ನಾಪೋಕ್ಲು, ಜ. ೧೪: ಕಾಫಿ ತೋಟಗಳಲ್ಲಿ ಕೆಲಸ ನಿರ್ವಹಿಸಲು ವಿವಿಧೆಡೆಗಳಿಂದ ಕಾರ್ಮಿಕರು ಆಗಮಿಸುತ್ತಿದ್ದು ಕೋವಿಡ್ ಹರಡದಂತೆ ಕಾಫಿ ತೋಟಗಳ ಮಾಲೀಕರು ಸಹಕಾರ ನೀಡಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯ ಅರುಣ್‌ಬೇಬ ಅಭಿಪ್ರಾಯ ವ್ಯಕ್ತಪಡಿಸಿದರು. ಗ್ರಾಮಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೋವಿಡ್ ಕಾರ್ಯಪಡೆ ಗ್ರಾಮ ಸಭೆಯಲ್ಲಿ ಅವರು ಮಾತನಾಡಿದರು. ಸಂತೆಯ ದಿನವಾದ ಸೋಮವಾರ ಜನಜಂಗುಳಿ ತಪ್ಪಿಸಲು ಗ್ರಾಮ ಪಂಚಾಯಿತಿ ಕ್ರಮ ಕೈಗೊಳ್ಳುತ್ತಿದ್ದು ಈ ಬಗ್ಗೆ ಜನರು ಸಹಕರಿಸಬೇಕು. ನಡೆದ ಸಭೆಯಲ್ಲಿ ಉಪಾಧ್ಯಕ್ಷ ಮಹಮದ್ ಖುರೇಶಿ, ಪಿಡಿಒ ಚೋಂದಕ್ಕಿ, ಗ್ರಾ.ಪಂ. ಸದಸ್ಯರು, ಅಂಗನವಾಡಿ, ಆಶಾ ಕಾರ್ಯಕರ್ತೆ ಯರು, ಪೊಲೀಸ್ ಇಲಾಖೆಯ ಸಿಬ್ಬಂದಿ ಪಾಲ್ಗೊಂಡಿದ್ದರು.