ನಾಪೋಕ್ಲು, ಜ. ೧೪: ನಾಪೋಕ್ಲುವಿನ ಭಗವತಿ ದೇವಾಲಯದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಸದಸ್ಯರು ಹಾಗೂ ಸುಭಾಷ್‌ನಗರ ಕಾರ್ಯಕ್ಷೇತ್ರದ ಸದಸ್ಯರು ಇಲ್ಲಿನ ಭಗವತಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವಾಲಯದ ಆವರಣವನ್ನು ಶುಚಿಗೊಳಿಸಿದರು. ಈ ಸಂದರ್ಭ ಸಂಘದ ಪದಾಧಿಕಾರಿಗಳು ಹಾಗೂ ದೇವಾಲಯದ ಆಡಳಿತ ಮಂಡಳಿ ಸದಸ್ಯರು ಹಾಜರಿದ್ದರು.