಸಿಕೊಳ್ಳಬೇಕು ಎಂದು ಕುಶಾಲನಗರ ಸರ್ಕಾರಿ ಇಂಜಿನಿಯರಿAಗ್ ಕಾಲೇಜು ಪ್ರಾಂಶುಪಾಲ ಡಾ. ಸೀನಪ್ಪ ಕರೆ ನೀಡಿದರು.

ಕುಶಾಲನಗರ ಸರ್ಕಾರಿ ಇಂಜಿನಿಯರಿAಗ್ ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ರಾಷ್ಟಿçÃಯ ಯುವ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಚಿಂತನೆ ಹರಿಸಬೇಕು, ಈ ಮೂಲಕ ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಕೈಜೋಡಿಸಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಕಾವೇರಿ ನದಿ ಸ್ವಚ್ಛತಾ ಆಂದೋಲನದ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದ ಗುರಿಮುಟ್ಟುವ ತನಕ ನಿರಂತರ ಸಾಧನೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷ ದರ್ಶನ್, ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರಾದ ಸುರೇಖಾ, ಚೂಡಾ ರತ್ನಾಕರ್, ವಸಂತ್, ಕಿರಣ್, ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಸಾದ್ ಸಾಲಿಯಾನ್ ಮತ್ತಿತರರಿದ್ದರು.ಕೂಡಿಗೆ: ಸದ್ಗುರು ಅಪ್ಪಯ್ಯಸ್ವಾಮಿ ಪ್ರೌಢಶಾಲೆಯಲ್ಲಿ ರಾಷ್ಟಿçÃಯ ಯುವ ಸಪ್ತಾಹ ಹಾಗೂ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಪರಮಪೂಜ್ಯ ಶ್ರೀ ವಿವೇಕಾನಂದ ಶರಣ ಸ್ವಾಮೀಜಿ ಅವರ ಜಯಂತಿಯನ್ನು ಆಚರಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಎಂ.ಬಿ. ಜಯಂತ್ ವಹಿಸಿದ್ದರು. ರಾಷ್ಟಿçÃಯ ಯುವ ಸಪ್ತಾಹದ ಮಹತ್ವವನ್ನು ಕುರಿತು ಬಿ.ಪಿ. ಅಪ್ಪಣ್ಣ ಮಾತನಾಡಿದರು. ಉದ್ಯಮಿಗಳಾದ ವಸಂತ ಶಾಲಿಯಾನ ಅವರು ಮಕ್ಕಳಿಗೆ ಉಚಿತವಾಗಿ ಸಮವಸ್ತç ಮತ್ತು ಶೂಗಳನ್ನು ಮತ್ತು ಎಂ.ಜಿ. ಮಹೇಶ್ ಅವರು ಮಕ್ಕಳಿಗೆ ಉಚಿತವಾಗಿ ಸಮವಸ್ತçಗಳನ್ನು ನೀಡಿದರು. ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ಸಿ. ದುರ್ಗೆಶ್, ಸಹ ಶಿಕ್ಷಕರು ಹಾಜರಿದ್ದರು. ಶಾಲಾ ವಿದ್ಯಾರ್ಥಿಗಳು ವಿವೇಕಾನಂದರ ಛದ್ಮವೇಷ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಸಭೆಯಲ್ಲಿ ಶಾಲಾ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.ಗೋಣಿಕೊಪ್ಪಲು: ಅರುವತ್ತೊಕ್ಲುವಿನ ಸರ್ವದೈವತ ವಿದ್ಯಾಸಂಸ್ಥೆಯಲ್ಲಿ ಸ್ವಾಮಿ ವಿವೇಕಾನಂದರ ೧೫೯ನೇ ಜನ್ಮ ದಿನಾಚರಣೆಯ ಪ್ರಯುಕ್ತ ರಾಷ್ಟಿçÃಯ ಯುವ ದಿನವನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ಲಲಿತಾ ಮೊಣ್ಣಪ್ಪ ಮಾತನಾಡಿ, ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆ ಬಗ್ಗೆ ವಿವರಿಸಿದರು. ವೇದಿಕೆಯಲ್ಲಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶೀಲಾ ಬೋಪಣ್ಣ, ಪ್ರೌಢಶಾಲಾ ಮುಖ್ಯ ಶಿಕ್ಷಕ ಪ್ರದೀಪ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಕೆ.ಜೆ. ದೇಚಮ್ಮ, ಆರುಷ್, ಆಯೇಷಾ ಫರ್ಹಾನ, ನೇಹಾ, ಮೊಹಮ್ಮದ್ ಅಫ್ಸಲ್ ಇವರು ಸ್ವಾಮಿ ವಿವೇಕಾನಂದರ ಬಗ್ಗೆ ಭಾಷಣವನ್ನು ಮಾಡಿದರು. ಪ್ರೌಢಶಾಲಾ ವಿದ್ಯಾರ್ಥಿಗಳಾದ ಮೇರಿ ಶರೀನ್ ತಂಡದವರಿAದ ದೇಶಭಕ್ತಿಗೀತೆ ನಡೆಯಿತು. ಪುಟಾಣಿಗಳು ವಿವೇಕಾನಂದರ ವೇಷಧರಿಸಿ ಸ್ಮರಿಸಿದರು.ಮಡಿಕೇರಿ: ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ರಾಷ್ಟಿçÃಯ ಸೇವಾ ಯೋಜನೆ ಹಾಗೂ ಸಾಂಸ್ಕೃತಿಕ ಸಂಘದ ವತಿಯಿಂದ ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ರಾಷ್ಟಿçÃಯ ಯುವ ದಿನಾಚರಣೆ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಪ್ರಾಧ್ಯಾಪಕರು, ಕಚೇರಿ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಾಲೇಜಿನ ವಿದ್ಯಾರ್ಥಿನಿಯರ ತಂಡ ಮಧ್ಯಾಹ್ನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಾನಪದ ನೃತ್ಯ ಹಾಗೂ ದೇಶಭಕ್ತಿಯನ್ನು ಬಿಂಬಿಸುವ ನೃತ್ಯ ಪ್ರದರ್ಶನವನ್ನು ನೀಡಿದರು. ಏಳು ದಿನಗಳು ಯುವ ಸಪ್ತಾಹ ಕಾರ್ಯಕ್ರಮ ನೆರವೇರಲಿದೆ.ವೀರಾಜಪೇಟೆ: ಸ್ವಾಮಿ ವಿವೇಕಾನಂದರು ಕೇವಲ ಸನ್ಯಾಸತ್ವಕ್ಕೆ ಮಾತ್ರ ಸೀಮಿತವಾಗಿರದೆ, ತಮ್ಮ ವಿಚಾರಧಾರೆಗಳಿಂದಾಗಿ ಅವರೊಬ್ಬ ಯೋಧ ಸನ್ಯಾಸಿಯಾಗಿದ್ದರು. ಅಪ್ಪಟ ದೇಶಪ್ರೇಮಿಯಾಗಿದ್ದ ಅವರು ಭಾರತದ ತಾತ್ವಿಕ ವಿಚಾರಧಾರೆಗಳನ್ನು ಜಗತ್ತಿಗೆ ಪರಿಚಯಿಸಿದ ಮೇಧಾವಿಯಾಗಿದ್ದರು. ಧರ್ಮಕ್ಕೆ ಹೊಸ ವ್ಯಾಖ್ಯಾನ ನೀಡಿದ್ದ ಅವರು, ಭಾರತದ ಪುನರುತ್ಥಾನ ಯುವಶಕ್ತಿಯಿಂದ ಮಾತ್ರ ಸಾಧ್ಯವೆಂದು ನಂಬಿದ್ದರು. ಅವರ ವಿಚಾರಧಾರೆಗಳು ಇಂದಿಗೂ ಅನುಕರಣೀಯ ಎಂದು ಸಂತ ಅನ್ನಮ್ಮ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಬೆನ್ನಿ ಜೋಸೆಫ್ ಅಭಿಪ್ರಾಯಪಟ್ಟರು.

ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟಿçÃಯ ಯುವ ದಿನ ಹಾಗೂ ಯುವ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸ್ವಾಮಿ ವಿವೇಕಾನಂದರ ದೃಷ್ಠಿಕೋನದಲ್ಲಿ ಯುವಶಕ್ತಿ ಎಂಬ ವಿಚಾರದ ಕುರಿತು ಮಾತನಾಡಿದರು. ಕಾರ್ಯಕ್ರಮ ಉದ್ಘಾಟಿಸಿದ ಹಾಗೂ ಅಧ್ಯಕ್ಷತೆಯನ್ನು ವಹಿಸಿದ್ದ ಸೈಂಟ್ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಮದಲೈಮುತ್ತು ಮಾತನಾಡಿ, ಯುವಶಕ್ತಿಯಲ್ಲಿ ಈಗಾಗಲೇ ಹುದುಗಿರುವ ಚೈತನ್ಯ ಶಕ್ತಿಯನ್ನು ಹೊರತರುವಲ್ಲಿ ಶಿಕ್ಷಣದ ಪಾತ್ರ ಅಪಾರವೆಂದು ಸ್ವಾಮಿ ವಿವೇಕಾನಂದರು ತಿಳಿಸಿದ್ದಾರೆ. ರಾಷ್ಟçದ ಬಗೆಗಿನ ಅವರ ಕಳಕಳಿ ಹಾಗೂ ದೃಷ್ಠಿಕೋನ ಇವತ್ತಿಗೂ ಪ್ರಸ್ತುತವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಯುವ ದಿನದ ಪ್ರತಿಜ್ಞಾವಿಧಿ ಬೋಧಿಸಿದ ಸೈಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ರೆ.ಫಾ. ರೋನಿ ರವಿಕುಮಾರ್ ಜೀವನದಲ್ಲಿ ಧೈರ್ಯದ ಮಹತ್ವದ ಬಗ್ಗೆ ಸ್ವಾಮಿ ವಿವೇಕಾನಂದರ ಜೀವನದಲ್ಲಿ ನಡೆದ ಸ್ಫೂರ್ತಿದಾಯಕ ಘಟನೆಗಳ ಹಿನ್ನೆಲೆಯಲ್ಲಿ ವಿವರಿಸಿದರು.

ಎನ್‌ಎಸ್‌ಎಸ್ ಘಟಕದ ಪ್ರತೀ ತಂಡಗಳಿAದ ಪ್ರತಿನಿಧಿಸಲ್ಪಟ್ಟ ಸ್ವಯಂ ಸೇವಾ ವಿದ್ಯಾರ್ಥಿಗಳಾದ ಕಿಲನ್ ನಾಚಪ್ಪ, ಆಯುಶ್ ಕುಟ್ಟಯ್ಯ, ತುಷಾಲಿ, ಸಹನ, ಉತ್ತಯ್ಯ ಕೆ.ಎಸ್, ವೀಣಾ ಸ್ವಾಮಿ ವಿವೇಕಾನಂದರ ಬಗ್ಗೆ ಭಾಷಣಗಳನ್ನು ಮಾಡಿದರು. ಕಾಲೇಜಿನ ಎನ್‌ಎಸ್‌ಎಸ್ ಘಟಕದ ಕಾರ್ಯಕ್ರಮಾಧಿಕಾರಿಗಳಾದ ಅರ್ಜುನ್ ಹೆಚ್.ಆರ್. ರವರು ಯುವದಿನ ಹಾಗೂ ಯುವ ಸಪ್ತಾಹದ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಐಕ್ಯೂಎಸಿ ಸಂಯೋಜನಾಧಿಕಾರಿ ತೃಪ್ತಿ ಬೋಪಣ್ಣ, ಕಾಲೇಜಿನ ವಿದ್ಯಾರ್ಥಿ ಸಂಘದ ಸಂಚಾಲಕ ದೃಶ್ಯ ಅವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ನೆರವೇರಿಸಲಾಯಿತು.

ಎನ್‌ಎಸ್‌ಎಸ್ ಘಟಕದ ವಿವೇಚನಾ ತಂಡದ ಸ್ನೇಹ ನಿರೂಪಣೆಯನ್ನು, ಕಾವ್ಯ ಸ್ವಾಗತವನ್ನು, ಸರೋಲಿನ್ ಡಿಸೋಜ ವಂದನಾರ್ಪಣೆಯನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಘಟಕದ ಎಲ್ಲಾ ಸ್ವಯಂಸೇವಾ ವಿದ್ಯಾರ್ಥಿಗಳು, ವಿದ್ಯಾರ್ಥಿ ಸಂಘದ ವಿದ್ಯಾರ್ಥಿಗಳು ಭಾಗವಹಿಸಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ರಾಷ್ಟಿçಯ ಭಾವೈಕ್ಯತಾ ಗೀತೆಯೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.ಪೊನ್ನAಪೇಟೆ: ಇಲ್ಲಿನ ಕಾವೇರಿ ಪದವಿ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾ ಘಟಕದ ವತಿಯಿಂದ ವಿವೇಕಾನಂದ ಜನ್ಮ ದಿನಾಚರಣೆಯ ಅಂಗವಾಗಿ ರಾಷ್ಟಿçÃಯ ಯುವದಿನ ಆಚರಿಸಲಾಯಿತು. ಪ್ರಾಂಶುಪಾಲ ಪ್ರೊ. ಎಂ.ಬಿ. ಕಾವೇರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಮಾಜ ಸೇವಕ ಕೆ. ಚೆಟ್ಟಳ್ಳಿ ಅಂಚೆ ಕಚೇರಿ ನೌಕರ ಮೋಹನ್‌ಕುಮಾರ್ ಮಾತನಾಡಿ, ಯುವ ಜನತೆ ವಿದ್ಯಾರ್ಥಿ ದಿಸೆಯಲ್ಲಿಯೇ ಉತ್ತಮ ಚಾರಿತ್ರವನ್ನು ಮೈಗೂಡಿಸಿಕೊಂಡು ಭ್ರಷ್ಟಾಚಾರ ರಹಿತ ದೇಶಕಟ್ಟುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ದುಶ್ಚಟಗಳಿಂದ ದೂರವಿದ್ದು ಉತ್ತಮ ಗುರಿಯೊಂದಿಗೆ ಮುನ್ನುಗ್ಗಬೇಕು ಎಂದರು. ಪ್ರೊ. ಎಂ.ಬಿ. ಕಾವೇರಪ್ಪ ಮಾತನಾಡಿ, ಭಾರತವನ್ನು ಹಾವಾಡಿಗರ ದೇಶವೆಂದು ಅಣಕಿಸುತ್ತಿದ್ದ ವಿದೇಶಿಯರಿಗೆ ಭಾರತದ ಭವ್ಯ ಸಂಸ್ಕೃತಿಯನ್ನು ಪರಿಚಯಿಸಿದ ಧೀಮಂತ ವ್ಯಕ್ತಿ ಸ್ವಾಮಿ ವಿವೇಕಾನಂದರು. ಅವರ ಆದರ್ಶ ಹಾಗೂ ನಡೆ, ನುಡಿ ಇಂದಿನ ಯುವಜನತೆಗೆ ಸ್ಫೂರ್ತಿಯಾಗಬೇಕು ಎಂದರು. ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಪ್ರೊ. ಎಂ.ಎಸ್. ಭಾರತಿ, ರಾಷ್ಟಿçÃಯ ಸೇವಾ ಯೋಜನಾಧಿಕಾರಿಗಳಾದ ಎಂ.ಎನ್. ವನಿತ್‌ಕುಮಾರ್, ಎನ್.ಪಿ. ರೀತಾ ಹಾಗೂ ಸ್ವಯಂಸೇವಕರು ಹಾಜರಿದ್ದರು. ಪ್ರಮೀಳ ಪ್ರಾರ್ಥಿಸಿ, ಜಯಶ್ರೀ ಸ್ವಾಗತಿಸಿದರು, ಲಿಪಿಕ ವಂದಿಸಿದರೆ, ಲಕ್ಷ ಮತ್ತು ವಸುಂಧರ ಭಾರ್ಗವ್ ನಿರೂಪಿಸಿದರು.ಮುಳ್ಳೂರು: ವಿದ್ಯಾರ್ಥಿ ಮತ್ತು ಯುವ ಸಮೂಹ ಸ್ವಾಮಿ ವಿವೇಕಾನಂದರ ಆದರ್ಶ ತತ್ವ-ಸಿದ್ಧಾಂತಗಳನ್ನು ತಮ್ಮಲ್ಲಿ ಅಳವಡಿಸಿಕೊಂಡು ಪಾಲನೆ ಮಾಡುವ ಮೂಲಕ ಸಮಾಜ ಮತ್ತು ರಾಷ್ಟçವನ್ನು ಬಲಿಷ್ಟಗೊಳಿಸಿರಿ ಎಂದು ಕೊಡ್ಲಿಪೇಟೆ ಹಲಸಿನಮರ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎಂ.ಆರ್. ನಿರಂಜನ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ವಿದ್ಯಾಸಂಸ್ಥೆ ವತಿಯಿಂದ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಹಾಗೂ ರಾಷ್ಟಿçÃಯ ಯುವ ದಿನ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಲೇಜು ಉಪನ್ಯಾಸಕ ಅಭಿಲಾಷ್ ರಾಷ್ಟಿçÃಯ ಯುವ ದಿನ ಮಹತ್ವದ ಕುರಿತು ಮಾತನಾಡಿದರು ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಕೆ.ಹೆಚ್. ಯೋಗೇಂದ್ರ, ಯೋಗೀತ ಸಂತೋಷ್ ಹಾಜರಿದ್ದರು.ಕೂಡಿಗೆ: ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ರಾಷ್ಟಿçÃಯ ಯುವ ಸಪ್ತಾಹ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ಪ್ರಾಂಶುಪಾಲೆ ಡಾ. ಶಾಂತಾ ಲಕ್ಷ್ಮಿ ಉದ್ಘಾಟಿಸಿ, ಮಾತನಾಡಿ, ಸ್ವಾಮಿ ವಿವೇಕಾನಂದರ ಆದರ್ಶ, ತತ್ವ, ಸಿದ್ಧಾಂತಗಳು ಇಂದಿನ ಯುವ ಪೀಳಿಗೆಗೆ ದಾರಿದೀಪವಾಗಿದೆ. ಅವರ ಆದರ್ಶ ತತ್ವಗಳನ್ನು ಪಾಲಿಸುವಂತೆ ಕರೆ ನೀಡಿದರು.

ರಮೇಶ್ ಚಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಹೆಚ್.ಬಿ. ಲಿಂಗಮೂರ್ತಿ ವಹಿಸಿ ಮಾತನಾಡಿದರು. ವಿದ್ಯಾರ್ಥಿ ಪ್ರಶಾಂತ್ ಸ್ವಾಗತಿಸಿ, ಡಾ. ರಶ್ಮಿ ವಿವೇಕಾನಂದರ ಗೀತೆಯನ್ನು ಹಾಡಿದರು. ಕನ್ನಡ ಪ್ರಾಧ್ಯಾಪಕ ಡಾ. ಸುನಿಲ್‌ಕುಮಾರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.ಶನಿವಾರಸAತೆ: ಪಟ್ಟಣದ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ೧೫೯ನೇ ಜನ್ಮದಿನ ಹಾಗೂ ೨೫ನೇ ರಾಷ್ಟಿçÃಯ ಯುವದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಪ್ರಾಂಶುಪಾಲೆ ಹಾಗೂ ಸಂಸ್ಥೆ ಅಧ್ಯಕ್ಷೆ ಡಿ. ಸುಜಲಾದೇವಿ ಮಾತನಾಡಿ, ಇಂದಿನ ಯುವಜನತೆ ದಾರ್ಶನಿಕ ವ್ಯಕ್ತಿ ಸ್ವಾಮಿ ವಿವೇಕಾನಂದರ ಧೈರ್ಯ, ದೇಶಭಕ್ತಿ, ಉದಾತ್ತ ಗುಣಗಳನ್ನು ರೂಢಿಸಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ಅವರು ಅಂದು ನುಡಿದ ‘ಏಳಿ, ಎದ್ದೇಳಿ, ಎಚ್ಚರಗೊಳ್ಳಿ ಗುರಿ ತಲುಪುವವರೆಗೂ ನಿಲ್ಲದಿರಿ’ ಎಂಬ ಮಾತು ಸರ್ವಕಾಲಕ್ಕೂ ಅನ್ವಯವಾಗಲಿದ್ದು, ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಮಹತ್ವ ಪಡೆಯುತ್ತಿದೆ ಎಂದರು. ಆಡಳಿತ ಮಂಡಳಿ ಪದಾಧಿಕಾರಿಗು, ಶಿಕ್ಷಕರು ಹಾಜರಿದ್ದರು.ಗೋಣಿಕೊಪ್ಪ: ಗೋಣಿಕೊಪ್ಪಲಿನ ಕೂರ್ಗ್ ಪಬ್ಲಿಕ್ ಶಾಲೆ, ಕೂರ್ಗ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಜಯಂತಿಯನ್ನು ಆಚರಿಸಲಾಯಿತು. ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿ ಧನುಷ್, ಆಯುಷ್ ಕಾರ್ಯಪ್ಪ ವಿವೇಕಾನಂದರ ಕುರಿತು ಮಾತುಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಪ್ರಾಂಶುಪಾಲ ಡಾ. ಬೆನ್ನಿ ಕುರಿಯಕೋಸ್ ಮಾತನಾಡಿದರು.ಪೊನ್ನಂಪೇಟೆ: ಗೋಣಿಕೊಪ್ಪಲು ಕಾವೇರಿ ಪದವಿಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಅಂಗವಾಗಿ ರಾಷ್ಟಿçÃಯ ಯುವ ದಿನ ಆಚರಿಸಲಾಯಿತು.

ಈ ಸಂದರ್ಭ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಪ್ರಾಂಶುಪಾಲ ಎಸ್.ಎಸ್. ಮಾದಯ್ಯ, ಇಂದಿನ ಯುವ ಜನತೆ ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆಯನ್ನು ಓದುವ ಮೂಲಕ ದೇಶ ಪ್ರೇಮವನ್ನು ಮೈಗೂಡಿಸಿಕೊಂಡು, ಅವರ ಆದರ್ಶಗಳನ್ನು ಬದುಕಿಗೆ ಅಳವಡಿಸಿಕೊಳ್ಳಬೇಕು. ಬಿಡುವಿನ ಸಮಯವನ್ನು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ದುಶ್ಚಟಗಳಿಂದ ದೂರವಿರಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಈ ಸಂದರ್ಭ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆ ಪುಸ್ತಕಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಅಧಿಕಾರಿ ಕುಸುಮ್, ಉಪನ್ಯಾಸಕರಾದ ಎಸ್.ಆರ್. ತಿರುಮಲಯ್ಯ, ದಿವ್ಯ, ವಿಪ್ರ ನೀಲಮ್ಮ ಹಾಗೂ ಎನ್‌ಎಸ್‌ಎಸ್ ಸ್ವಯಂಸೇವಕರು ಇದ್ದರು.ಪೊನ್ನಂಪೇಟೆ: ಗೋಣಿಕೊಪ್ಪಲು ಕಾವೇರಿ ಪದವಿಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಅಂಗವಾಗಿ ರಾಷ್ಟಿçÃಯ ಯುವ ದಿನ ಆಚರಿಸಲಾಯಿತು.

ಈ ಸಂದರ್ಭ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಪ್ರಾಂಶುಪಾಲ ಎಸ್.ಎಸ್. ಮಾದಯ್ಯ, ಇಂದಿನ ಯುವ ಜನತೆ ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆಯನ್ನು ಓದುವ ಮೂಲಕ ದೇಶ ಪ್ರೇಮವನ್ನು ಮೈಗೂಡಿಸಿಕೊಂಡು, ಅವರ ಆದರ್ಶಗಳನ್ನು ಬದುಕಿಗೆ ಅಳವಡಿಸಿಕೊಳ್ಳಬೇಕು. ಬಿಡುವಿನ ಸಮಯವನ್ನು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ದುಶ್ಚಟಗಳಿಂದ ದೂರವಿರಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಈ ಸಂದರ್ಭ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆ ಪುಸ್ತಕಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಅಧಿಕಾರಿ ಕುಸುಮ್, ಉಪನ್ಯಾಸಕರಾದ ಎಸ್.ಆರ್. ತಿರುಮಲಯ್ಯ, ದಿವ್ಯ, ವಿಪ್ರ ನೀಲಮ್ಮ ಹಾಗೂ ಎನ್‌ಎಸ್‌ಎಸ್ ಸ್ವಯಂಸೇವಕರು ಇದ್ದರು.ಮಡಿಕೇರಿ: ಸ್ವಾಮಿ ವಿವೇಕಾನಂದರ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಜಿಲ್ಲಾ ಮರಾಠ-ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಎಂ.ಎA. ಪರಮೇಶ್ವರ್ ಕಿವಿಮಾತು ಹೇಳಿದರು.

ನೆಹರು ಯುವಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿ¯್ಲÁ ಯುವ ಒಕ್ಕೂಟ, ಕೊಡಗು ಜಿ¯್ಲÁ ಅಂಭಾಭವಾನಿ ಯುವಕ-ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸಂಘದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ‘ಭಾಗವಹಿಸುವ ದಿನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇಂದಿನ ಯುವಜನತೆ ಸ್ವಾಮಿ ವಿವೇಕಾನಂದರ ಮಾರ್ಗ, ಧೈರ್ಯ, ದೇಶಭಕ್ತಿ, ಉದಾತ್ತ ಗುಣಗಳನ್ನು ರೂಢಿಸಿಕೊಳ್ಳುವ ಅವಶ್ಯಕತೆ ಇದೆ. ಇಂದು ಯುವಜನತೆಯಲ್ಲಿ ದೇಶ ಪ್ರೇಮದ ಭಾವನೆ ಕಡಿಮೆಯಾಗುತ್ತಿದೆ. ಸ್ವಾಮಿ ವಿವೇಕಾನಂದರು ಯುವ ಜನರಿಗೆ ಒಂದು ರೀತಿಯ ಶಕ್ತಿ. ಸ್ವಾಮಿ ವಿವೇಕಾನಂದರ ನಿಲುವುಗಳು ಸಾರ್ವಕಾಲಕ್ಕೂ ಪ್ರಸ್ತುತವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಅವರ ಆದರ್ಶಗಳನ್ನು ತಿಳಿಸಿಕೊಳ್ಳುವುದರ ಮೂಲಕ ಮೈಗೂಡಿಸಿಕೊಳ್ಳಬೇಕೆಂದರು. ಸಂಘದ ಉಪಾಧ್ಯಕ್ಷೆ ದೇವಕ್ಕಿ ಜಿ.ಆರ್. ನಾಯ್ಕï ಮಾತನಾಡಿ, ಭಾರತೀಯ ಸಂಸ್ಕೃತಿ ಬಿಟ್ಟು ವಿದೇಶಿ ಸಂಸ್ಕೃತಿಗೆ ಮಾರು ಹೋಗುತ್ತಿರುವ ಯುವಜನತೆ ಹಾಗೂ ಆಹಾರ ತೊಡುಗೆ ವಿಹಾರ ಬದುಕು ಎಲ್ಲವನ್ನೂ ಮತ್ತಷ್ಟು ಉತ್ತಮಗೊಳಿಸಿಕೊಳ್ಳಬೇಕಿದೆ. ಯುವ ಜನರು ಸ್ವಾಮಿ ವಿವೇಕಾನಂದರ ಪುಸ್ತಕಗಳನ್ನು ಅಧ್ಯಯನ ಮಾಡಬೇಕು. ಇದರಿಂದ ಉತ್ತಮ ಜೀವನ ರೂಪಿಸಿಕೊಳ್ಳಬಹುದು ಎಂದರು. ಈ ಸಂದರ್ಭ ಏರ್ಪಡಿಸಲಾಗಿದ್ದ ಆಶುಭಾಷಣ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಥಾಪಕ ಅಧ್ಯP್ಷÀ ವಾಮನ ನಾಯ್ಕ್, ಸಂಘದ ಕಾರ್ಯದರ್ಶಿ ಎಂ.ಟಿ. ಪವನ್, ಯುವಕ ಸಂಘದ ಅಧ್ಯಕ್ಷ ಎಂ.ಆರ್. ಮೋಹನ್, ಪ್ರಮುಖರಾದ ಪೂವಪ್ಪ, ಎಂ.ಟಿ. ಗುರುವಪ್ಪ, ಎಂ.ಟಿ. ದೇವಪ್ಪ, ಎಂ.ಎಸ್. ಯೋಗೇಂದ್ರ, ರತ್ನಮಂಜರಿ ಹಾಗೂ ಯುವಕ ಸಂಘದ ಪದಾಧಿಕಾರಿಗಳು ಇದ್ದರು.