ಚೆಯ್ಯಂಡಾಣೆ, ಜ. ೧೪: ನಾಪೋಕ್ಲುವಿನ ರಾಫಲ್ಸ್ ಇಂಟರ್‌ನ್ಯಾಷನಲ್ ಪದವಿಪೂರ್ವ ಕಾಲೇಜಿನಲ್ಲಿ ಮೂರ್ನಾಡು ಹಾಗೂ ನಾಪೋಕ್ಲು ಕ್ಲಸ್ಟರ್ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಾಲಿಬಾಲ್ ಹಾಗೂ ಥ್ರೋಬಾಲ್ ಪಂದ್ಯಾವಳಿಯನ್ನು ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅಂರ‍್ರಾಷ್ಟಿçÃಯ ಸ್ಕೇಟಿಂಗ್ ಕ್ರೀಡಾಪಟು ಜಗದೀಶ್ ಪಳಂಗಪ್ಪ ಅವರು ಎಲ್ಲ ಕ್ರೀಡೆಗಳಿಗೂ ಸಮಾನ ಪ್ರಾಮುಖ್ಯತೆ ನೀಡಿದರೆ ಮಾತ್ರ ವಿದ್ಯಾರ್ಥಿಗಳಲ್ಲಿ ಕ್ರೀಡೆಯ ಮೇಲಿನ ಭಾರತದಲ್ಲಿ ಕ್ರಿಕೆಟಿಗೆ ನೀಡುವಷ್ಟು ಪ್ರಾಮುಖ್ಯತೆಯನ್ನು ಬೇರೆ ಯಾವುದೇ ಕ್ರೀಡೆಗೆ ನೀಡದಿರುವುದು ವಿಷಾಧನೀಯ ಎಂದರು.

ಐಪಿಎಲ್‌ನಲ್ಲಿ ಆಡುವ ಕ್ರಿಕೆಟ್ ಆಟಗಾರರನ್ನು ಗುರುತಿಸುವ ಜನರು ಅಂರ‍್ರಾಷ್ಟಿçÃಯ ಹಾಕಿ ಆಟಗಾರರನ್ನು ಗುರುತಿಸಲು ವಿಫಲರಾಗಿರುತ್ತಾರೆ. ಕ್ರೀಡೆ ಒಬ್ಬ ವಿದ್ಯಾರ್ಥಿಗೆ ಮಾನಸಿಕ ಹಾಗೂ ದೈಹಿಕ ಕ್ಷಮತೆಯನ್ನು ಹೆಚ್ಚಿಸಲು ಸಹಕಾರಿ ಆದ್ದರಿಂದ ಆಸಕ್ತಿ ಹೆಚ್ಚಿಸಲು ಸಾಧ್ಯ. ಪ್ರತಿಯೊಬ್ಬ ವಿದ್ಯಾರ್ಥಿಯು ಯಾವುದಾದರೊಂದು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.

ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಮೆಹಬೂಬ್ ಸಾಬ್, ಪ್ರಾಂಶುಪಾಲ ತನ್ವೀರ್ ಹಾಗೂ ಇತಿಹಾಸ ವಿಭಾಗದ ಮುಖ್ಯಸ್ಥೆ ರೇಖಾ ಕಿಶೋರ್ ಹಾಜರಿದ್ದರು.

ನಂತರ ನಡೆದ ವಾಲಿಬಾಲ್ ಪಂದ್ಯಾಟದಲ್ಲಿ ಎಮ್ಮೆಮಾಡು ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನವನ್ನು ಮೂರ್ನಾಡು ಜ್ಞಾನಜ್ಯೋತಿ ಪ್ರೌಢಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದರೆ ಥ್ರೋಬಾಲ್ ಪಂದ್ಯಾವಳಿಯಲ್ಲಿ ಎಮ್ಮೆಮಾಡು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಹಾಗೂ ನಾಪೋಕ್ಲುವಿನ ಶ್ರೀ ರಾಮ ಟ್ರಸ್ಟ್ ಪ್ರೌಢಶಾಲೆಯ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಗಳಿಸಿದರು.