ಬೆಂಗಳೂರು, ಜ. ೧೪: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊAಡು ಹೋರಾಟಕ್ಕಿಳಿದಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಸಂಕ್ರಾAತಿ ಗಿಫ್ಟ್ ಪ್ರಕಟಿಸಿದೆ. ದುಪ್ಪಟ್ಟು ವೇತನ ಹೆಚ್ಚಳ ಮಾಡಲಾಗಿದ್ದು, ಸೆಮಿಸ್ಟರ್-ವಾರು ನೇಮಕಾತಿ ನಿಲ್ಲಿಸಿ ಇನ್ನು ಮುಂದೆ ಇಡೀ ಶೈಕ್ಷಣಿಕ ವರ್ಷಕ್ಕೆ ನೇಮಿಸಿಕೊಳ್ಳುವುದಾಗಿ ಘೋಷಿಸಿದೆ. ಸರ್ಕಾರದ ಪರವಾಗಿ ವಿಧಾನಸೌಧದಲ್ಲಿ ಶುಕ್ರವಾರ ಈ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಯುಜಿಸಿ ನಿಗದಿತ ಶೈಕ್ಷಣಿಕ ಅರ್ಹತೆ ಇದ್ದು, ೫ ವರ್ಷ ಮತ್ತು ಅದಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಸಕರು ಇನ್ನು ಮುಂದೆ ಮಾಸಿಕ ರೂ. ೩೨ ಸಾವಿರ ಇದಕ್ಕಿಂತ ಕಡಿಮೆ ಕಾಲ ಸೇವೆ ಸಲ್ಲಿಸಿರುವವರು ಮಾಸಿಕ ರೂ. ೩೦ ಸಾವಿರ ಗೌರವ ಧನ ಪಡೆಯಲಿದ್ದಾರೆ ಎಂದು ತಿಳಿಸಿದರು. ೫ ವರ್ಷಕ್ಕಿಂತ ಹೆಚ್ಚಿನ ಅವಧಿ ಸೇವೆ ಸಲ್ಲಿಸಿದ್ದರೂ ಯುಜಿಸಿ ನಿಗದಿಪಡಿಸಿದ ಅರ್ಹತೆ ಇಲ್ಲದೆ ಇರುವವರ ವೇತನವನ್ನು ರೂ. ೨೮ ಸಾವಿರಕ್ಕೆ ಹೆಚ್ಚಿಸಲಾಗಿದೆ. ಅತಿಥಿ ಉಪನ್ಯಾಸಕರ ಕಾರ್ಯಭಾರ ಅವಧಿ ೮ ರಿಂದ ೧೦ ಗಂಟೆ ಇದ್ದುದನ್ನು ೧೫ ಗಂಟೆಗಳಿಗೆ ಹೆಚ್ಚಿಸಲಾಗಿದೆ ಎಂದು ಅವರು ಹೇಳಿದರು.