ಮಡಿಕೇರಿ, ಜ. ೧೪: ಕೋವಿಡ್ ಸೋಂಕಿನ ಪ್ರಮಾಣ ಏರಿಕೆಯಾ ಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು-ಕೇರಳ ಗಡಿಗಳಲ್ಲಿ ಕಟ್ಟೆಚ್ಚರವಹಿಸಿ, ಹೋಂಕ್ವಾರAಟೈನ್ ನಲ್ಲಿರುವ ಸೋಂಕಿತರು ಹೊರಬಾರದಂತೆ ಬಿಗಿ ಕ್ರಮಕೈಗೊಳ್ಳಿ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಕೋವಿಡ್-೧೯ ನಿಯಂತ್ರಣ ಸಂಬAಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಅಂತರರಾಜ್ಯದಿAದ ಬರುವವರನ್ನು ಕಡ್ಡಾಯ ಕ್ವಾರಂಟೈನ್‌ಗೆ ಒಳಪಡಿಸಬೇಕು. ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿರುವವರನ್ನು ಕೂಡ ಕ್ವಾರಂಟೈನ್ ಮಾಡಬೇಕು. ‘ಟ್ರಾವೆಲ್ ಹಿಸ್ಟರಿ’ಯನ್ನು ಗಮನಿಸ ಬೇಕು. ಇದರಿಂದ ಸೋಂಕು ನಿಯಂತ್ರಿಸಬಹುದು ಎಂದು ನಿರ್ದೇಶಿಸಿದರು.

ಇದಕ್ಕೆ ಉತ್ತರಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೆಂಕಟೇಶ್, ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆಹಚ್ಚಬೇಕೆಂದು ಈಗಾಗಲೇ ಅಧಿಕಾರಿಗಳಿಗೆ ಸೂಚಿಸ ಲಾಗಿದೆ ಎಂದು ಉತ್ತರಿಸಿದರು.

ಪಿಂಡ ಪ್ರದಾನಕ್ಕೆ ಅವಕಾಶ

ಭಾಗಮಂಡಲದಲ್ಲಿ ಪಿಂಡ ಪ್ರದಾನಕ್ಕೆ ಷರತ್ತು ಬದ್ಧ ವಿನಾಯಿತಿ ಕಲ್ಪಿಸಲಾಗಿದೆ.

(ಮೊದಲ ಪುಟದಿಂದ) ಸಭೆಯಲ್ಲಿ ಈ ಬಗ್ಗೆ ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್ ಹಾಗೂ ಕೆ.ಜಿ. ಬೋಪಯ್ಯ ಪ್ರಸ್ತಾಪಿಸಿ ಅವಕಾಶ ನೀಡುವಂತೆ ಮನವಿ ಮಾಡಿದರು.

ಈ ಬಗ್ಗೆ ಚರ್ಚಿಸಿ ಬೆಳಿಗ್ಗೆ ೭ ಗಂಟೆಯಿAದ ೧೨ ಗಂಟೆಯ ತನಕ ಗರಿಷ್ಟ ಕುಟುಂಬದ ೫ ಮಂದಿ ಆಗಮಿಸಿ ಪಿಂಡ ಪ್ರದಾನ ಮಾಡಬಹುದು. ಇದರೊಂದಿಗೆ ಶಾಂತಿಪೂಜೆ ಮಾಡಲು ಅವಕಾಶ ಕಲ್ಪಿಸಬಹುದು ಎಂದು ನಿರ್ಧಾರ ತೆಗೆದುಕೊಳ್ಳಲಾಯಿತು. ಕ್ಷೇತ್ರದಲ್ಲಿ ಸಾಮಾಜಿಕ ಅಂತರ, ಕಡ್ಡಾಯ ಮಾಸ್ಕ್ ಧರಿಸುವಿಕೆ ಮೇಲೆ ಕಣ್ಣಿಟ್ಟಿರಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಯಿತು.

ಶಬರಿಮಲೆ ಯಾತ್ರ‍್ರಾರ್ಥಿಗಳ ಮೇಲೆ ನಿಗಾವಿಡಿ

ಶಬರಿಮಲೆಗೆ ತೆರಳಿ ಜಿಲ್ಲೆಗೆ ಪ್ರವೇಶಿಸುವ ಯಾತ್ರ‍್ರಾರ್ಥಿಗಳನ್ನು ಕ್ವಾರಂಟೈನ್ ಮಾಡಬೇಕಾಗಿದೆ ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಗಮನ ಸೆಳೆದರು.

ಗಡಿಗಳಲ್ಲಿ ವಾಹನ ತಡೆದು ಯಾತ್ರಾರ್ಥಿಗಳನ್ನು ರ‍್ಯಾಪಿಡ್ ಆ್ಯಂಟಿಜನ್ ಪರೀಕ್ಷೆಗೆ ಒಳಪಡಿಸಿ ಪಾಸಿಟಿವ್ ಬಂದಲ್ಲಿ ತುರ್ತು ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರಕರಣ ಹೆಚ್ಚಾಗುವ ಸಾಧ್ಯತೆ - ಶಾಲೆ ಬಂದ್.?

ಕೊಡಗು ಜಿಲ್ಲೆಯಲ್ಲಿ ಮುಂದಿನ ವಾರದಿಂದ ಕೋವಿಡ್ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಬಿ.ಸಿ. ಸತೀಶ ಅವರು ಮುನ್ಸೂಚನೆ ನೀಡಿದರು.

ಮುಂಜಾಗ್ರತ ಕ್ರಮವಾಗಿ ಕೋವಿಡ್ ಕೇರ್ ಸೆಂಟರ್‌ಗಳಿಗೆ ಸೂಕ್ತ ಜಾಗವನ್ನು ಗುರುತಿಸಲಾಗಿದೆ. ಅಕಸ್ಮಾತ್ ಹೆಚ್ಚು ಪ್ರಕರಣ ಬಂದು ಕೇಂದ್ರಕ್ಕೆ ದಾಖಲಿಸಬೇಕಾದಲ್ಲಿ ವಸತಿ ನಿಲಯಗಳನ್ನು ಸುಪರ್ಧಿಗೆ ತೆಗೆದುಕೊಳ್ಳಲಾಗುವುದು ಎಂದರು. ಇದಕ್ಕೆ ಶಾಸಕ ಬೋಪಯ್ಯ ಆಕ್ಷೇಪ ವ್ಯಕ್ತಪಡಿಸಿದರು. ವಿದ್ಯಾರ್ಥಿ ನಿಲಯಗಳನ್ನು ಕೇರ್ ಸೆಂಟರ್ ಆಗಿ ಮಾಡಿದರೆ ಮಕ್ಕಳಿಗೆ ಸಮಸ್ಯೆಯಾಗುತ್ತದೆ ಎಂದಾಗ, ಆ ರೀತಿ ಆದಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗುವುದು ಎಂದರು.

ಕಾರ್ಯಪಡೆಗಳನ್ನು ಚುರುಕುಗೊಳಿಸಿ

ಗ್ರಾಮ ಮಟ್ಟದಲ್ಲಿರುವ ಕಾರ್ಯಪಡೆಗಳನ್ನು ಚುರುಕುಗೊಳಿಸುವಂತೆ ಸಚಿವ ಶ್ರೀನಿವಾಸ ಪೂಜಾರಿ ಹೇಳಿದರು. ಸ್ಥಳೀಯ ಮಟ್ಟದಲ್ಲಿ ಸೋಂಕಿನ ನಿಯಂತ್ರಣಕ್ಕೆ ಕಾರ್ಯಪಡೆಯ ಸಹಕಾರ ಬೇಕಾಗಿದೆ. ಈ ಹಿನ್ನೆಲೆ ಸೋಮವಾರ ಸಭೆ ನಡೆಸಿ ಅವರಿಂದ ಬೇಕಾಗುವ ನೆರವು ಪಡೆದುಕೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದರು.

ವಿಧಾನ ಪರಿಷತ್ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ, ಕೋವಿಡ್ ೨ ಡೋಸ್ ಲಸಿಕೆ ಪಡೆದರು ಕೊರೊನಾ ಸೋಂಕಿಗೆ ತುತ್ತಾದವರ ಬಗ್ಗೆ ಮಾಹಿತಿ ಬಯಸಿದರು. ಇದಕ್ಕೆ ಉತ್ತರಿಸಿದ ಡಿಹೆಚ್‌ಓ, ೨ ಡೋಸ್ ಪಡೆದವರಿಗೂ ಸೋಂಕು ಪತ್ತೆಯಾಗಿದೆ ಎಂದರು.

ಮೆಡಿಕಲ್ ಕಾಲೇಜಿನಲ್ಲಿ ದಾಖಲಾಗಿರುವ ಕೋವಿಡ್ ಸೋಂಕಿತರ ಸ್ಥಿತಿ ಹೇಗಿದೆ ಎಂದು ವೀಣಾ ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿ ಕಾಲೇಜಿನ ಮುಖ್ಯಸ್ಥ ಡಾ.ಮಂಜುನಾಥ್, ಎಲ್ಲರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಇಬ್ಬರು ಐಸಿಯುನಲ್ಲಿದ್ದಾರೆ ಎಂದು ಮಾಹಿತಿ ನೀಡಿದರು.

ಅಧಿಕಾರಿಗಳಿಗೆ ತರಾಟೆ

ಸಭೆಗೆ ಸರಿಯಾಗಿ ತಯಾರಾಗಿ ಬಾರದ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಇಲಾಖೆಯ ಉಪನಿರ್ದೇಶಕರಿಗೆ ಸಚಿವರು ತರಾಟೆಗೆ ತೆಗೆದುಕೊಂಡರು.

ಶಾಲಾ-ಕಾಲೇಜಿನಲ್ಲಿ ನಡೆದ ಲಸಿಕಾಕರಣದ ಬಗ್ಗೆ ಮಾಹಿತಿ ಬಯಸಿದಾಗ, ಸಮರ್ಪಕ ಮಾಹಿತಿ ದೊರಕದ ಹಿನ್ನೆಲೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾ ಮಟ್ಟದ ಸಭೆ ಮಾಹಿತಿ ಇಲ್ಲದೆ ಬಂದ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಶಾಸಕರುಗಳು ಕೂಡ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಅಧಿಕಾರಿಗಳನ್ನು ಸೂಕ್ತ ಮಾಹಿತಿ ತರುವಂತೆ ಹೊರ ಕಳುಹಿಸಲಾಯಿತು. ನಂತರ ಸಭೆಗೆ ಲಸಿಕಾರಣದ ಬಗ್ಗೆ ಮಾಹಿತಿ ಒದಗಿಸಿದರು.

ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, ಮಕ್ಕಳಿಗೆ ಲಸಿಕಾಕರಣ ತ್ವರಿತವಾಗಿ ಮುಗಿಸಿ. ಶಾಲೆಯಿಂದ ಹೊರ ಉಳಿದವರನ್ನು ಗುರುತಿಸಿ ಲಸಿಕೆ ನೀಡಿ ಎಂದು ಸೂಚಿಸಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ, ಪಶ್ಚಿಮ ಘಟ್ಟ ಅರಣ್ಯ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ, ಮಡಿಕೇರಿ ನಗರಸಭಾ ಸದಸ್ಯೆ ಅನಿತಾ ಪೂವಯ್ಯ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಮೇಶ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭನ್ವರ್ ಸಿಂಗ್ ಮೀನಾ ಹಾಜರಿದ್ದರು.